ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ, ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ಅವರು ನೀಡಿದರು. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮಳೆಗಾಲ : ತಗ್ಗು ಪ್ರದೇಶಗಳು ಜಲಾವೃತವಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಿವಮೊಗ್ಗ ಡಿಸಿ ಖಡಕ್ ಸೂಚನೆ!

ಶಿವಮೊಗ್ಗ, ಮೇ.24 : ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ, ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ಅವರು ನೀಡಿದರು.

ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮಳೆಗಾಲ : ತಗ್ಗು ಪ್ರದೇಶಗಳು ಜಲಾವೃತವಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಿವಮೊಗ್ಗ ಡಿಸಿ ಖಡಕ್ ಸೂಚನೆ! Read More
ಶಿವಮೊಗ್ಗದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110 ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 21 ರಂದು ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಶಿವಮೊಗ್ಗ : ಸೋಗಾನೆ, ಬಿದರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೇ 21 ರಂದು ವಿದ್ಯುತ್ ವ್ಯತ್ಯಯ!

ಶಿವಮೊಗ್ಗ, ಮೇ.19: ಶಿವಮೊಗ್ಗದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110  ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಮೇ 21 ರಂದು ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 8  ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಶಿವಮೊಗ್ಗ : ಸೋಗಾನೆ, ಬಿದರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೇ 21 ರಂದು ವಿದ್ಯುತ್ ವ್ಯತ್ಯಯ! Read More
‘ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ’ : ಸಿದ್ದರಾಮಯ್ಯ ಹೇಳಿಕೆ

‘ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ’ : ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು, ಮೇ 18: ‘ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ’ ಎಂದು ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

ಗುರುವಾರ ಮಧ್ಯಾಹ್ನ ಸಿದ್ದರಾಮಯ್ಯ ತಮ್ಮ ಟ್ವಿಟರ್ ಖಾತೆಯಲ್ಲಿ ಈ ಸಂದೇಶ ಹಾಕಿದ್ದಾರೆ. ‘ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡಲಾಗುವುದು’ ಎಂದು ಭರವಸೆ ನೀಡಿದ್ದಾರೆ.

ಜೊತೆಗೆ, ‘ನಮ್ಮ ಎಲ್ಲ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ’ ಎಂದು ಟ್ವಿಟರ್ ಸಂದೇಶದಲ್ಲಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಭರವಸೆ ನೀಡಿದ್ದಾರೆ.

‘ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ’ : ಸಿದ್ದರಾಮಯ್ಯ ಹೇಳಿಕೆ Read More
ದೆಹಲಿ/ಬೆಂಗಳೂರು, ಮೇ 17: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ತಯಾರಿಯಲ್ಲಿರುವ ಕಾಂಗ್ರೆಸ್ ಪಕ್ಷದಲ್ಲಿ, ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೆ ರೋಚಕತೆ ಕೆರಳಿಸಿದ್ದು, ಕ್ಷಣಕ್ಕೊಂದು ತಿರುವು ಪಡೆದುಕೊಳ್ಳಲಾರಂಭಿಸಿದೆ! ಸಿಎಂ ಹುದ್ದೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ತಮ್ಮ ನಿಲುವಿಗೆ ಅಂಟಿಕೊಂಡಿರುವುದು, ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ. ಈಗಾಗಲೇ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಜೊತೆ ಪ್ರತ್ಯೇಕವಾಗಿ ಹಲವು ಸುತ್ತಿನ ಸಭೆ ನಡೆಸಿದ್ದಾರೆ. ಅಭಿಪ್ರಾಯ ಆಲಿಸಿದ್ದಾರೆ. ಜೊತೆಗೆ ಅಧಿಕಾರ ಹಂಚಿಕೆ ಸೂತ್ರಗಳನ್ನು ಮುಂದಿಟ್ಟಿದ್ದಾರೆ. ‘ಮೊದಲ ಅವಧಿಯ ಸಿಎಂ ಹುದ್ದೆ ತಮಗೆ ನೀಡಬೇಕು..’ ಎಂದು ಈ ಇಬ್ಬರೂ ನಾಯಕರು ಪಟ್ಟು ಹಿಡಿದಿದ್ದಾರೆ. ಯಾರೊಬ್ಬರು ತಮ್ಮ ನಿಲುವಿನಲ್ಲಿ ಬದಲಾವಣೆ ಮಾಡಿಕೊಳ್ಳುತ್ತಿಲ್ಲ. ಇದು ವರಿಷ್ಠರಿಗೆ ಕಗ್ಗಂಟಾಗಿ ಪರಿಣಮಿಸುವಂತೆ ಮಾಡಿದೆ.

