ಮುರುಘಾ ಶ್ರೀ ಮತ್ತೆ ಜೈಲಿಗೆ : ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
Muruga Shri back in jail: Supreme Court cancels bail
ಮುರುಘಾ ಶ್ರೀ ಮತ್ತೆ ಜೈಲಿಗೆ : ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
News Website
Muruga Shri back in jail: Supreme Court cancels bail
ಮುರುಘಾ ಶ್ರೀ ಮತ್ತೆ ಜೈಲಿಗೆ : ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ರಾಜಕಾರಣ : ಸಿಎಂ ಆರೋಪ
BJP politics in women Atrocity case : CM accused
ಶಿವಮೊಗ್ಗ, ಮೇ 13: ಬಿಜೆಪಿ ಭದ್ರಕೋಟೆಯೆಂದೇ ಬಿಂಬಿತವಾಗಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ, ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಗೆ ಭಾರೀ ಪೈಪೋಟಿ ನೀಡುವ ಮೂಲಕ ಸಮಬಲದ ಸಾಧನೆ ಮಾಡಿ ಗಮನ ಸೆಳೆದಿದೆ!
ಜಿಲ್ಲೆಯ 7 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 3, ಕಾಂಗ್ರೆಸ್ 3 ಹಾಗೂ ಜೆಡಿಎಸ್ 1 ಕಡೆ ಜಯ ಸಾಧಿಸಿದೆ. ಕಳೆದ 2018 ರ ಚುನಾವಣೆಯಲ್ಲಿ 6 ಕಡೆ ಜಯ ಸಾಧಿಸಿ ಪ್ರಾಬಲ್ಯ ಮೆರೆದಿದ್ದ ಬಿಜೆಪಿ ಪಕ್ಷ ಈ ಬಾರಿ ಮೂರು ಕಡೆ ಪರಾಭವಗೊಂಡು ಕೈ ಸುಟ್ಟುಕೊಂಡಿದೆ.
ಶಿವಮೊಗ್ಗ ನಗರ, ಶಿಕಾರಿಪುರ, ತೀರ್ಥಹಳ್ಳಿ ಕ್ಷೇತ್ರಗಳಲ್ಲಿ ಮತ್ತೆ ಬಿಜೆಪಿ ಜಯ ಸಾಧಿಸಿದೆ. ಕಾಂಗ್ರೆಸ್ ಪಕ್ಷವು ಕಳೆದ ಬಾರಿ ಜಯ ಸಾಧಿಸಿದ್ದ ಭದ್ರಾವತಿ ಜೊತೆಗೆ ಬಿಜೆಪಿ ವಶದಲ್ಲಿದ್ದ ಸಾಗರ ಹಾಗೂ ಸೊರಬ ಕ್ಷೇತ್ರಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳುವಲ್ಲಿ ಸಫಲವಾಗಿದೆ.
ಶಿವಮೊಗ್ಗ ಜಿಲ್ಲೆ : ಕಾಂಗ್ರೆಸ್ 3, ಬಿಜೆಪಿ 3, ಜೆಡಿಎಸ್ 1! Read More
ವಿಧಾನಸಭೆ ಸಾರ್ವತ್ರಿಕ ಚುನಾವಣೆ – 2023 ಮಹಾ ಸಮರಕ್ಕೆ ತೆರೆ ಬಿದ್ದಿದೆ. ಮೇ 13 ರ ಮತ ಎಣಿಕೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ರಾಜಕೀಯ ಪಕ್ಷ ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರಗಳು ಬಿರುಸುಗೊಂಡಿವೆ!
ಯಾವ ಅಸೆಂಬ್ಲಿ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ? ಯಾವ ಪಕ್ಷಕ್ಕೆ ಎಷ್ಟೆಷ್ಟು ಮತ ಬೀಳಬಹುದು? ಯಾವ ಅಭ್ಯರ್ಥಿ ಗೆಲ್ಲಬಹುದು – ಸೋಲಬಹುದು? ಸೋಲು – ಗೆಲುವಿಗೆ ಕಾರಣವಾಗುವ ಅಂಶಗಳೇನು? ಎಂಬಿತ್ಯಾದಿ ಚರ್ಚೆಗಳು ಸರ್ವೇ ಸಾಮಾನ್ಯವಾಗಿದೆ.
ಮತದಾನದ ನಂತರ ಸೋಲು-ಗೆಲುವಿನ ಲೆಕ್ಕಾಚಾರ ಬಿರುಸು! Read More
ಶಿವಮೊಗ್ಗ, ಮೇ 10: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಬುಧವಾರ ನಡೆದ ಮತದಾನ ಕಾರ್ಯಕ್ಕೆ ಅಂತಿಮ ತೆರೆ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ, ಒಟ್ಟಾರೆ ಶೇ. 78.28 ರಷ್ಟು ಮತದಾನವಾಗಿದೆ.
