bellary maternal death case - Rs 5 Lakh Relief announcement - CM ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ : 5 ಲಕ್ಷ ರೂ. ಪರಿಹಾರ ಘೋಷಣೆ - ಸಿಎಂ

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ : 5 ಲಕ್ಷ ರೂ. ಪರಿಹಾರ ಘೋಷಣೆ – ಸಿಎಂ

ಸಂಡೂರು (ಬಳ್ಳಾರಿ), ಡಿ. 8: ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬದವರಿಗೆ, ಸರ್ಕಾರ ಘೋಷಿಸಿದ್ದ ಪರಿಹಾರದ ಮೊತ್ತವನ್ನು 5 ಲಕ್ಷ ರೂ.ಗೆ ಏರಿಸಿದೆ. ಈ ವಿಷಯವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಟೀಕಾಪ್ರಹಾರ : ಉಪ ಚುನಾವಣೆಯಲ್ಲಿ ಬಿಜೆಪಿಯ ಲೋಕಲ್ ಲೀಡರ್ ಗಳಿಂದ ಪ್ರಧಾನಿ ಮೋದಿಯವರರೆಗೂ ಸರಣಿ ಸುಳ್ಳು ಗಳನ್ನು ಹೇಳಿದರು. ನೀವು ಆರೋಪ ಸಾಬೀತಿಪಡಿಸಿ, ನಾನು ರಾಜಕೀಯ ನಿವೃತ್ತಿ ತಗೊತೀನಿ ಎಂದು ಮೋದಿಯವರಿಗೆ ಸವಾಲು ಹಾಕಿದ್ದೆ. ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದರು.

ನಾನು ಮೂರು ದಿನಗಳ ಕಾಲ ಸಂಡೂರಿನಲ್ಲಿ ಪ್ರಚಾರ ಮಾಡಿದೆ. ಈ ವೇಳೆ ತುಕಾರಾಮ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿದ್ದೇನೆ. ತುಕಾರಾಮ್ ಅವರಿಗೂ ಮೊದಲು ಸಂಡೂರು ಹೇಗಿತ್ತು ಎನ್ನುವುದೂ ನನಗೂ ಗೊತ್ತು. ಈಗ ತುಕಾರಾಮ್ ಅವರು ಒಳ್ಳೆ ಕೆಲಸಗಳನ್ನು ಮಾಡಿರುವುದನ್ನು ನಾನು ನೋಡಿದ್ದೇನೆ ಎಂದು ಹೇಳಿದರು.

ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಾಡಿನ ಜನತೆ ಎದುರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನೂ ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ನಮ್ಮ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಸಮರ್ಥ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡುವುದರ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದು ತಿಳಿಸಿದರು.

2014-2018 ರಲ್ಲಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಗಳನ್ನು ನೆನಪಿಸಿಕೊಳ್ಳಿ. ಅವುಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ ನೋಡಿ. ಮೋದಿಯವರು ನಿಮಗೆ ಈ ಮಟ್ಟದ ಮೋಸ ಮಾಡಿದ್ದಾರಲ್ಲಾ ಇದನ್ನು ಪ್ರಶ್ನಿಸಬೇಕಿದೆ ಎಂದರು.

ಮೋದಿ ಅಚ್ಚೆ ದಿನ್ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ, ವಿದೇಶದಿಂದ ಕಪ್ಪು ಹಣ ತರಲಿಲ್ಲ, ನಿಮ್ಮ ಖಾತೆಗೆ 15 ಲಕ್ಷ ಹಾಕಲಿಲ್ಲ. ಬರೀ ಭಾಷಣದಲ್ಲೇ  ಮೋದಿಯವರು ಎಲ್ಲಾ ಮುಗಿಸಿ ಹೋದರು ಎಂದು ವಿವರಿಸಿದರು.

ಬಳ್ಳಾರಿ ಜಿಲ್ಲೆಯ ಜನತೆಯನ್ನು ಭಯದಲ್ಲಿಟ್ಟು ರಿಪಬ್ಲಿಕ್ ಬಳ್ಳಾರಿ ಮಾಡಿದ್ದ ಜನಾರ್ದನರೆಡ್ಡಿಯವರಿಗೆ ಬಿಜೆಪಿ ಈ ಚುನಾವಣೆಯ ಉಸ್ತುವಾರಿ ವಹಿಸಿತ್ತು. ಆದರೆ, ಸಂಡೂರಿನ ಜನತೆ ರೆಡ್ಡಿಯವರ ಹಣಕ್ಕೆ, ಭಯಕ್ಕೆ, ಆಮಿಷಕ್ಕೆ, ಸುಳ್ಳುಗಳಿಗೆ, ಅಪಪ್ರಚಾರಕ್ಕೆ ಸೋಲಲಿಲ್ಲ. ಅನ್ನಪೂರ್ಣಮ್ಮ ಅವರನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿ ರಾಜಕಾರಣ ಮತ್ತು ಸತ್ಯದ ರಾಜಕಾರಣವನ್ನು ಗೆಲ್ಲಿಸಿದ್ದೀರಿ. ಇದು ಸಂಡೂರಿನ ಘನತೆಯನ್ನು ಹೆಚ್ಚಿಸಿದೆ ಎಂದು ಹೇಳಿದರು.