ಯಾರಾಗಲಿದ್ದಾರೆ ಸಿಎಂ..? : ಸಿದ್ದರಾಮಯ್ಯ – ಡಿ.ಕೆ.ಶಿವಕುಮಾರ್ ನಡುವೆ ಮುಂದುವರಿದ ಹಗ್ಗಜಗ್ಗಾಟ!

ದೆಹಲಿ/ಬೆಂಗಳೂರು, ಮೇ 17: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ತಯಾರಿಯಲ್ಲಿರುವ ಕಾಂಗ್ರೆಸ್ ಪಕ್ಷದಲ್ಲಿ, ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೆ ರೋಚಕತೆ ಕೆರಳಿಸಿದ್ದು, ಕ್ಷಣಕ್ಕೊಂದು ತಿರುವು ಪಡೆದುಕೊಳ್ಳಲಾರಂಭಿಸಿದೆ!

ಸಿಎಂ ಹುದ್ದೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ತಮ್ಮ ನಿಲುವಿಗೆ ಅಂಟಿಕೊಂಡಿರುವುದು, ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.

ಯಾರಾಗಲಿದ್ದಾರೆ ಸಿಎಂ..? : ಸಿದ್ದರಾಮಯ್ಯ – ಡಿ.ಕೆ.ಶಿವಕುಮಾರ್ ನಡುವೆ ಮುಂದುವರಿದ ಹಗ್ಗಜಗ್ಗಾಟ! Read More
ಪ್ರಸ್ತುತ ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಸಂಖ್ಯೆ, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಯಾರ ಅಂಕೆಗೂ ಸಿಗದ ಮಟ್ಟದಲ್ಲಿ ಆನ್ಲೈನ್ ಜೂಜು ದೊಡ್ಡ ಮಟ್ಟದ ವ್ಯವಹಾರವಾಗಿ ನಡೆಯುತ್ತಿದೆ. ಕೋಟಿ ಕೋಟಿ ರೂ. ಮೊತ್ತದ ಬೆಟ್ಟಿಂಗ್ ನಡೆಯುತ್ತಿದೆ. ಸದ್ಯ ಐಪಿಎಲ್ ಕ್ರಿಕೆಟ್ ಟೂರ್ನಮೆಂಟ್ ವೇಳೆ ಆನ್ಲೈನ್ ಬೆಟ್ಟಿಂಗ್ ಭಾರೀ ಸದ್ದು ಮಾಡಲಾರಂಭಿಸಿದೆ! ಕ್ರೀಡೆ, ಮನರಂಜನೆ, ಕೌಶಲ್ಯ ಮತ್ತೀತರ ಚಟುವಟಿಕೆಗಳ ಹೆಸರಿನಲ್ಲಿ ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಕಾರ್ಯನಿರ್ವಹಿಸುತ್ತಿವೆ. ಸಾಲುಸಾಲು ದೇಶ – ವಿದೇಶಿ ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಕಾರ್ಯಾಚರಿಸುತ್ತಿವೆ. ಯುವ ಜನಾಂಗ ಮಾತ್ರವಲ್ಲದೆ ಎಲ್ಲ ವಯೋಮಾನ, ವರ್ಗದವರು ಕೂಡ ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ದಾಸರಾಗುತ್ತಿದ್ದಾರೆ. ಎಲ್ಲದಕ್ಕಿಂತ ಮುಖ್ಯವಾಗಿ ಆನ್ಲೈನ್ ಗೇಮಿಂಗ್, ಬೆಟ್ಟಿಂಗ್ ಆ್ಯಪ್ ಗಳಿಗೆ ಚಲನಚಿತ್ರ ನಟನಟಿಯರು, ಕ್ರಿಕೆಟ್ ಆಟಗಾರರು ಸೇರಿದಂತೆ ಹಲವರು ಪ್ರಚಾರ ರಾಯಭಾರಿಗಳಾಗಿದ್ದಾರೆ. ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಭಾರೀ ದೊಡ್ಡ ಪ್ರಮಾಣದ ಜಾಹೀರಾತುಗಳು ಹರಿದಾಡುತ್ತಿವೆ.

