ಭದ್ರಾವತಿ - ಲಾರಿಯಲ್ಲಿ ಡಿಸೇಲ್ ಕಳವು ಮಾಡಿದ್ದ ಇಬ್ಬರ ಬಂಧನ!

ಭದ್ರಾವತಿ : ಲಾರಿಯಲ್ಲಿ ಡೀಸೆಲ್ ಕಳವು ಪ್ರಕರಣ – ಶಿವಮೊಗ್ಗದ ಇಬ್ಬರ ಬಂಧನ!

ನಿಲ್ಲಿಸಿದ್ದ ಲಾರಿಯೊಂದರಲ್ಲಿ ಡಿಸೇಲ್ ಕಳವು ಮಾಡಿದ್ದ ಆರೋಪದ ಮೇರೆಗೆ ಇಬ್ಬರನ್ನು ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಶಿವಮೊಗ್ಗದ ಟಿಪ್ಪು ನಗರದ ನಿವಾಸಿಗಳಾದ ಸೋನು (24) ಹಾಗೂ ನೂರುಲ್ಲಾ (24) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಆರೋಪಿಗಳಿಂದ 150 ಲೀಟರ್ ಡಿಸೇಲ್ ವಶಕ್ಕೆ ಪಡೆಯಲಾಗಿದೆ. ಇದರ ಅಂದಾಜು ಮೌಲ್ಯ 15 ಸಾವಿರ ರೂ.ಗಳೆಂದು ಅಂದಾಜಿಸಲಾಗಿದೆ.

ಭದ್ರಾವತಿ : ಲಾರಿಯಲ್ಲಿ ಡೀಸೆಲ್ ಕಳವು ಪ್ರಕರಣ – ಶಿವಮೊಗ್ಗದ ಇಬ್ಬರ ಬಂಧನ! Read More
ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭ

ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭ

ಬೆಂಗಳೂರು, ಆ. 9: ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭವು ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿತ್ತು.

ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭ Read More
ಶಿವಮೊಗ್ಗ : ಅಬ್ಬಲಗೆರೆ ಗ್ರಾಪಂ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ

ಶಿವಮೊಗ್ಗ : ಅಬ್ಬಲಗೆರೆ ಗ್ರಾಪಂ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ

ಶಿವಮೊಗ್ಗ ತಾಲೂಕು ಅಬ್ಬಲಗೆರೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಇತ್ತೀಚೆಗೆ ಚುನಾವಣೆ ನಡೆಯಿತು.

ಅಧ್ಯಕ್ಷರಾಗಿ ಬಸವನಗಂಗೂರು ಗ್ರಾಮದ ಸದಸ್ಯೆ ದೇವಮ್ಮ ವಿಜಯಕುಮಾರ್ ಹಾಗೂ ಉಪಾಧ್ಯಕ್ಷರಾಗಿ  ಅಬ್ಬಲಗೆರೆ ಗ್ರಾಮದ ಸದಸ್ಯ ಎಂ. ಅಣ್ಣಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶಿವಮೊಗ್ಗ : ಅಬ್ಬಲಗೆರೆ ಗ್ರಾಪಂ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ Read More

ಪ್ರಚೋದನಾತ್ಮಕ ವೀಡಿಯೋ : ಸೋಶಿಯಲ್ ಮೀಡಿಯಾಗಳ ಮೇಲೆ ಪೊಲೀಸರ ಹದ್ದಿನ ಕಣ್ಣು – ಕಠಿಣ ಕ್ರಮದ ಎಚ್ಚರಿಕೆ!

ಪ್ರಚೋದನಾತ್ಮಕ ಹಾಗೂ ಸಮಾಜದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವ ವೀಡಿಯೋ ತುಣುಕುಗಳನ್ನು, ಸಾಮಾಜಿಕ ಜಾಲತಾಣ (ಸೋಶಿಯಲ್ ಮೀಡಿಯಾ) ಗಳಲ್ಲಿ ಹರಿಬಿಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರಚೋದನಾತ್ಮಕ ವೀಡಿಯೋ : ಸೋಶಿಯಲ್ ಮೀಡಿಯಾಗಳ ಮೇಲೆ ಪೊಲೀಸರ ಹದ್ದಿನ ಕಣ್ಣು – ಕಠಿಣ ಕ್ರಮದ ಎಚ್ಚರಿಕೆ! Read More

ಎಲ್ಲ ಅಂಗಡಿ – ವಾಣಿಜ್ಯ ಸಂಸ್ಥೆಗಳ ನೋಂದಣಿ ಕಡ್ಡಾಯ : ಕಾರ್ಮಿಕ ಇಲಾಖೆ ಪ್ರಕಟಣೆ

ಶಿವಮೊಗ್ಗ ಜಿಲ್ಲೆಯ ಎಲ್ಲ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ-1961 ಕಲಂ 4(1), (3) ಹಾಗೂ ನಿಯಮ 3 ರ ಅಡಿ ನೋಂದಣೆ ಮಾಡಿಕೊಳ್ಳುವಂತೆ ಮಾಲೀಕರಿಗೆ ಕಾರ್ಮಿಕ ಇಲಾಖೆ ಸೂಚನೆ ನೀಡಿದೆ.

