👉 ಬೇಡಿಕೆ ಈಡೇರದಿದ್ದರೆ ಮಾರ್ಚ್ 1 ರಿಂದ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ನಿಶ್ಚಿತ 👉 ಮುಖ್ಯಮಂತ್ರಿಗೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಖಡಕ್ ಎಚ್ಚರಿಕೆ!

ನೌಕರರ ಪ್ರಮುಖ ಬೇಡಿಕೆಗಳೇನು?
ರಾಜ್ಯ ಸರ್ಕಾರಿ ನೌಕರರ ವೇತನ, ತುಟ್ಟಿ ಭತ್ಯೆ, ಸೌಲಭ್ಯಗಳ ಪರಿಷ್ಕರಣೆಗಾಗಿ ನೇಮಿಸಲಾಗಿರುವ 7 ನೇ ವೇತನ ಆಯೋಗದ ಶಿಫಾರಸ್ಸುಗಳ ಮಧ್ಯಂತರ ವರದಿ ಪಡೆದು ಶೇ.40 ರಷ್ಟು ಫಿಟ್ಮೆಂಟ್ ಅನ್ನು ಜುಲೈ 1 ರಿಂದ ಜಾರಿಗೊಳಿಸಬೇಕು.
ಈಗಾಗಲೇ ಹಲವು ರಾಜ್ಯಗಳಲ್ಲಿ ಎನ್.ಪಿ.ಎಸ್. ವ್ಯವಸ್ಥೆ ರದ್ದುಗೊಳಿಸಲಾಗಿದೆ. ಅದೇ ರೀತಿಯಲ್ಲಿ ಕರ್ನಾಟಕ ರಾಜ್ಯದಲ್ಲಿಯೂ ಎನ್.ಪಿ.ಎಸ್ ರದ್ದುಗೊಳಿಸಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು ಎಂಬುವುದು ಸಂಘದ ಪ್ರಮುಖ ಬೇಡಿಕೆಯಾಗಿದೆ.

👉 ಬೇಡಿಕೆ ಈಡೇರದಿದ್ದರೆ ಮಾರ್ಚ್ 1 ರಿಂದ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ನಿಶ್ಚಿತ 👉 ಮುಖ್ಯಮಂತ್ರಿಗೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಖಡಕ್ ಎಚ್ಚರಿಕೆ! Read More

ಫೆ.26, 27 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ!

ಶಿವಮೊಗ್ಗದ ನೂತನ ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿರುವ ಸಮಾರಂಭಕ್ಕೆ, ನಾಗರೀಕರನ್ನು ಕರೆತರಲು ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯ 200 ಬಸ್ ಗಳ ನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಫೆ.26, 27 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ! Read More

ವಿಮಾನ ನಿಲ್ದಾಣ ಉದ್ಘಾಟನೆಗೆ ಸಕಲ ಸಿದ್ದತೆ : ಡಿಸಿ ಡಾ.ಆರ್.ಸೆಲ್ವಮಣಿ – ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಮಾಹಿತಿ

ಶಿವಮೊಗ್ಗದ ಹೊರವಲಯ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.

ವಿಮಾನ ನಿಲ್ದಾಣ ಉದ್ಘಾಟನೆಗೆ ಸಕಲ ಸಿದ್ದತೆ : ಡಿಸಿ ಡಾ.ಆರ್.ಸೆಲ್ವಮಣಿ – ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಮಾಹಿತಿ Read More

ಪಾಲಿಕೆ ಆಡಳಿತದ ವಿರುದ್ಧ ನಾಳೆ ರಸ್ತೆ ತಡೆ ಪ್ರತಿಭಟನೆ

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ1 ನೇ ವಾರ್ಡ್ ಸೋಮಿನಕೊಪ್ಪ ಬಡಾವಣೆಯಲ್ಲಿ ಮೂಲಸೌಕರ್ಯ ಕಲ್ಪಿಸುವಲ್ಲಿ ಮಹಾನಗರ ಪಾಲಿಕೆ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ, ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದಂತೆ ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಫೆ.25 ರಂದು ಸೋಮಿನಕೊಪ್ಪ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪಾಲಿಕೆ ಆಡಳಿತದ ವಿರುದ್ಧ ನಾಳೆ ರಸ್ತೆ ತಡೆ ಪ್ರತಿಭಟನೆ Read More

ಶಿವಮೊಗ್ಗ ನಾಗರೀಕರೇ ಗಮನಿಸಿ..! : ಫೆ. 27 ರಂದು ನಗರ ಸಂಚಾರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ!!