ಶಿವಮೊಗ್ಗಗ್ರಾಮಾಂತರ ಶೇ. 83.71, ಭದ್ರಾವತಿ ಶೇ. 68.47, ಶಿವಮೊಗ್ಗ ಶೇ. 68.74, ತೀರ್ಥಹಳ್ಳಿ ಶೇ. 84.83, ಶಿಕಾರಿಪುರ ಶೇ. 82.57, ಸೊರಬ ಶೇ. 82.97, ಸಾಗರ ಶೇ. 80.29 ರಷ್ಟು ಮತದಾನವಾಗಿದೆ.
ವಿಧಾನಸಭೆ ಚುನಾವಣೆ : ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 78.28 ರಷ್ಟು ಮತದಾನ Read More
ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಬುಧವಾರ ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿತ್ತು. ಬಿಸಿಲ ಬೇಗೆಯ ನಡುವೆಯೂ ಮತಗಟ್ಟೆಗಳಲ್ಲಿ ಸರದಿ ಸಾಲಿನಲ್ಲಿ ನಿಂತು, ಅತ್ಯಂತ ಉತ್ಸಾಹದಿಂದ ಮತದಾರರು ತಮ್ಮ ಹಕ್ಕು ಚಲಾಯಿಸಿದರು.
ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ, ಕೆಲ ಸಮಯ ಮತದಾನ ಕಾರ್ಯ ಸ್ಥಗಿತಗೊಂಡಿದ್ದ ವರದಿಗಳು ಹೊರತುಪಡಿಸಿದರೆ, ಉಳಿದಂತೆ ಯಾವುದೇ ಅಹಿತಕರ ಘಟನೆ ಹಾಗೂ ಗೊಂದಲ-ಗಡಿಬಿಡಿಯಿಲ್ಲದೆ ಮತದಾನ ಪ್ರಕ್ರಿಯೆ ನಡೆಯಿತು.
ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ Read More
ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ!
ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.
ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..! Read More
ಒಂದೆಡೆ ಚುನಾವಣೆ ಕಾವು, ಮತ್ತೊಂದೆಡೆ ಬಿಸಿಲ ಧಗೆಯಿಂದ ಕೆಲ ರಾಜಕಾರಣಿಗಳು ಅಕ್ಷರಶಃ ಬಸವಳಿದಿದ್ದಾರೆ. ಬೆವರು ಹರಿಸಲಾರಂಭಿಸಿದ್ದಾರೆ. ಯಾವಾಗ ಚುನಾವಣೆ ಪೂರ್ಣಗೊಳ್ಳಲಿದೆಯೋ ಎಂದು ಕಾದು ಕುಳಿತುಕೊಳ್ಳುವಂತೆ ಮಾಡಿದೆ!
ಹೌದು. ಪ್ರಸ್ತುತ ವರ್ಷ ತಾಪಮಾನದ ಪ್ರಮಾಣದಲ್ಲಿ, ಗಣನೀಯ ಪ್ರಮಾಣದ ಹೆಚ್ಚಳ ಕಂಡುಬಂದಿದೆ. ಬಿರು ಬಿಸಿಲು ನಾಗರೀಕರನ್ನು ಹೈರಾಣಾಗಿಸಿದೆ. ಸುಡು ಬಿಸಿಲಿನಲ್ಲಿ ಎದುರಾಗಿರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಯು ಅಖಾಡದಲ್ಲಿರುವ ಹಲವು ಅಭ್ಯರ್ಥಿಗಳನ್ನು ಹೈರಾಣಾಗಿಸಿದೆ.
ಚುನಾವಣೆ ಕಾವು, ಬಿಸಿಲ ಧಗೆಗೆ ಬಸವಳಿದ ರಾಜಕಾರಣಿಗಳು..! Read More
ಭದ್ರಾವತಿ ವಿಧಾನಸಭಾ ಕ್ಷೇತ್ರ : ‘ವ್ಯಕ್ತಿ’ ಪ್ರತಿಷ್ಠೆಯ ಕಣ!
ಭದ್ರಾವತಿ ವಿಧಾನಸಭಾ ಕ್ಷೇತ್ರ : ‘ವ್ಯಕ್ತಿ’ ಪ್ರತಿಷ್ಠೆಯ ಕಣ! Read More
ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ವಿಧಾನಸಭಾ ಚುನಾವಣಾ ಕಣ ರಂಗೇರಲಾರಂಭಿಸಿದೆ. ಈ ನಡುವೆ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ, ಜಿಲ್ಲೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಆಗಮಿಸುತ್ತಿದ್ದಾರೆ.
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರು ಎ. 27 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ.
ಚುನಾವಣಾ ಪ್ರಚಾರ : ಶಿವಮೊಗ್ಗ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ರಾಷ್ಟ್ರೀಯ ನಾಯಕರು! Read More