ಯಾರ ಅಂಕೆಗೂ ಸಿಗದ ಆನ್‌ಲೈನ್‌ ಜೂಜು : ನಡೆಯುತ್ತಿದೆ ಕೋಟಿ, ಕೋಟಿ ರೂ. ಬೆಟ್ಟಿಂಗ್..!

ಪ್ರಸ್ತುತ ಆನ್‌ಲೈನ್‌ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಸಂಖ್ಯೆ, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಯಾರ ಅಂಕೆಗೂ ಸಿಗದ ಮಟ್ಟದಲ್ಲಿ ಆನ್‌ಲೈನ್‌ ಜೂಜು ದೊಡ್ಡ ಮಟ್ಟದ ವ್ಯವಹಾರವಾಗಿ ನಡೆಯುತ್ತಿದೆ. ಕೋಟಿ ಕೋಟಿ ರೂ. ಮೊತ್ತದ ಬೆಟ್ಟಿಂಗ್ ನಡೆಯುತ್ತಿದೆ. ಸದ್ಯ ಐಪಿಎಲ್ ಕ್ರಿಕೆಟ್ ಟೂರ್ನಮೆಂಟ್ ವೇಳೆ ಆನ್‌ಲೈನ್‌ ಬೆಟ್ಟಿಂಗ್ ಭಾರೀ ಸದ್ದು ಮಾಡಲಾರಂಭಿಸಿದೆ!

ಕ್ರೀಡೆ, ಮನರಂಜನೆ, ಕೌಶಲ್ಯ ಮತ್ತೀತರ ಚಟುವಟಿಕೆಗಳ ಹೆಸರಿನಲ್ಲಿ ಆನ್‌ಲೈನ್‌ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಕಾರ್ಯನಿರ್ವಹಿಸುತ್ತಿವೆ. ಸಾಲುಸಾಲು ದೇಶ – ವಿದೇಶಿ ಆನ್‌ಲೈನ್‌ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಕಾರ್ಯಾಚರಿಸುತ್ತಿವೆ. ಯುವ ಜನಾಂಗ ಮಾತ್ರವಲ್ಲದೆ ಎಲ್ಲ ವಯೋಮಾನ, ವರ್ಗದವರು ಕೂಡ ಆನ್‌ಲೈನ್‌ ಗೇಮಿಂಗ್ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ದಾಸರಾಗುತ್ತಿದ್ದಾರೆ.

ಯಾರ ಅಂಕೆಗೂ ಸಿಗದ ಆನ್‌ಲೈನ್‌ ಜೂಜು : ನಡೆಯುತ್ತಿದೆ ಕೋಟಿ, ಕೋಟಿ ರೂ. ಬೆಟ್ಟಿಂಗ್..! Read More
ಶಿವಮೊಗ್ಗ, ಮೇ 13: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಜಿದ್ಧಾಜಿದ್ದಿನ ಹಣಾಹಣಿ ಏರ್ಪಟ್ಟಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ, ಕೊನೆಗೂ ಜೆಡಿಎಸ್ ಪಕ್ಷ ಜಯಭೇರಿ ಬಾರಿಸಿದೆ. ಕ್ಷೇತ್ರ ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸಿದ್ದ ಬಿಜೆಪಿ ಯತ್ನಗಳು ವಿಫಲವಾಗಿವೆ. ಇನ್ನೊಂದೆಡೆ, ಕ್ಷೇತ್ರದಲ್ಲಿ ಕಾಂಗ್ರೆಸ್ ನ ನೀರಸ ಪ್ರದರ್ಶನ ಮುಂದುವರಿದಿದೆ! ಕಳೆದ ನಾಲ್ಕು ಚುನಾವಣೆಗಳಲ್ಲಿ ಸತತ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯುತ್ತಿರುವ ಶಾರದಾ ಪೂರ್ಯನಾಯ್ಕ್ ಅವರು, ಕಳೆದ ಬಾರಿಯ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ. ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್ ಅವರನ್ನು ಪರಾಭವಗೊಳಿಸುವಲ್ಲಿ ಸಫಲರಾಗಿದ್ದಾರೆ.

