
shimoga rain | ಫಂಗಲ್ ಚಂಡಮಾರುತದಿಂದ ಮಳೆ : ಡಿಸೆಂಬರ್ 3 ಮಂಗಳವಾರ ಶಿವಮೊಗ್ಗ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ !
ಶಿವಮೊಗ್ಗ (shivamogga), ಡಿ. 3: ಫಂಗಲ್ ಚಂಡಮಾರುತದಿಂದ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ಡಿಸೆಂಬರ್ 3-12-2024 ರ ಮಂಗಳವಾರ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ‘ವಿದ್ಯಾರ್ಥಿಗಳ ಹಿತದೃಷ್ಟಿ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮದ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಅಂಗನವಾಡಿಗಳಿಗೆ ಡಿ. 3 ರಂದು ರಜೆ ಘೋಷಣೆ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಮಳೆ ಎಚ್ಚರಿಕೆ : ಫಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಡಿ. 3 ರಂದು ಆರೆಂಜ್ ಅಲರ್ಟ್ ಹಾಗೂ ಡಿ. 4 ರಂದು ಯೆಲ್ಲೋ ಅಲರ್ಟ್ ಮುನ್ಸೂಚನೆ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತ ಕ್ರಮವಾಗಿ ಡಿ. 3 ರಂದು ಜಿಲ್ಲೆಯ ಎಲ್ಲ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.
In view of the possibility of widespread rain due to Fungal storm, the district administration has issued an order declaring a holiday on Tuesday, December 3 for the schools and colleges of Shimoga district.