ಬೆಂಗಳೂರು/ಶಿವಮೊಗ್ಗ, ಮೇ 29: ಸರ್ಕಾರದ 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ, ಮೇ 31 ರ ಬುಧವಾರದಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ಮೇ 29 ರಿಂದಲೇ ಶಾಲೆಗಳ ಆರಂಭದ ಪೂರ್ವಭಾವಿ ಸಿದ್ದತೆಗಳು ನಡೆಯಲಾರಂಭಿಸಿವೆ. ‘ಮೇ 31 ರಂದು ಮಕ್ಕಳಿಗೆ ಸಿಹಿ ವಿತರಣೆ ಮಾಡುವ ಮೂಲಕ ಶಾಲೆಗಳಿಗೆ ಬರ ಮಾಡಿಕೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಮೇ 31 ರಿಂದ ಶಾಲೆಗಳು ಆರಂಭ : ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಸ್ವಾಗತ –  ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು/ಶಿವಮೊಗ್ಗ, ಮೇ 29: ಸರ್ಕಾರದ 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ, ಮೇ 31 ರ ಬುಧವಾರದಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ಮೇ 29 ರಿಂದಲೇ ಶಾಲೆಗಳ ಆರಂಭದ ಪೂರ್ವಭಾವಿ ಸಿದ್ದತೆಗಳು ನಡೆಯಲಾರಂಭಿಸಿವೆ.

‘ಮೇ 31 ರಂದು ಮಕ್ಕಳಿಗೆ ಸಿಹಿ ವಿತರಣೆ ಮಾಡುವ ಮೂಲಕ ಶಾಲೆಗಳಿಗೆ ಬರ ಮಾಡಿಕೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಶಿಕ್ಷಣ ಸಚಿವರಾಗಿ ನಿಯೋಜನೆ ಮಾಡಲಾಗಿರುವ ಕುರಿತಂತೆ ಸೋಮವಾರ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುತ್ತಿದ್ದಂತೆ, ಮಧು ಬಂಗಾರಪ್ಪರವರು ತಮ್ಮ ಫೇಸ್’ಬುಕ್ ಖಾತೆಯಲ್ಲಿ ಶಾಲೆಗಳ ಕಾರ್ಯಾರಂಭದ ಬಗ್ಗೆ ಹಾಕಿರುವ ಮೊದಲ ಸಂದೇಶದಲ್ಲಿ ಈ ವಿಷಯ ತಿಳಿಸಿದ್ದಾರೆ.

ಮೇ 31 ರಿಂದ ಶಾಲೆಗಳು ಆರಂಭ : ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಸ್ವಾಗತ –  ಶಿಕ್ಷಣ ಸಚಿವ ಮಧು ಬಂಗಾರಪ್ಪ Read More
ಶಿವಮೊಗ್ಗ, ಮೇ 28: ಶಿವಮೊಗ್ಗ ನಗರದ ಹೊರವಲಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹ (ಸೆಂಟ್ರಲ್ ಜೈಲ್) ದ ಮೇಲೆ ಕಳೆದ ಏಪ್ರಿಲ್ ತಿಂಗಳು ಎಸ್ಪಿ ನೇತೃತ್ವದ ಪೊಲೀಸ್ ತಂಡ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿತ್ತು. ಇದೀಗ ಮತ್ತೊಮ್ಮೆ ಸೆಂಟ್ರಲ್ ಜೈಲ್ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಭಾರೀ ದೊಡ್ಡ ಸಂಖ್ಯೆಯ ಪೊಲೀಸರು, ಭಾನುವಾರ ಬೆಳಿಗ್ಗೆ ಕಾರಾಗೃಹದ ಪ್ರತಿಯೊಂದು ಸೆಲ್ ತಪಾಸಣೆ ನಡೆಸಿದ್ದಾರೆ. ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಕೆ.ಬಿಂಧುಮಣಿ, ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ವಿವಿಧ ಠಾಣೆಗಳ ಇನ್ಸ್’ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡ ತಪಾಸಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಮತ್ತೆ ಪೊಲೀಸ್ ರೈಡ್..!

ಶಿವಮೊಗ್ಗ, ಮೇ 28: ಶಿವಮೊಗ್ಗ ನಗರದ ಹೊರವಲಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹ (ಸೆಂಟ್ರಲ್ ಜೈಲ್) ದ ಮೇಲೆ ಕಳೆದ ಏಪ್ರಿಲ್ ತಿಂಗಳು ಎಸ್ಪಿ ನೇತೃತ್ವದ ಪೊಲೀಸ್ ತಂಡ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿತ್ತು.

