ಜೆಡಿಎಸ್ ಗೆ ಜೈ ಎಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್! ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಬೆಂಗಳೂರು/ಶಿವಮೊಗ್ಗ, ಎ. 21: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು, ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್’ಗೆ ಗುಡ್ ಬೈ ; ಜೆಡಿಎಸ್ ಗೆ ಜೈ ಎಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್!

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು, ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಕೆ.ಬಿ.ಪ್ರಸನ್ನಕುಮಾರ್ ವಿಧ್ಯುಕ್ತವಾಗಿ ಜೆಡಿಎಸ್ ಗೆ ಪಾದರ್ಪಣೆ ಮಾಡಿದ್ದಾರೆ.

ಕಾಂಗ್ರೆಸ್’ಗೆ ಗುಡ್ ಬೈ ; ಜೆಡಿಎಸ್ ಗೆ ಜೈ ಎಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್! Read More
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ರಾಜಕಾರಣ ಕಾವೇರಲಾರಂಭಿಸಿದೆ. ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಗುರುವಾರ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಕಾವೇರಿದ ಶಿವಮೊಗ್ಗ ನಗರ ಕ್ಷೇತ್ರದ ರಾಜಕಾರಣ! : ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಹುರಿಯಾಳುಗಳಿಂದ ನಾಮಪತ್ರ ಸಲ್ಲಿಕೆ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ರಾಜಕಾರಣ ಕಾವೇರಲಾರಂಭಿಸಿದೆ. ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಗುರುವಾರ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಬಿಜೆಪಿಯಿಂದ ಎಸ್.ಎನ್.ಚನ್ನಬಸಪ್ಪ, ಕಾಂಗ್ರೆಸ್ ನಿಂದ ಹೆಚ್.ಸಿ.ಯೋಗೇಶ್ ಹಾಗೂ ಜೆಡಿಎಸ್ ನಿಂದ ಆಯನೂರು ಮಂಜುನಾಥ್ ಅವರು ಚುನಾವಣಾಧಿಕಾರಿಗಳಿಗೆ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಕಾವೇರಿದ ಶಿವಮೊಗ್ಗ ನಗರ ಕ್ಷೇತ್ರದ ರಾಜಕಾರಣ! : ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಹುರಿಯಾಳುಗಳಿಂದ ನಾಮಪತ್ರ ಸಲ್ಲಿಕೆ Read More
ಕೊನೆಗೂ ಬಹು ನಿರೀಕ್ಷಿತ, ವಿಳಂಬಿತ, ಇಡೀ ರಾಜ್ಯದ ಗಮನ ಸೆಳೆದಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಅನಿರೀಕ್ಷಿತ, ಅಚ್ಚರಿ ಎಂಬಂತೆ ಮಹಾನಗರ ಪಾಲಿಕೆ ಕಾರ್ಪೋರೇಟರ್ ಎಸ್.ಎನ್.ಚನ್ನಬಸಪ್ಪ ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಇದರಿಂದ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದೆ!

ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚನ್ನಬಸಪ್ಪ (ಚೆನ್ನಿ) ಆಯ್ಕೆ..!

ಕೊನೆಗೂ ಬಹು ನಿರೀಕ್ಷಿತ, ವಿಳಂಬಿತ, ಇಡೀ ರಾಜ್ಯದ ಗಮನ ಸೆಳೆದಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಅನಿರೀಕ್ಷಿತ, ಅಚ್ಚರಿ ಎಂಬಂತೆ ಮಹಾನಗರ ಪಾಲಿಕೆ ಕಾರ್ಪೋರೇಟರ್ ಎಸ್.ಎನ್.ಚನ್ನಬಸಪ್ಪ ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಇದರಿಂದ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದೆ!

ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚನ್ನಬಸಪ್ಪ (ಚೆನ್ನಿ) ಆಯ್ಕೆ..! Read More
ಬಿಜೆಪಿಯಿಂದ ಹೊರಬಂದ ಆಯನೂರು ಮಂಜುನಾಥ್ ಗೆ ಟಿಕೆಟ್!

ಶಿವಮೊಗ್ಗ ನಗರ ಕ್ಷೇತ್ರ : ಜೆಡಿಎಸ್ ಟಿಕೆಟ್ ಹೈಡ್ರಾಮಾಕ್ಕೆ ಕೊನೆಗೂ ತೆರೆ..!