ಶಿವಮೊಗ್ಗ ಗ್ರಾಮಾಂತರ : ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯನಾಯ್ಕ್’ಗೆ ಒಲಿದ ವಿಜಯದ ಮಾಲೆ!

ಶಿವಮೊಗ್ಗ, ಮೇ 13: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಜಿದ್ಧಾಜಿದ್ದಿನ ಹಣಾಹಣಿ ಏರ್ಪಟ್ಟಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ, ಕೊನೆಗೂ ಜೆಡಿಎಸ್ ಪಕ್ಷ ಜಯಭೇರಿ ಬಾರಿಸಿದೆ. ಕ್ಷೇತ್ರ ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸಿದ್ದ ಬಿಜೆಪಿ ಯತ್ನಗಳು ವಿಫಲವಾಗಿವೆ. ಇನ್ನೊಂದೆಡೆ, ಕ್ಷೇತ್ರದಲ್ಲಿ ಕಾಂಗ್ರೆಸ್ ನ ನೀರಸ ಪ್ರದರ್ಶನ ಮುಂದುವರಿದಿದೆ!

ಕಳೆದ ನಾಲ್ಕು ಚುನಾವಣೆಗಳಲ್ಲಿ ಸತತ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯುತ್ತಿರುವ ಶಾರದಾ ಪೂರ್ಯನಾಯ್ಕ್ ಅವರು, ಕಳೆದ ಬಾರಿಯ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ. ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್ ಅವರನ್ನು ಪರಾಭವಗೊಳಿಸುವಲ್ಲಿ ಸಫಲರಾಗಿದ್ದಾರೆ.

ಶಿವಮೊಗ್ಗ ಗ್ರಾಮಾಂತರ : ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯನಾಯ್ಕ್’ಗೆ ಒಲಿದ ವಿಜಯದ ಮಾಲೆ! Read More
ಭದ್ರಾವತಿ, ಮೇ 13: ಭದ್ರಾವತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು, ಟಿ-20 ಕ್ರಿಕೆಟ್ ಪಂದ್ಯಾವಳಿಯಷ್ಟು ರೋಚಕತೆ ಕೆರಳಿಸಿತ್ತು. ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕ್ಷೇತ್ರದಲ್ಲಿ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಅಲ್ಪ ಮತಗಳ ಅಂತರದಲ್ಲಿ ಜಯದ ನಗೆ ಬೀರಿದ್ದಾರೆ! ಆದರೆ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಮತಗಳಿಕೆಯಲ್ಲಿ ಭಾರೀ ಪೈಪೋಟಿ ನೀಡಿದ್ದಾರೆ. ಕೆಲವೇ ಸಾವಿರ ಮತಗಳ ಅಂತರದಲ್ಲಿ ಅವರ ಕೈಯಿಂದ ಜಯದ ಮಾಲೆ ಕೈ ತಪ್ಪಿದೆ. ಉಳಿದಂತೆ ಕ್ಷೇತ್ರದಲ್ಲಿ ಬಿಜೆಪಿ ಪರಾಭವ ಮುಂದುವರಿದಿದೆ. ಆದರೆ ಆ ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚಾಗಿದೆ. ಅಭ್ಯರ್ಥಿ ಮಂಗೋಟೆ ರುದ್ರೇಶ್ ಮೊದಲ ಪ್ರಯತ್ನದಲ್ಲಿ ಗಮನ ಸೆಳೆಯುವಲ್ಲಿ ಸಫಲರಾಗಿದ್ದಾರೆ.

