Re-investigation of Dharmasthala sowjanya case: What did CM Siddaramaiah say? ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

bengaluru | ಚಂದ್ರಶೇಖರ ಸ್ವಾಮೀಜಿ ಮೇಲೆ ಎಫ್.ಐ.ಆರ್ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು (Bangalore), ಡಿ. 1: ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ  ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 

 ಅವರು ಇಂದು  ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. 

ನಾನು ಬಿಡಲಿಲ್ಲ : ಜೆ ಡಿ ಎಸ್  ಬಿಡುವಾಗ ಮಾಡಿದ್ದ ನಾಟಕವನ್ನೇ ಈಗ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಜೆಡಿಎಸ್ ನಿಂದ ನನ್ನನ್ನು ಉಚ್ಛಾಟಿಸಲಾಯಿತು. ನಾನು ಬಿಡಲಿಲ್ಲ ಎಂದರು. ಅವರು ಹೇಳಿದ್ದನ್ನು ಮಾಧ್ಯಮಗಳು ಹೇಳಿದ್ದಾದರೆ ಮಾಧ್ಯಮಗಳು ಏಕಿರಬೇಕು ಎಂದು ಸಿಎಂ ಖಾರವಾಗಿ ಮಾಧ್ಯಮದವರನ್ನು  ಪ್ರಶ್ನಿಸಿದರು. 

ಸಮಾವೇಶ : ನಾನು ಪಕ್ಷವನ್ನು ಬಿಡಲಿಲ್ಲ. ನನ್ನನ್ನು ದೇವೇಗೌಡರು ಉಚ್ಚಾಟಿಸಿದರು. ನಂತರ ನಾನು ಬೇರೆ ದಾರಿ  ಇಲ್ಲದೆ ಅಹಿಂದ ಸಮಾವೇಶ ನಡೆಸಿದೆ,  ಹಾಸನದಲ್ಲಿಯೂ ಸಮಾವೇಶ ಮಾಡಿದ್ದೆ .  ಈಗ ಇಡೀ ರಾಜ್ಯದ ಜನರಿಗೆ ಕೃತಜ್ಞತೆ ಹೇಳಲು ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಒಕ್ಕೂಟದಿಂದ ಸಮಾವೇಶ  ಏರ್ಪಡಿಸಲಾಗಿದೆ.  

ಕಾಂಗ್ರೆಸ್ ಪಕ್ಷ  ಮತ್ತು ಸ್ವಾಭಿಮಾನಿಗಳ ಜಂಟಿ ಆಶ್ರಯದಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು. ಇದಕ್ಕೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಲಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಆಹ್ವಾನಿಸಲಾಗಿದೆ . ಪಕ್ಷವು ಇದರಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದೆ ಎಂದರು.

ಜೆಡಿಎಸ್ ಪಕ್ಷ ವನ್ನು ಕಟ್ಟಿದವರು ನಾವು. ಜೆಡಿಎಸ್   ಈಗ ಜಾತ್ಯಾತೀತವಾಗಿ  ಉಳಿದಿದೆಯೇ ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಕೋಮುವಾದಿಗಳ ಜೊತೆಗೆ ಸೇರಿದ ಮೇಲೆ ಯಾವ ಸೆಕ್ಯುಲರ್ ಆಗಿದೆ ? ಸಂವಿಧಾನದಲ್ಲಿ ಜಾತ್ಯಾತೀತ, ಸಮಾಜವಾದಿ ಎಂದು ಸೇರ್ಪಡೆಯಾಗಿದೆ. ಸರ್ವೋಚ್ಚ ನ್ಯಾಯಾಲಯವೂ ಜಾತ್ಯಾತೀತ ಇರಲೇಬೇಕೆಂದು ಹೇಳಿದ್ದಾರೆ. ಜೆಡಿಎಸ್ ನವರಿಗೆ ಪಕ್ಷ ಯಾವ ಹಿನ್ನೆಲೆಯಲ್ಲಿ ಕಟ್ಟಲಾಗಿದೆ ಎಂದು ಗೊತ್ತಿಲ್ಲ. 

ಪಕ್ಷ ರಚನೆಗೊಂಡಾಗ  ಕುಮಾರಸ್ವಾಮಿ  ಇರಲಿಲ್ಲ . ನಾನು ದೇವೇಗೌಡ, ಇಬ್ರಾಹಿಂ, ಸತೀಶ್ ಜಾರಕಿಹೊಳಿ,  ಮಹದೇವಪ್ಪ, ವೆಂಕಟೇಶ್, ಲಕ್ಷ್ಮೀ ಸಾಗರ್ ಸೇರಿ ಆಗಿದ್ದು. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾದರು, ನಾನು ರಾಜ್ಯಾಧ್ಯಕ್ಷನಾದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

In Chandrasekhara Swamiji’s case, the police will do what they have to do in the eyes of the law. If it comes within the framework of law, action will be taken. Otherwise, Chief Minister Siddaramaiah said.

Fungal storm effect on Shimoga district too..! ಶಿವಮೊಗ್ಗ ಜಿಲ್ಲೆಯ ಮೇಲೂ ಫಂಗಲ್ ಚಂಡಮಾರುತ ಎಫೆಕ್ಟ್..! Previous post shimoga | ಶಿವಮೊಗ್ಗ ಜಿಲ್ಲೆಯ ಮೇಲೂ ಫೆಂಗಲ್ ಚಂಡಮಾರುತ ಎಫೆಕ್ಟ್..!
After Bangalore – Mysore and Hubballi special treatment facilities will also be available to patients at the Government Meggan Hospital in Shivamogga! ಬೆಂಗಳೂರು ಮೈಸೂರು ಹುಬ್ಬಳ್ಳಿ ನಂತರ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿಯೂ ರೋಗಿಗಳಿಗೆ ಲಭ್ಯವಾಗಲಿದೆ ವಿಶೇಷ ಚಿಕಿತ್ಸಾ ಸೌಲಭ್ಯ! Next post shimoga | ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೆಚ್ಚಾದ ಕಳ್ಳರ ಹಾವಳಿ..!