ಎಲ್ಲ ಅಂಗಡಿ – ವಾಣಿಜ್ಯ ಸಂಸ್ಥೆಗಳ ನೋಂದಣಿ ಕಡ್ಡಾಯ : ಕಾರ್ಮಿಕ ಇಲಾಖೆ ಪ್ರಕಟಣೆ Read More

ತಾಳಗುಪ್ಪ – ಹುಬ್ಬಳ್ಳಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಸಂಸದರ ಮನವಿ

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ದೆಹಲಿಯಲ್ಲಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ, ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ರೈಲ್ವೆ ಯೋಜನೆಗಳು ಹಾಗೂ ಬಿಎಸ್ಎನ್ಎಲ್ ಮೊಬೈಲ್ ಪೋನ್ ಟವರ್ ಗಳ ಅಳವಡಿಕೆ ಕುರಿತಂತೆ ಚರ್ಚಿಸಿದರು.

ತಾಳಗುಪ್ಪ – ಹುಬ್ಬಳ್ಳಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಸಂಸದರ ಮನವಿ Read More

ಚಿತ್ರದುರ್ಗ : ಕಲುಷಿತ ನೀರು ಸೇವನೆ ಪ್ರಕರಣ – ತನಿಖೆಗೆ ಸಿಎಂ ಆದೇಶ

ಬೆಂಗಳೂರು / ಚಿತ್ರದುರ್ಗ, ಆ. 2: ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.‌

ಚಿತ್ರದುರ್ಗ : ಕಲುಷಿತ ನೀರು ಸೇವನೆ ಪ್ರಕರಣ – ತನಿಖೆಗೆ ಸಿಎಂ ಆದೇಶ Read More

ನಿಗಮ – ಮಂಡಳಿ, ನಾಮ ನಿರ್ದೇಶನ ಸ್ಥಾನಗಳಿಗೆ ‘ಕೈ’ ಪಾಳೇಯದಲ್ಲಿ ಶುರುವಾಗಿದೆ ಭಾರೀ ಲಾಬಿ!

ಇಷ್ಟರಲ್ಲಿಯೇ ನಿಗಮ ಮಂಡಳಿ ಹಾಗೂ ನಾಮ ನಿರ್ದೇಶನ ಸ್ಥಾನಗಳಿಗೆ ನೇಮಕ ಪ್ರಕ್ರಿಯೆಗೆ ಚಾಲನೆ ಸಿಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷದಲ್ಲಿ ಚಟುವಟಿಕೆಗಳು ಗರಿಗೆದರುವಂತೆ ಮಾಡಿದೆ. ಲಾಬಿಗಳು ಜೋರಾಗಿವೆ.
ಕಾಂಗ್ರೆಸ್ ನ ಹಾಲಿ-ಮಾಜಿ ಶಾಸಕರುಗಳು, ಪಕ್ಷದ ಜಿಲ್ಲಾಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು, ನಾಯಕರುಗಳು ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಸದಸ್ಯ, ನಿರ್ದೇಶಕ ಸ್ಥಾನ ಗಿಟ್ಟಿಸಿಕೊಳ್ಳಲು ಕಾರ್ಯಕರ್ತರು ಕಸರತ್ತು ನಡೆಸಲಾರಂಭಿಸಿದ್ದಾರೆ.
ಸರ್ಕಾರದ ಅಧೀನದಲ್ಲಿ ಒಟ್ಟಾರೆ 85 ನಿಗಮಗಳಿದ್ದು, ಅಲ್ಲಿಗೆ ನೇಮಕ ಮಾಡುವ ಪೂರ್ಣ ಅಧಿಕಾರ ಸರ್ಕಾರಕ್ಕಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಶಾಸಕರಿಗೆ ಶೇ. 70 ರಷ್ಟು ಹಾಗೂ ಪಕ್ಷದ ಮುಖಂಡರು-ಕಾರ್ಯಕರ್ತರಿಗೆ ಶೇ. 30 ರಷ್ಟು ಆದ್ಯತೆ ನೀಡುವ ನಿರ್ಧಾರ ಮಾಡಲಾಗಿದೆ. ಎರಡೂವರೆ ವರ್ಷದ ಅವಧಿಗೆ ನೇಮಕ ಮಾಡಲಾಗುತ್ತಿದೆ ಎನ್ನಲಾಗಿದೆ.

ನಿಗಮ – ಮಂಡಳಿ, ನಾಮ ನಿರ್ದೇಶನ ಸ್ಥಾನಗಳಿಗೆ ‘ಕೈ’ ಪಾಳೇಯದಲ್ಲಿ ಶುರುವಾಗಿದೆ ಭಾರೀ ಲಾಬಿ! Read More

ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ

ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ Read More
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭದ್ರತಾ ವ್ಯವಸ್ಥೆ : ದೆಹಲಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಸಮಾಲೋಚನೆ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭದ್ರತಾ ವ್ಯವಸ್ಥೆ : ದೆಹಲಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಸಮಾಲೋಚನೆ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ವಿಮಾನ ಹಾರಾಟ ಆರಂಭವಾಗುವುದು ಬಹುತೇಕ ನಿಶ್ಚಿತವಾಗಿದೆ. ಬೆಂಗಳೂರು – ಶಿವಮೊಗ್ಗ ನಡುವೆ ವಿಮಾನ ಸಂಚಾರಕ್ಕೆ ಸಂಬಂಧಿಸಿದಂತೆ, ಈಗಾಗಲೇ ಇಂಡಿಗೋ ಸಂಸ್ಥೆ ಟಿಕೆಟ್ ಬುಕ್ಕಿಂಗ್ ಕೂಡ ಆರಂಭಿಸಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭದ್ರತಾ ವ್ಯವಸ್ಥೆ : ದೆಹಲಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಸಮಾಲೋಚನೆ Read More