
madhu bangarappa | ‘ಹೈಕಮಾಂಡ್ ನಿರ್ಧಾರಕ್ಕೆ ಬದ್ಧ’ – ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ (shivamogga), ನ. 30: ಸಚಿವ ಸಂಪುಟ ವಿಸ್ತರಣೆ, ಪುನಾರಾಚನೆ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ. ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲರು ಬದ್ಧರಾಗಿರುತ್ತವೆ ಎಂದು ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಶಿವಮೊಗ್ಗ ನಗರದ ಜಿಲ್ಲಾ ಪಂಚಾಯ್ತಿ ಕಚೇರಿ ಆವರಣದಲ್ಲಿ ನ. 30 ರ ಶನಿವಾರ ತಮ್ಮನ್ನು ಭೇಟಿಯಾದ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು. ಸಂಪುಟ ವಿಸ್ತರಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಗಳೆಲ್ಲ ಕೇವಲ ಮಾಧ್ಯಮಗಳ ಸೃಷ್ಟಿಯಾಗಿದೆ. ಈಗಾಗಲೇ ಪಕ್ಷದ ನಾಯಕರೇ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ರಾಜ್ಯದಲ್ಲಿ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಸ್ಥಾಪನೆಗೆ ಸಂಬಂಧಿಸಿದಂತೆ, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುದಾನ ಮೀಸಲಿರಿಸಿರುವುದು ಸ್ವಾಗತಾರ್ಹ ಸಂಗತಿಯಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುತ್ತೆನೆ. ಮುಂದಿನ ಮೂರು ವರ್ಷದಲ್ಲಿ 1 ಸಾವಿರ ಕೆಪಿಎಸ್ ಶಾಲೆಗಳು ನಿರ್ಮಾಣವಾಗಲಿವೆ ಎಂದು ತಿಳಿಸಿದ್ದಾರೆ.
ಕಾನೂನು ಕ್ರಮ : ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮನವಿ ಅರ್ಪಿಸಿರುವ ಬಗ್ಗೆ ಮಾತನಾಡಿದ ಸಚಿವರು, ‘ಯಾರ್ಯಾರು ಹಗುರವಾಗಿ ಏನೇನು ಮಾತನಾಡಿದ್ದಾರೆ ಎಂಬುವುದು ಗೊತ್ತಿದೆ. ಕಾನೂನು ಬದ್ದವಾಗಿ ಮಾತನಾಡಿಲ್ಲ. ಕಾನೂನು ರೀತಿಯಲ್ಲಿ ಕ್ರಮವಾಗಲಿದೆ’ ಎಂದು ತಿಳಿಸಿದ್ದಾರೆ.
The party high command will take a decision on cabinet expansion and reshuffle. Education Department Minister Madhu Bangarappa said that we will all be bound by the decision taken by the party.