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ, ಇಷ್ಟು ದಿನ ತಣ್ಣಗಿದ್ದ ಜೆಡಿಎಸ್ ಪಕ್ಷದ ಚಟುವಟಿಕೆಗಳು ದಿಢೀರ್ ಕಾವೇರಿದೆ! ಮಂಗಳವಾರದಿಂದ ಸಾಕಷ್ಟು ಕುತೂಹಲ ಮೂಡಿಸಿದ್ದ, ಜೆಡಿಎಸ್ ಟಿಕೆಟ್ ಹೈಡ್ರಾಮಾಕ್ಕೆ ಕೊನೆಗೂ ತೆರೆ ಬಿದ್ದಿದೆ. ಬಿಜೆಪಿಯಿಂದ ಹೊರಬಂದ ಆಯನೂರು ಮಂಜುನಾಥ್ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ!

ಇದರಿಂದ ಜೆಡಿಎಸ್ ನಿಂದ ಕಣಕ್ಕಿಳಿಯಲು ಸಾಕಷ್ಟು ಕಸರತ್ತು ನಡೆಸಿದ್ದ ಹಾಗೂ ಬೆಂಗಳೂರಿನಲ್ಲಿಯೇ ಬೀಡುಬಿಟ್ಟು ಲಾಬಿ ನಡೆಸುತ್ತಿದ್ದ, ಕಾಂಗ್ರೆಸ್ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು ಲೆಕ್ಕಾಚಾರಗಳು ತಲೆಕೆಳಗಾಗುವಂತಾಗಿದೆ.

ಶಿವಮೊಗ್ಗ ನಗರ ಕ್ಷೇತ್ರ : ಜೆಡಿಎಸ್ ಟಿಕೆಟ್ ಹೈಡ್ರಾಮಾಕ್ಕೆ ಕೊನೆಗೂ ತೆರೆ..! Read More
ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಘೋಷಣೆ ನಂತರ, ಕಾಂಗ್ರೆಸ್ ನಲ್ಲಿ ಭುಗಿಲೆದ್ದಿರುವ ಭಿನ್ನಮತ ಸದ್ಯಕ್ಕೆ ಶಮನಗೊಳ್ಳುವ ಲಕ್ಷಣಗಳು ಗೋಚರವಾಗುತ್ತಿಲ್ಲ. ದಿಢೀರ್ ವಿದ್ಯಮಾನವೊಂದರಲ್ಲಿ, ಟಿಕೆಟ್ ಸಿಗದೆ ಮುನಿಸಿಕೊಂಡಿದ್ದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು ಕಾಂಗ್ರೆಸ್ ತ್ಯಜಿಸಿ, ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿಬರಲಾರಂಭಿಸಿದೆ!

ಶಿವಮೊಗ್ಗ ನಗರ ಕ್ಷೇತ್ರ ಕಾಂಗ್ರೆಸ್ ಭಿನ್ನಮತ : ಮಾಜಿ ಶಾಸಕರ ಬಂಡಾಯ – ಜೆಡಿಎಸ್ ನಿಂದ ಕಣಕ್ಕೆ?!

ಶಿವಮೊಗ್ಗ, ಎ. 17: ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಘೋಷಣೆ ನಂತರ, ಕಾಂಗ್ರೆಸ್ ನಲ್ಲಿ ಭುಗಿಲೆದ್ದಿರುವ ಭಿನ್ನಮತ ಸದ್ಯಕ್ಕೆ ಶಮನಗೊಳ್ಳುವ ಲಕ್ಷಣಗಳು ಗೋಚರವಾಗುತ್ತಿಲ್ಲ. ದಿಢೀರ್ ವಿದ್ಯಮಾನವೊಂದರಲ್ಲಿ, ಟಿಕೆಟ್ ಸಿಗದೆ ಮುನಿಸಿಕೊಂಡಿದ್ದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು ಕಾಂಗ್ರೆಸ್ ತ್ಯಜಿಸಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ!

ಶಿವಮೊಗ್ಗ ನಗರ ಕ್ಷೇತ್ರ ಕಾಂಗ್ರೆಸ್ ಭಿನ್ನಮತ : ಮಾಜಿ ಶಾಸಕರ ಬಂಡಾಯ – ಜೆಡಿಎಸ್ ನಿಂದ ಕಣಕ್ಕೆ?! Read More
ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ, 10 ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟಿಸಿದೆ. ಆದರೆ ಟಿ -20 ಕ್ರಿಕೆಟ್ ಮ್ಯಾಚ್ ನಷ್ಟೆ ಕುತೂಹಲ ಕೆರಳಿಸಿರುವ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಇದರಿಂದ ಕುತೂಹಲ ಮುಂದುವರಿಯುವಂತಾಗಿದೆ! ಪ್ರಸ್ತುತ ಶಿವಮೊಗ್ಗ ನಗರ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ, ಬಿಜೆಪಿ ಪಕ್ಷ ಅಭ್ಯರ್ಥಿಗಳ ಹೆಸರು ಘೋಷಣೆ ಬಾಕಿ ಉಳಿಸಿಕೊಂಡಿದೆ. ಉಳಿದ ಎಲ್ಲ ಕ್ಷೇತ್ರಗಳಿಗೆ ಕಣಕ್ಕಿಳಿಯುವ ಉಮೇದುವಾರರ ಹೆಸರು ಪ್ರಕಟಿಸಿದೆ.

