ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಶಿವಮೊಗ್ಗ ನಗರದಲ್ಲಿ, ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೋಟೆ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ. ಗಾಂಧಿ ಬಜಾರ್ ನ ಎಲೆ ರೇವಣ್ಣನಕೇರಿ ರಸ್ತೆಯಲ್ಲಿ ಘಟನೆ ನಡೆದಿದೆ. 5.83 ಕೋಟಿ ರೂ. ಮೌಲ್ಯದ 9 ಕೆ.ಜಿ. 565 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಪೊಲೀಸರು!

ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಶಿವಮೊಗ್ಗ ನಗರದಲ್ಲಿ, ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೋಟೆ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ.

ಗಾಂಧಿ ಬಜಾರ್ ನ ಎಲೆ ರೇವಣ್ಣನಕೇರಿ ರಸ್ತೆಯಲ್ಲಿ ಘಟನೆ ನಡೆದಿದೆ. 5.83 ಕೋಟಿ ರೂ. ಮೌಲ್ಯದ 9 ಕೆ.ಜಿ. 565 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಪೊಲೀಸರು! Read More
ಆದರೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ರಾಜ್ಯ ನಾಯಕರ ನಡುವೆ ಒಮ್ಮತದ ಅಭಿಪ್ರಾಯ ಏರ್ಪಡದ ಹಿನ್ನೆಲೆಯಲ್ಲಿ, ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದೆ ಎಂಬ ಮಾತುಗಳು ಕೇಳಿಬರಲಾರಂಭಿಸಿದೆ. ಯಾವಾಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂಬುವುದು ಪಕ್ಷದ ಮುಖಂಡರಿಗೂ ಸ್ಪಷ್ಟತೆಯಿಲ್ಲದಂತಾಗಿದೆ! ಪಕ್ಷದ ಉನ್ನತ ಮೂಲಗಳ ಮಾಹಿತಿ ಅನುಸಾರ ಮಂಗಳವಾರ ರಾತ್ರಿ ಅಥವಾ ಬುಧವಾರ ಬೆಳಿಗ್ಗೆ ಬಿಜೆಪಿ ಪ್ರಥಮ ಹಂತದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಸುಮಾರು 150 ಕ್ಕೂ ಹೆಚ್ಚು ಕ್ಷೇತ್ರಗಳ ಹುರಿಯಾಳುಗಳ ಹೆಸರು ಅಂತ್ಯಗೊಂಡಿದೆ ಎಂದು ಹೇಳಲಾಗುತ್ತಿದೆ.

ಮೋದಿ – ಅಮಿತ್ ಶಾ ಬಿಗಿ ನಿಲುವು : ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದಾರೆಯೇ ಅಚ್ಚರಿಯ ಅಭ್ಯರ್ಥಿಗಳು?

ಬಿಜೆಪಿ ವರಿಷ್ಠರು, ಅದರಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಗಿ ನಿಲುವು ತಳೆದಿದ್ದಾರೆ. ರಾಜ್ಯ ನಾಯಕರ ಯಾವುದೇ ಲಾಬಿ, ಒತ್ತಡ ತಂತ್ರಕ್ಕೆ ಮಣೆ ಹಾಕುತ್ತಿಲ್ಲ. ಸ್ಪರ್ಧಾಕಾಂಕ್ಷಿಗಳ ಕುರಿತಂತೆ ಬಂದಿರುವ ಸಮೀಕ್ಷಾ ವರದಿಗಳು, ಗೆಲ್ಲುವ ಸಾಧ್ಯತೆ, ವಿವಿಧ ಮೂಲಗಳಿಂದ ಸಂಗ್ರಹಿಸಿದ ವರದಿಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆಗೆ ಒತ್ತು ನೀಡಿದ್ದಾರೆ ಎನ್ನಲಾಗಿದೆ.

ಮೋದಿ – ಅಮಿತ್ ಶಾ ಬಿಗಿ ನಿಲುವು : ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದಾರೆಯೇ ಅಚ್ಚರಿಯ ಅಭ್ಯರ್ಥಿಗಳು? Read More
ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎ.13 ರಿಂದ ಪಾಲಿಕೆ ಕಚೇರಿ ಪರಿಷತ್ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ ಸ್ವೀಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಅಸೆಂಬ್ಲಿ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್.ಚಂದ್ರಕುಮಾರ್ ಅವರು ತಿಳಿಸಿದ್ದಾರೆ. ಸೋಮವಾರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 20-04-2023 ರವರೆಗೆ ನಿಯಮಾನುಸಾರ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ವಿಧಾನಸಭಾ ಕ್ಷೇತ್ರ : ಎ.13 ರಿಂದ ಆರಂಭವಾಗುವ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ದತೆ – ಚುನಾವಣಾಧಿಕಾರಿ ಮಾಹಿತಿ

ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎ.13 ರಿಂದ ಪಾಲಿಕೆ ಕಚೇರಿ ಪರಿಷತ್ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ ಸ್ವೀಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಅಸೆಂಬ್ಲಿ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್.ಚಂದ್ರಕುಮಾರ್ ಅವರು ತಿಳಿಸಿದ್ದಾರೆ.

ಸೋಮವಾರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 20-04-2023 ರವರೆಗೆ ನಿಯಮಾನುಸಾರ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ವಿಧಾನಸಭಾ ಕ್ಷೇತ್ರ : ಎ.13 ರಿಂದ ಆರಂಭವಾಗುವ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ದತೆ – ಚುನಾವಣಾಧಿಕಾರಿ ಮಾಹಿತಿ Read More

ಉದ್ಯೋಗಾವಕಾಶ : ಎ.12 ರಂದು ವಿವಿಧ ಕಂಪನಿಗಳಿಂದ ನೇರ ಸಂದರ್ಶನ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.12 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಉದ್ಯೋಗಾವಕಾಶ : ಎ.12 ರಂದು ವಿವಿಧ ಕಂಪನಿಗಳಿಂದ ನೇರ ಸಂದರ್ಶನ Read More
ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರ್ಯಾಂಡ್‌ ಅನ್ನು ಮುಗಿಸಲೆಂದೇ ಅಮುಲ್‌ ಹಾಲು, ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ ಕಿಡಿಕಾರಿದ್ದಾರೆ.

‘ನಂದಿನಿ’ ಕನ್ನಡಿಗರ ಅಸ್ಮಿತೆ : ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ

ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರ್ಯಾಂಡ್‌ ಅನ್ನು ಮುಗಿಸಲೆಂದೇ
ಅಮುಲ್‌ ಹಾಲು, ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್
ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ ಕಿಡಿಕಾರಿದ್ದಾರೆ.

‘ನಂದಿನಿ’ ಕನ್ನಡಿಗರ ಅಸ್ಮಿತೆ : ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ Read More
ರಣ ಬಿಸಿಲಿಗೆ ಮಲೆನಾಡು ಅಕ್ಷರಶಃ ಬಿಸಿಯಾಗಲಾರಂಭಿಸಿದೆ..! ಹೌದು. ಪ್ರಸ್ತುತ ಬೇಸಿಗೆ ತಾಪಕ್ಕೆ, ಶಿವಮೊಗ್ಗ ಜಿಲ್ಲೆಯ ನಾಗರೀಕರು ತತ್ತರಿಸಿದ್ದಾರೆ. ಹೈರಾಣಾಗುವಂತೆ ಮಾಡಿದೆ!! ಜಿಲ್ಲೆಯ ಇತರೆಡೆಯಂತೆ, ಶಿವಮೊಗ್ಗ ನಗರದಲ್ಲಿಯೂ ತಾಪಮಾನದ ಪ್ರಮಾಣ ತೀವ್ರ ಸ್ವರೂಪದಲ್ಲಿದೆ. ಹಗಲು ವೇಳೆ ಇಡೀ ನಗರ ಕಾದ ಕಾವಲಿಯಂತಾಗಿ ಪರಿವರ್ತಿತವಾಗುತ್ತಿದೆ. ಮನೆಯಿಂದ ಹೊರಬರಲಾಗದ ಮಟ್ಟಕ್ಕೆ ಬಿಸಿಲು ಬೀಳುತ್ತಿದೆ. ದಿನದಿಂದ ದಿನಕ್ಕೆ ತಾಪಮಾನ ಏರುಗತಿಯಲ್ಲಿ ಸಾಗುತ್ತಿರುವುದು, ನಾಗರೀಕರನ್ನು ಕಂಗಲಾಗಿಸಿದೆ. ಎದುಸಿರು ಹೆಚ್ಚಾಗುವಂತೆ ಮಾಡಿದೆ.

ಮಲೆನಾಡಲ್ಲಿ ರಣ ಬಿಸಿಲು : ನಾಗರೀಕರು ತತ್ತರ!

ರಣ ಬಿಸಿಲಿಗೆ ಮಲೆನಾಡು ಅಕ್ಷರಶಃ ಬಿಸಿಯಾಗಲಾರಂಭಿಸಿದೆ..! ಹೌದು. ಪ್ರಸ್ತುತ ಬೇಸಿಗೆ ತಾಪಕ್ಕೆ, ಶಿವಮೊಗ್ಗ ಜಿಲ್ಲೆಯ ನಾಗರೀಕರು ತತ್ತರಿಸಿದ್ದಾರೆ. ಹೈರಾಣಾಗುವಂತೆ ಮಾಡಿದೆ!!