ಭದ್ರಾವತಿ : ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಸಂಗಮೇಶ್ವರ್ ಗೆ ಪ್ರಯಾಸದ ಗೆಲುವು!

ಭದ್ರಾವತಿ, ಮೇ 13: ಭದ್ರಾವತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು, ಟಿ-20 ಕ್ರಿಕೆಟ್ ಪಂದ್ಯಾವಳಿಯಷ್ಟು ರೋಚಕತೆ ಕೆರಳಿಸಿತ್ತು. ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕ್ಷೇತ್ರದಲ್ಲಿ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಅಲ್ಪ ಮತಗಳ ಅಂತರದಲ್ಲಿ ಜಯದ ನಗೆ ಬೀರಿದ್ದಾರೆ!

ಆದರೆ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಮತಗಳಿಕೆಯಲ್ಲಿ ಭಾರೀ ಪೈಪೋಟಿ ನೀಡಿದ್ದಾರೆ. ಕೆಲವೇ ಸಾವಿರ ಮತಗಳ ಅಂತರದಲ್ಲಿ ಅವರ ಕೈಯಿಂದ ಜಯದ ಮಾಲೆ ಕೈ ತಪ್ಪಿದೆ. ಉಳಿದಂತೆ ಕ್ಷೇತ್ರದಲ್ಲಿ ಬಿಜೆಪಿ ಪರಾಭವ ಮುಂದುವರಿದಿದೆ. ಆದರೆ ಆ ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚಾಗಿದೆ. ಅಭ್ಯರ್ಥಿ ಮಂಗೋಟೆ ರುದ್ರೇಶ್ ಮೊದಲ ಪ್ರಯತ್ನದಲ್ಲಿ ಗಮನ ಸೆಳೆಯುವಲ್ಲಿ ಸಫಲರಾಗಿದ್ದಾರೆ.

ಭದ್ರಾವತಿ : ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಸಂಗಮೇಶ್ವರ್ ಗೆ ಪ್ರಯಾಸದ ಗೆಲುವು! Read More
ಶಿವಮೊಗ್ಗ, ಮೇ 13: ಬಿಜೆಪಿ ಭದ್ರಕೋಟೆಯೆಂದೇ ಬಿಂಬಿತವಾಗಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ, ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಗೆ ಭಾರೀ ಪೈಪೋಟಿ ನೀಡುವ ಮೂಲಕ ಸಮಬಲದ ಸಾಧನೆ ಮಾಡಿ ಗಮನ ಸೆಳೆದಿದೆ! ಜಿಲ್ಲೆಯ 7 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 3, ಕಾಂಗ್ರೆಸ್ 3 ಹಾಗೂ ಜೆಡಿಎಸ್ 1 ಕಡೆ ಜಯ ಸಾಧಿಸಿದೆ. ಕಳೆದ 2018 ರ ಚುನಾವಣೆಯಲ್ಲಿ 6 ಕಡೆ ಜಯ ಸಾಧಿಸಿ ಪ್ರಾಬಲ್ಯ ಮೆರೆದಿದ್ದ ಬಿಜೆಪಿ ಪಕ್ಷ ಈ ಬಾರಿ ಮೂರು ಕಡೆ ಪರಾಭವಗೊಂಡು ಕೈ ಸುಟ್ಟುಕೊಂಡಿದೆ.

ಶಿವಮೊಗ್ಗ ಜಿಲ್ಲೆ : ಕಾಂಗ್ರೆಸ್ 3, ಬಿಜೆಪಿ 3, ಜೆಡಿಎಸ್ 1!

ಶಿವಮೊಗ್ಗ, ಮೇ 13: ಬಿಜೆಪಿ ಭದ್ರಕೋಟೆಯೆಂದೇ ಬಿಂಬಿತವಾಗಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ, ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಗೆ ಭಾರೀ ಪೈಪೋಟಿ ನೀಡುವ ಮೂಲಕ ಸಮಬಲದ ಸಾಧನೆ ಮಾಡಿ ಗಮನ ಸೆಳೆದಿದೆ!