ಶಿವಮೊಗ್ಗ ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗಿಯಾಗುತ್ತಿರುವುದು ಹಾಗೂ ಸಮಾರಂಭಕ್ಕೆ ಲಕ್ಷಾಂತರ ಜನ ಭಾಗವಹಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ, ಫೆ. 27 ರಂದು ಶಿವಮೊಗ್ಗ ನಗರ ಸಂಚಾರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಶಿವಮೊಗ್ಗ ನಗರ ಹಾಗೂ ಹೊರವಲಯದ ಹಲವೆಡೆ, ಶೂನ್ಯ ಸಂಚಾರ ರಸ್ತೆ ಮಾರ್ಗ ಮತ್ತು ವಾಹನ ಸಂಚಾರಕ್ಕೆ ಬದಲಿ ಮಾರ್ಗಗಳ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೊರಡಿಸಿದ್ದಾರೆ. ವಿವರ ಈ ಕೆಳಕಂಡಂತಿದೆ.

ಶಿವಮೊಗ್ಗ ನಾಗರೀಕರೇ ಗಮನಿಸಿ..! : ಫೆ. 27 ರಂದು ನಗರ ಸಂಚಾರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ!! Read More

ಮೂರನೇ ದಿನಕ್ಕೆ ರೈತರ ಪ್ರತಿಭಟನೆ : ಡಿಎಸ್ಎಸ್ ಮುಖಂಡರು ಭಾಗಿ

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ಸ್ವಾದೀನ ಪಡಿಸಿಕೊಂಡ ಭೂಮಿಗೆ ಪರಿಹಾರ ನೀಡುವಂತೆ ಆಗ್ರಹಿಸಿ, ಶಿವಮೊಗ್ಗ ನಗರದ ಡಿಸಿ ಕಚೇರಿ ಎದುರು ಭೂಮಿ ಕಳೆದುಕೊಂಡ ರೈತರು ನಡೆಸುತ್ತಿರುವ ಪ್ರತಿಭಟನೆ ಗುರುವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಮೂರನೇ ದಿನಕ್ಕೆ ರೈತರ ಪ್ರತಿಭಟನೆ : ಡಿಎಸ್ಎಸ್ ಮುಖಂಡರು ಭಾಗಿ Read More

ಫೆ.23, 24 ರಂದು ಶಿವಮೊಗ್ಗ ತಾಲೂಕಿನ ಕುಂಸಿ, ಆಯನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ಮಾರ್ಗದ ನಿರ್ವಹಣೆ ಕಾರ್ಯ ಮತ್ತು ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣದಿಂದ ಫೆ. 23 ಮತ್ತು 24 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ.

ಫೆ.23, 24 ರಂದು ಶಿವಮೊಗ್ಗ ತಾಲೂಕಿನ ಕುಂಸಿ, ಆಯನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ Read More

ಯಶಸ್ವಿಯಾದ ವಿಮಾನದ ಲ್ಯಾಂಡಿಂಗ್ : ನಿಟ್ಟುಸಿರು ಬಿಟ್ಟ ಅಧಿಕಾರಿಗಳ ತಂಡ!

ಸದ್ಯ ಇಡೀ ದೇಶದ ಗಮನ ಸೆಳೆದಿರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ, ಲೋಹದ ಹಕ್ಕಿಗಳ ಸಂಚಾರ ಆರಂಭವಾಗಿದೆ. ಮಂಗಳವಾರ ಏರ್’ಪೋರ್ಟ್’ಗೆ ಪರೀಕ್ಷಾರ್ಥವಾಗಿ ಬಂದ ವಾಯು ಸೇನೆಯ ವಿಮಾನ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ!
ಇದು ಅಧಿಕಾರಿಗಳ ತಂಡ ನಿಟ್ಟುಸಿರು ಬಿಡುವಂತೆ ಮಾಡಿದೆ.

ಯಶಸ್ವಿಯಾದ ವಿಮಾನದ ಲ್ಯಾಂಡಿಂಗ್ : ನಿಟ್ಟುಸಿರು ಬಿಟ್ಟ ಅಧಿಕಾರಿಗಳ ತಂಡ! Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೊದಲ ವಿಮಾನ..!

ಶಿವಮೊಗ್ಗ, ಫೆ.21: ಕೇಂದ್ರ ವಿಮಾನಯಾನ ನಿರ್ದೇಶನಾಲಯ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರಕ್ಕೆ ಹಸಿರು ನಿಶಾನೆ ತೋರ್ಪಡಿಸಿದ ಬೆನ್ನಲ್ಲೆಯೇ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲ ವಿಮಾನ ಲ್ಯಾಂಡಿಂಗ್ ಆಗಿದೆ. ಪ್ರಧಾನಮಂತ್ರಿ …

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೊದಲ ವಿಮಾನ..! Read More