ಇವತ್ತಿನವರೆಗೂ ರಾಜ್ಯದಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ. ಕೇವಲ ಆಪರೇಷನ್ ಕಮಲದ ಮೂಲಕವೇ ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸಿದೆ. ಆಪರೇಷನ್ ಕಮಲಕ್ಕೆ ಬಳಸಿದ ಹಣ ಕೂಡ ಕಪ್ಪು ಹಣ ಅಲ್ಲವೇ ಎಂದು ಪ್ರಶ್ನಿಸಿದರು.

ಮೂರು ಉಪ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ದೊಡ್ಡ ಆಶೀರ್ವಾದ ಮಾಡಿದ್ದಾರೆ. ನನ್ನ ವಿರುದ್ಧ ಸುಳ್ಳು ಕೇಸು, ಸುಳ್ಳು ಆರೋಪಗಳ ಮೂಲಕ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ಬಿಜೆಪಿಗೆ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ. ನಿಮ್ಮ ಆಶೀರ್ವಾದ ಇರುವವರೆಗೂ ಈ ಸಿದ್ದರಾಮಯ್ಯ ಯಾವುದೇ ಷಡ್ಯಂತ್ರ, ಸುಳ್ಳು ಕೇಸುಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು.

ವಕ್ಫ್ ವಿಚಾರದಲ್ಲೂ ಬಿಜೆಪಿಯ ರಾಷ್ಟ್ರೀಯ ನಾಯಕರಿಂದ ಲೋಕಲ್ ಲೀಡರ್ ಗಳ ವರೆಗೂ ಎಲ್ಲರೂ ಸರಣಿ ಸುಳ್ಳು ಅಪಪ್ರಚಾರ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ಮಹಾರಾಷ್ಟ್ರ ಚುನಾವಣೆಯಲ್ಲಿ 700 ಕೋಟಿ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡಿದರು. ನಾನು ಪ್ರಧಾನಿಗೆ ಸವಾಲು ಹಾಕಿದೆ, ನಿಮ್ಮ ಆರೋಪ ಸಾಬೀತು ಮಾಡಿ. ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎನ್ನುವ ನನ್ನ ಸವಾಲು ಸ್ವೀಕರಿಸಲು ಪ್ರಧಾನಿ ಮೋದಿ ಧೈರ್ಯ ಮಾಡಲಿಲ್ಲ. ಅವರಿಗೆ ಸುಳ್ಳು ಹೇಳುವುದಕ್ಕೆ ಮಾತ್ರ ಧೈರ್ಯ ಬರುತ್ತದೆ ಎಂದು ವ್ಯಂಗ್ಯವಾಡಿದರು.

2 ಸಾವಿರ ಮನೆ : ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಸಂಡೂರು ಜನತೆಗೆ ಅಭಿನಂದಿಸಿ ಭಾಷಣ ಮಾಡುವ ವೇಳೆ, ಸಂಡೂರು ಕ್ಷೇತ್ರಕ್ಕೆ ವಸತಿ ಇಲಾಖೆಯಿಂದ ಹೆಚ್ಚುವರಿಯಾಗಿ 2000 ಮನೆಗಳನ್ನು ನೀಡುವುದಾಗಿ ಘೋಷಿಸಿದರು.

ಈಗಾಗಲೇ 2172 ಮನೆಗಳನ್ನು ನೀಡಲಾಗಿದೆ‌. ಸಂಡೂರಿನಲ್ಲಿ ಬಡವರು ಹೆಚ್ಚಾಗಿರುವುದರಿಂದ ಮತ್ತು ನಂಜುಂಡಪ್ಪ ಅವರ ವರದಿಯಲ್ಲಿ ಹಿಂದುಳಿದ ತಾಲ್ಲೂಕಿನ ಪಟ್ಟಿಯಲ್ಲಿ ಇರುವುದರಿಂದ ಹೆಚ್ಚುವರಿಯಾಗಿ 2000 ಮನೆಗಳನ್ನು ನೀಡಲಾಗುವುದು ಎಂದು ಘೋಷಿಸಿದರು.

‌bellary maternal death case – Rs 5 Lakh Relief announcement – CM #sandur, #sandur congress programme

Kumar Bangarappa tour in Soraba from December 9 : B Y Vijayendra Photoge out in the poster! ಡಿ. 9 ರಿಂದ ಸೊರಬದಲ್ಲಿ ಕುಮಾರ್ ಬಂಗಾರಪ್ಪ ಪ್ರವಾಸ : ಬಿ ವೈ ವಿಜಯೇಂದ್ರ ಪೋಟೋಗೆ ಕೊಕ್..! Previous post ಡಿ. 9 ರಿಂದ ಸೊರಬದಲ್ಲಿ ಕುಮಾರ್ ಬಂಗಾರಪ್ಪ ಪ್ರವಾಸ : ಬಿ ವೈ ವಿಜಯೇಂದ್ರ ಪೋಟೋಗೆ ಕೊಕ್..!
shimoga rain | Shivamogga | Heavy rain in Malnad even before the start of monsoon! shimoga rain | ಶಿವಮೊಗ್ಗ | ಮುಂಗಾರು ಆರಂಭಕ್ಕೂ ಮುನ್ನವೇ ಮಲೆನಾಡಲ್ಲಿ ಭರ್ಜರಿ ಮಳೆ! Next post shimoga rain | ಶಿವಮೊಗ್ಗ : ಮೋಡ ಕವಿದ ವಾತಾವರಣ – ತುಂತುರು ಮಳೆ!