ಜಿಲ್ಲೆಯ ಇತರೆಡೆಯಂತೆ, ಶಿವಮೊಗ್ಗ ನಗರದಲ್ಲಿಯೂ ತಾಪಮಾನದ ಪ್ರಮಾಣ ತೀವ್ರ ಸ್ವರೂಪದಲ್ಲಿದೆ.  ಹಗಲು ವೇಳೆ ಇಡೀ ನಗರ ಕಾದ ಕಾವಲಿಯಂತಾಗಿ ಪರಿವರ್ತಿತವಾಗುತ್ತಿದೆ. ಮನೆಯಿಂದ ಹೊರಬರಲಾಗದ ಮಟ್ಟಕ್ಕೆ ಬಿಸಿಲು ಬೀಳುತ್ತಿದೆ. ದಿನದಿಂದ ದಿನಕ್ಕೆ ತಾಪಮಾನ ಏರುಗತಿಯಲ್ಲಿ ಸಾಗುತ್ತಿರುವುದು, ನಾಗರೀಕರನ್ನು ಕಂಗಲಾಗಿಸಿದೆ. ಎದುಸಿರು ಹೆಚ್ಚಾಗುವಂತೆ ಮಾಡಿದೆ.

ಮಲೆನಾಡಲ್ಲಿ ರಣ ಬಿಸಿಲು : ನಾಗರೀಕರು ತತ್ತರ! Read More
ವಿಧಾನಸಭಾ ಚುನಾವಣಾ ಅಕ್ರಮಗಳ ತಡೆಗೆ ಹಾಗೂ ಮುಕ್ತ -ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ, ಚುನಾವಣಾ ಆಯೋಗವು ‘ಸಿ-ವಿಜಿಲ್ (cVIGIL) ಆ್ಯಪ್ ಬಿಡುಗಡೆ ಮಾಡಿದೆ. ಸಾರ್ವಜನಿಕರು ಈ ಆ್ಯಪ್ ಮೂಲಕ, ಪಾರದರ್ಶಕ ಚುನಾವಣೆ ನಡೆಸಲು ಆಡಳಿತದೊಂದಿಗೆ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಚುನಾವಣಾ ಅಕ್ರಮದ ಪೋಟೋ – ವೀಡಿಯೋಗಳನ್ನು ಮೊಬೈಲ್ ಫೋನ್ ಮೂಲಕ ಕಳುಹಿಸಲು ಸಾರ್ವಜನಿಕರಿಗೆ ಚುನಾವಣಾ ಆಯೋಗದ ಮನವಿ

ವಿಧಾನಸಭಾ ಚುನಾವಣಾ ಅಕ್ರಮಗಳ ತಡೆಗೆ  ಹಾಗೂ ಮುಕ್ತ -ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ, ಚುನಾವಣಾ ಆಯೋಗವು ‘ಸಿ-ವಿಜಿಲ್ (cVIGIL) ಆ್ಯಪ್ ಬಿಡುಗಡೆ ಮಾಡಿದೆ. ಸಾರ್ವಜನಿಕರು ಈ ಆ್ಯಪ್ ಮೂಲಕ, ಪಾರದರ್ಶಕ ಚುನಾವಣೆ ನಡೆಸಲು ಆಡಳಿತದೊಂದಿಗೆ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಮತದಾರಿಗೆ ಆಮಿಷವೊಡ್ಡುವುದನ್ನು ತಡೆಗಟ್ಟಲು ಹಾಗೂ ಅಕ್ರಮಗಳ ತಡೆಗೆ ಸಿ-ವಿಜಿಲ್ ಆ್ಯಪ್ ಬಿಡುಗಡೆಗೊಳಿಸಲಾಗಿದೆ. ಸಿ-ವಿಜಿಲ್ ಮೊಬೈಲ್ ಅಪ್ಲಿಕೇಷನ್ ಮೂಲಕ, ಸಾರ್ವಜನಿಕರು ಚುನಾವಣಾ ಅಕ್ರಮಗಳನ್ನು ತಮ್ಮ ಮೊಬೈಲ್‍ಗಳ ಮೂಲಕ ನೇರವಾಗಿ ಆಯೋಗಕ್ಕೆ ಮಾಹಿತಿ ನೀಡಬಹುದು. ದೂರುದಾರರ ಹೆಸರು, ವಿಳಾಸವನ್ನು ಆಯೋಗ ಗೌಪ್ಯವಾಗಿಡುತ್ತದೆ.