ಮೂರನೇ ಪಟ್ಟಿಯಲ್ಲಿಯೂ ಪ್ರಕಟವಾಗದ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಸರು!

ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ, 10 ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟಿಸಿದೆ. ಆದರೆ ಟಿ -20 ಕ್ರಿಕೆಟ್ ಮ್ಯಾಚ್ ನಷ್ಟೆ ಕುತೂಹಲ ಕೆರಳಿಸಿರುವ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಇದರಿಂದ ಕುತೂಹಲ ಮುಂದುವರಿಯುವಂತಾಗಿದೆ!

ಪ್ರಸ್ತುತ ಶಿವಮೊಗ್ಗ ನಗರ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ, ಬಿಜೆಪಿ ಪಕ್ಷ ಅಭ್ಯರ್ಥಿಗಳ ಹೆಸರು ಘೋಷಣೆ ಬಾಕಿ ಉಳಿಸಿಕೊಂಡಿದೆ. ಉಳಿದ ಎಲ್ಲ ಕ್ಷೇತ್ರಗಳಿಗೆ ಕಣಕ್ಕಿಳಿಯುವ ಉಮೇದುವಾರರ ಹೆಸರು ಪ್ರಕಟಿಸಿದೆ.

ಮೂರನೇ ಪಟ್ಟಿಯಲ್ಲಿಯೂ ಪ್ರಕಟವಾಗದ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಸರು! Read More
ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪದ ಕೆ.ಹೆಚ್.ಬಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯ ಜಾನುವಾರು ಪಾಲಕರು ಅಳಲು ತೋಡಿಕೊಂಡಿದ್ದಾರೆ.

ಜಾನುವಾರು ಕಳ್ಳರ ಹಾವಳಿ : ಗಮನಹರಿಸುವರೆ ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು?!

ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪದ ಕೆ.ಹೆಚ್.ಬಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯ ಜಾನುವಾರು ಪಾಲಕರು ಅಳಲು ತೋಡಿಕೊಂಡಿದ್ದಾರೆ.

ಜಾನುವಾರು ಕಳ್ಳರ ಹಾವಳಿ : ಗಮನಹರಿಸುವರೆ ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು?! Read More
ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಕ್ಷೇತ್ರಗಳ ಕಾಂಗ್ರೆಸ್ ಪಾಳೇಯದಲ್ಲಿ ಭಿನ್ನಮತ ಭುಗಿಲೆದ್ದಿದೆ! ಮೂರು ಕ್ಷೇತ್ರಗಳಲ್ಲಿ ಭಾನುವಾರ ಕೆಲ ಟಿಕೆಟ್ ಆಕಾಂಕ್ಷಿಗಳು ಮತ್ತವರ ಬೆಂಬಲಿಗರು ಬಹಿರಂಗವಾಗಿಯೇ ಆಕ್ರೋಶ ಹೊರ ಹಾಕಲಾರಂಭಿಸಿದ್ದಾರೆ. ಪ್ರತ್ಯೇಕ ಸಭೆ ನಡೆಸಿದ್ದಾರೆ. ಜೊತೆಗೆ ಕೆಲ ನಾಯಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರದಲ್ಲಿ ಟಿಕೆಟ್ ವಂಚಿತ ಕೆಲ ನಾಯಕರು ಪಕ್ಷದ ಅಧಿಕೃತ ಅಭ್ಯರ್ಥಿಯ ಎದುರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.

ಟಿಕೆಟ್ ಘೋಷಣೆ ಬೆನ್ನಲ್ಲೇ ‘ಕೈ’ ಪಾಳೇಯದಲ್ಲಿ ಭುಗಿಲೆದ್ದ ಭಿನ್ನಮತ!

ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಕ್ಷೇತ್ರಗಳ ಕಾಂಗ್ರೆಸ್ ಪಾಳೇಯದಲ್ಲಿ ಭಿನ್ನಮತ ಭುಗಿಲೆದ್ದಿದೆ!

ಮೂರು ಕ್ಷೇತ್ರಗಳಲ್ಲಿ ಭಾನುವಾರ ಕೆಲ ಟಿಕೆಟ್ ಆಕಾಂಕ್ಷಿಗಳು ಮತ್ತವರ ಬೆಂಬಲಿಗರು ಬಹಿರಂಗವಾಗಿಯೇ ಆಕ್ರೋಶ ಹೊರ ಹಾಕಲಾರಂಭಿಸಿದ್ದಾರೆ. ಪ್ರತ್ಯೇಕ ಸಭೆ ನಡೆಸಿದ್ದಾರೆ. ಜೊತೆಗೆ ಕೆಲ ನಾಯಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರದಲ್ಲಿ ಟಿಕೆಟ್ ವಂಚಿತ ಕೆಲ ನಾಯಕರು ಪಕ್ಷದ ಅಧಿಕೃತ ಅಭ್ಯರ್ಥಿಯ ಎದುರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.

ಟಿಕೆಟ್ ಘೋಷಣೆ ಬೆನ್ನಲ್ಲೇ ‘ಕೈ’ ಪಾಳೇಯದಲ್ಲಿ ಭುಗಿಲೆದ್ದ ಭಿನ್ನಮತ! Read More
ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೂರನೇ ಹಂತದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಸದರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಈ ಮೂಲಕ ಜಿಲ್ಲೆಯ ಎಲ್ಲ 7 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಹುರಿಯಾಳುಗಳನ್ನು ಕಣಕ್ಕಿಳಿಸಿದಂತಾಗಿದೆ. ಪ್ರತಿಷ್ಠಿತ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹಾಲಿ ಮಹಾನಗರ ಪಾಲಿಕೆ ಕಾರ್ಪೋರೇಟರ್ ಹಾಗು ಮಾಜಿ ಸಚಿವ ಹೆಚ್.ಎಂ.ಚಂದ್ರಶೇಖರಪ್ಪ ಅವರ ಪುತ್ರ ಹೆಚ್.ಸಿ.ಯೋಗೇಶ್ ಅವರನ್ನು ಕಣಕ್ಕಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ, ಮಾಜಿ ಶಾಸಕ ಕರಿಯಣ್ಣ ಅವರ ಪುತ್ರ ಡಾ.ಶ್ರೀನಿವಾಸ್ ಕರಿಯಣ್ಣ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಪ್ರಕಟ!

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೂರನೇ ಹಂತದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಸದರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಈ ಮೂಲಕ ಜಿಲ್ಲೆಯ ಎಲ್ಲ 7 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಹುರಿಯಾಳುಗಳನ್ನು ಕಣಕ್ಕಿಳಿಸಿದಂತಾಗಿದೆ.

ಪ್ರತಿಷ್ಠಿತ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹಾಲಿ ಮಹಾನಗರ ಪಾಲಿಕೆ ಕಾರ್ಪೋರೇಟರ್ ಹಾಗು ಮಾಜಿ ಸಚಿವ ಹೆಚ್.ಎಂ.ಚಂದ್ರಶೇಖರಪ್ಪ ಅವರ ಪುತ್ರ ಹೆಚ್.ಸಿ.ಯೋಗೇಶ್ ಅವರನ್ನು ಕಣಕ್ಕಿಳಿಸಲಾಗುತ್ತಿದೆ.

ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಪ್ರಕಟ! Read More
ಜಾತಿ, ಮತ ಬಿಡಿ ಮಾನವತೆಗೆ ಜೀವ ಕೊಡಿ ಎನ್ನುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ರವರು ಜಾತಿ-ಮತ ಮೀರಲು ಅವಶ್ಯಕವಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದರು ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಮಹಾದೇವಸ್ವಾಮಿ ತಿಳಿಸಿದರು. ಶಿವಮೊಗ್ಗ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ರವರ 132 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

‘ಜಾತಿ-ಮತ ಬಿಡಿ, ಮಾನವತೆಗೆ ಜೀವ ಕೊಡಿ ಎಂದಿದ್ದರು ಡಾ.ಬಿ.ಆರ್.ಅಂಬೇಡ್ಕರ್’ : ಪ್ರೊ.ಮಹಾದೇವಸ್ವಾಮಿ

ಜಾತಿ, ಮತ ಬಿಡಿ ಮಾನವತೆಗೆ ಜೀವ ಕೊಡಿ ಎನ್ನುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್‍ರವರು ಜಾತಿ-ಮತ ಮೀರಲು ಅವಶ್ಯಕವಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದರು ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಮಹಾದೇವಸ್ವಾಮಿ ತಿಳಿಸಿದರು.

ಶಿವಮೊಗ್ಗ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‍ರವರ 132 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

‘ಜಾತಿ-ಮತ ಬಿಡಿ, ಮಾನವತೆಗೆ ಜೀವ ಕೊಡಿ ಎಂದಿದ್ದರು ಡಾ.ಬಿ.ಆರ್.ಅಂಬೇಡ್ಕರ್’ : ಪ್ರೊ.ಮಹಾದೇವಸ್ವಾಮಿ Read More