ಜಿಲ್ಲೆಯ 7 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 3, ಕಾಂಗ್ರೆಸ್ 3 ಹಾಗೂ ಜೆಡಿಎಸ್ 1 ಕಡೆ ಜಯ ಸಾಧಿಸಿದೆ. ಕಳೆದ 2018 ರ ಚುನಾವಣೆಯಲ್ಲಿ 6 ಕಡೆ ಜಯ ಸಾಧಿಸಿ ಪ್ರಾಬಲ್ಯ ಮೆರೆದಿದ್ದ ಬಿಜೆಪಿ ಪಕ್ಷ ಈ ಬಾರಿ ಮೂರು ಕಡೆ ಪರಾಭವಗೊಂಡು ಕೈ ಸುಟ್ಟುಕೊಂಡಿದೆ.

ಶಿವಮೊಗ್ಗ ನಗರ, ಶಿಕಾರಿಪುರ, ತೀರ್ಥಹಳ್ಳಿ ಕ್ಷೇತ್ರಗಳಲ್ಲಿ ಮತ್ತೆ ಬಿಜೆಪಿ ಜಯ ಸಾಧಿಸಿದೆ. ಕಾಂಗ್ರೆಸ್ ಪಕ್ಷವು ಕಳೆದ ಬಾರಿ ಜಯ ಸಾಧಿಸಿದ್ದ ಭದ್ರಾವತಿ ಜೊತೆಗೆ ಬಿಜೆಪಿ ವಶದಲ್ಲಿದ್ದ ಸಾಗರ ಹಾಗೂ ಸೊರಬ ಕ್ಷೇತ್ರಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳುವಲ್ಲಿ ಸಫಲವಾಗಿದೆ.

ಶಿವಮೊಗ್ಗ ಜಿಲ್ಲೆ : ಕಾಂಗ್ರೆಸ್ 3, ಬಿಜೆಪಿ 3, ಜೆಡಿಎಸ್ 1! Read More
ವಿಧಾನಸಭೆ ಸಾರ್ವತ್ರಿಕ ಚುನಾವಣೆ - 2023 ಮಹಾ ಸಮರಕ್ಕೆ ತೆರೆ ಬಿದ್ದಿದೆ. ಮೇ 13 ರ ಮತ ಎಣಿಕೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ರಾಜಕೀಯ ಪಕ್ಷ ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರಗಳು ಬಿರುಸುಗೊಂಡಿವೆ! ಯಾವ ಅಸೆಂಬ್ಲಿ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ? ಯಾವ ಪಕ್ಷಕ್ಕೆ ಎಷ್ಟೆಷ್ಟು ಮತ ಬೀಳಬಹುದು? ಯಾವ ಅಭ್ಯರ್ಥಿ ಗೆಲ್ಲಬಹುದು – ಸೋಲಬಹುದು? ಸೋಲು – ಗೆಲುವಿಗೆ ಕಾರಣವಾಗುವ ಅಂಶಗಳೇನು? ಎಂಬಿತ್ಯಾದಿ ಚರ್ಚೆಗಳು ಸರ್ವೇ ಸಾಮಾನ್ಯವಾಗಿದೆ. ಮತ್ತೊಂದೆಡೆ, ಕೆಲ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಅಸೆಂಬ್ಲಿ ಕ್ಷೇತ್ರಗಳ ಪ್ರತಿಯೊಂದು ಬೂತ್ ನಲ್ಲಿ ಆಗಿರುವ ಮತದಾನದ ವಿವರ ಕಲೆ ಹಾಕುತ್ತಿದ್ದಾರೆ. ತಮ್ಮ ಪಕ್ಷಗಳ ಬೂತ್ ಏಜೆಂಟ್ ಗಳ ಮೂಲಕ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇದರ ಆಧಾರದ ಮೇಲೆ ಯಾವ್ಯಾವ ಭಾಗದಲ್ಲಿ ಎಷ್ಟೆಷ್ಟು ಮತ ತಮಗೆ ಬಿದ್ದಿರಬಹುದು? ಎದುರಾಳಿಗಳ ಮತ ಗಳಿಕೆ ಎಷ್ಟಿರಬಹುದು? ಎಂಬ ಊಹಾತ್ಮಕ ಲೆಕ್ಕಾಚಾರದಲ್ಲಿ ಮುಳುಗಿರುವುದು ಕಂಡುಬರುತ್ತಿದೆ.