ಚುನಾವಣಾ ಅಕ್ರಮದ ಪೋಟೋ – ವೀಡಿಯೋಗಳನ್ನು ಮೊಬೈಲ್ ಫೋನ್ ಮೂಲಕ ಕಳುಹಿಸಲು ಸಾರ್ವಜನಿಕರಿಗೆ ಚುನಾವಣಾ ಆಯೋಗದ ಮನವಿ Read More
‘ಜಂಗೀ ಕುಸ್ತಿಗೆ ಅಖಾಡ ರೆಡಿಯಾಗಿದೆ… ಆದರೆ ಪೈಲ್ವಾನರುಗಳೇ ಸಿದ್ಧವಾಗಿಲ್ಲ...’ ಇದು, ಶಿವವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸದ್ಯದ ಚುನಾವಣಾ ರಾಜಕಾರಣದ ಚಿತ್ರಣ…! ಹೌದು. ವಿಧಾನಸಭೆ ಚುನಾವಣೆ ಘೋಷಣೆಯಾಗಿ ಹಲವೇ ದಿನಗಳೇ ಕಳೆದಿದೆ. ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಆದರೆ ಇಲ್ಲಿಯವರೆಗೂ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು ಯಾರೆಂಬುವುದು ಖಚಿತವಾಗಿಲ್ಲ. ಯಾವ ಪಕ್ಷದಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬುವುದು ಸಂಪೂರ್ಣ ನಿಗೂಢವಾಗಿ ಪರಿಣಮಿಸಿದೆ. ಇದರಿಂದ ಅಭ್ಯರ್ಥಿಗಳ ಆಯ್ಕೆ ಚರ್ಚೆಗಳಿಗೆ ತೆರೆ ಬಿದ್ದಿಲ್ಲ.

ಶಿವಮೊಗ ನಗರ ಕ್ಷೇತ್ರ : ಮೂರು ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ!

‘ಜಂಗೀ ಕುಸ್ತಿಗೆ ಅಖಾಡ ರೆಡಿಯಾಗಿದೆ… ಆದರೆ ಪೈಲ್ವಾನರುಗಳೇ ಸಿದ್ಧವಾಗಿಲ್ಲ…’ ಇದು, ಶಿವವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸದ್ಯದ ಚುನಾವಣಾ ರಾಜಕಾರಣದ ಚಿತ್ರಣ…!

ಹೌದು. ವಿಧಾನಸಭೆ ಚುನಾವಣೆ ಘೋಷಣೆಯಾಗಿ ಹಲವೇ ದಿನಗಳೇ ಕಳೆದಿದೆ. ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಆದರೆ ಇಲ್ಲಿಯವರೆಗೂ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು ಯಾರೆಂಬುವುದು ಖಚಿತವಾಗಿಲ್ಲ.

ಶಿವಮೊಗ ನಗರ ಕ್ಷೇತ್ರ : ಮೂರು ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ! Read More
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ ಮಾಡಿದ್ದ ಆರೋಪದ ಮೇರೆಗೆ, ಪಕ್ಷದ ಮುಖಂಡರೋರ್ವರ ವಿರುದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿ, ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಉಪ ವಿಭಾಗಾಧಿಕಾರಿಗಳಿಂದ ಷರತ್ತುಬದ್ಧ ಅನುಮತಿ ಪಡೆದುಕೊಂಡು, ಕಳೆದ 30-3-2023 ರಂದು ಸಾಗರ ಪಟ್ಟಣದ ಮಹಿಳಾ ಸಮಾಜ ಆವರಣದಲ್ಲಿ ಕಾಂಗ್ರೆಸ್ ಪಕ್ಷವು ಕಾರ್ಯಕರ್ತರ ಸಭೆ ಆಯೋಜಿಸಿತ್ತು.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ : ಎಫ್.ಐ.ಆರ್. ದಾಖಲು!

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ ಮಾಡಿದ್ದ ಆರೋಪದ ಮೇರೆಗೆ, ಪಕ್ಷದ ಮುಖಂಡರೋರ್ವರ ವಿರುದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿ, ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ : ಎಫ್.ಐ.ಆರ್. ದಾಖಲು! Read More
ಗಾಂಜಾ ಮಾರಾಟ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಮೂವರು ಯುವಕರನ್ನು ಬಂಧಿಸಿದ ಘಟನೆ, ಭದ್ರಾವತಿ ಪಟ್ಟಣದ ಹೊಳೆಹೊನ್ನೂರು ರಸ್ತೆಯ ಲಕ್ಷ್ಮೀ ಸಾಮಿಲ್ ಸಮೀಪ ನಡೆದಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರು ಪೊಲೀಸ್ ಬಲೆಗೆ!

ಗಾಂಜಾ ಮಾರಾಟ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಮೂವರು ಯುವಕರನ್ನು ಬಂಧಿಸಿದ ಘಟನೆ, ಭದ್ರಾವತಿ ಪಟ್ಟಣದ ಹೊಳೆಹೊನ್ನೂರು ರಸ್ತೆಯ ಲಕ್ಷ್ಮೀ ಸಾಮಿಲ್ ಸಮೀಪ ನಡೆದಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರು ಪೊಲೀಸ್ ಬಲೆಗೆ! Read More