ಮತದಾನದ ನಂತರ ಸೋಲು-ಗೆಲುವಿನ ಲೆಕ್ಕಾಚಾರ ಬಿರುಸು!

ವಿಧಾನಸಭೆ ಸಾರ್ವತ್ರಿಕ ಚುನಾವಣೆ – 2023 ಮಹಾ ಸಮರಕ್ಕೆ ತೆರೆ ಬಿದ್ದಿದೆ. ಮೇ 13 ರ ಮತ ಎಣಿಕೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ರಾಜಕೀಯ ಪಕ್ಷ ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರಗಳು ಬಿರುಸುಗೊಂಡಿವೆ!

ಯಾವ ಅಸೆಂಬ್ಲಿ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ? ಯಾವ ಪಕ್ಷಕ್ಕೆ ಎಷ್ಟೆಷ್ಟು ಮತ ಬೀಳಬಹುದು? ಯಾವ ಅಭ್ಯರ್ಥಿ ಗೆಲ್ಲಬಹುದು – ಸೋಲಬಹುದು? ಸೋಲು – ಗೆಲುವಿಗೆ ಕಾರಣವಾಗುವ ಅಂಶಗಳೇನು? ಎಂಬಿತ್ಯಾದಿ ಚರ್ಚೆಗಳು ಸರ್ವೇ ಸಾಮಾನ್ಯವಾಗಿದೆ.

ಮತದಾನದ ನಂತರ ಸೋಲು-ಗೆಲುವಿನ ಲೆಕ್ಕಾಚಾರ ಬಿರುಸು! Read More
ಶಿವಮೊಗ್ಗ, ಮೇ 10: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಬುಧವಾರ ನಡೆದ ಮತದಾನ ಕಾರ್ಯಕ್ಕೆ ಅಂತಿಮ ತೆರೆ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ, ಒಟ್ಟಾರೆ ಶೇ. 78.28 ರಷ್ಟು ಮತದಾನವಾಗಿದೆ. ಶಿವಮೊಗ್ಗಗ್ರಾಮಾಂತರ ಶೇ. 83.71, ಭದ್ರಾವತಿ ಶೇ. 68.47, ಶಿವಮೊಗ್ಗ ಶೇ. 68.74, ತೀರ್ಥಹಳ್ಳಿ ಶೇ. 84.83, ಶಿಕಾರಿಪುರ ಶೇ. 82.57, ಸೊರಬ ಶೇ. 82.97, ಸಾಗರ ಶೇ. 80.29 ರಷ್ಟು ಮತದಾನವಾಗಿದೆ.

ವಿಧಾನಸಭೆ ಚುನಾವಣೆ : ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 78.28 ರಷ್ಟು ಮತದಾನ

ಶಿವಮೊಗ್ಗ, ಮೇ 10: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಬುಧವಾರ ನಡೆದ ಮತದಾನ ಕಾರ್ಯಕ್ಕೆ ಅಂತಿಮ ತೆರೆ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ, ಒಟ್ಟಾರೆ ಶೇ. 78.28 ರಷ್ಟು ಮತದಾನವಾಗಿದೆ.

ಶಿವಮೊಗ್ಗಗ್ರಾಮಾಂತರ ಶೇ. 83.71, ಭದ್ರಾವತಿ ಶೇ. 68.47, ಶಿವಮೊಗ್ಗ ಶೇ. 68.74, ತೀರ್ಥಹಳ್ಳಿ ಶೇ. 84.83, ಶಿಕಾರಿಪುರ ಶೇ. 82.57, ಸೊರಬ ಶೇ. 82.97, ಸಾಗರ ಶೇ. 80.29 ರಷ್ಟು ಮತದಾನವಾಗಿದೆ.

ವಿಧಾನಸಭೆ ಚುನಾವಣೆ : ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 78.28 ರಷ್ಟು ಮತದಾನ Read More