ಇದೀಗ ಮತ್ತೊಮ್ಮೆ ಸೆಂಟ್ರಲ್ ಜೈಲ್ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಭಾರೀ ದೊಡ್ಡ ಸಂಖ್ಯೆಯ ಪೊಲೀಸರು, ಭಾನುವಾರ ಬೆಳಿಗ್ಗೆ ಕಾರಾಗೃಹದ ಪ್ರತಿಯೊಂದು ಸೆಲ್ ತಪಾಸಣೆ ನಡೆಸಿದ್ದಾರೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಕೆ.ಬಿಂಧುಮಣಿ, ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ವಿವಿಧ ಠಾಣೆಗಳ ಇನ್ಸ್’ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡ ತಪಾಸಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಮತ್ತೆ ಪೊಲೀಸ್ ರೈಡ್..! Read More
‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ, ಮೇ 26: ‘ಮಲೆನಾಡು ಭಾಗದಲ್ಲಿ ಮೊಬೈಲ್ ಫೋನ್ ಹಾಗೂ ಇಂಟರ್ನೆಟ್ ಸಂಪರ್ಕ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4 ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಅನುಮತಿ’ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಈ ಕುರಿತಂತೆ ಶನಿವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಹಾಗೂ ಸೊರಬ ತಾಲೂಕಿಗೆ ತಲಾ 8 ಮತ್ತು ಬೈಂದೂರು ಕ್ಷೇತ್ರಕ್ಕೆ 25 ಟವರ್ ಗಳು ಮಂಜೂರಾಗಿದೆ ಎಂದು ಮಾಹಿತಿ ನೀಡಿದ್ದಾರೆ.

‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಮೇ 26: ‘ಮಲೆನಾಡು ಭಾಗದಲ್ಲಿ ಮೊಬೈಲ್ ಫೋನ್ ಹಾಗೂ ಇಂಟರ್ನೆಟ್ ಸಂಪರ್ಕ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4 ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಅನುಮತಿ’ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಈ ಕುರಿತಂತೆ ಶನಿವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಹಾಗೂ ಸೊರಬ ತಾಲೂಕಿಗೆ ತಲಾ 8 ಮತ್ತು ಬೈಂದೂರು ಕ್ಷೇತ್ರಕ್ಕೆ 25 ಟವರ್ ಗಳು ಮಂಜೂರಾಗಿದೆ ಎಂದು ಮಾಹಿತಿ ನೀಡಿದ್ದಾರೆ.

‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ Read More
ಶಿವಮೊಗ್ಗ ನಗರದಲ್ಲಿ ಮಳೆಗಾಲದ ವೇಳೆ ಜನವಸತಿ ಪ್ರದೇಶಗಳಲ್ಲಿ ಉಂಟಾಗುವ ಜಲಾವೃತ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ನಗರದ ವಿವಿಧೆಡೆ ಭೇಟಿಯಿತ್ತು ನಡೆಸುತ್ತಿರುವ ಪರಿಶೀಲನಾ ಕಾರ್ಯ ಶುಕ್ರವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಎಲ್.ಬಿ.ಎಸ್. ನಗರ, ಶರಾವತಿ ನಗರ, ಹರಿಗೆ, ಗುರುಪುರ, ವಿದ್ಯಾನಗರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಹಾದು ಹೋಗಿರುವ ತುಂಗಾ ನಾಲೆ ಹಾಗೂ ಪ್ರಮುಖ ರಾಜ ಕಾಲುವೆಗಳ ಸ್ಥಿತಿಗತಿಯ ವೀಕ್ಷಣೆ ಮಾಡಿದರು. ಶರಾವತಿ ನಗರದ ಬಳಿ ಕೊಳಚೆ ನೀರು ತುಂಗಾ ನಾಲೆಗೆ ಸೇರ್ಪಡೆಯಾಗದಂತೆ ಹಾಗೂ ಎಲ್.ಬಿ.ಎಸ್. ನಗರದ ಚಾನಲ್ ಬಳಿ ಬಿದ್ದಿರುವ ಕಸದ ರಾಶಿ ತೆರವುಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಂಗಾರು ಮಳೆ ಆರಂಭವಾಗುವುದರೊಳಗೆ ರಾಜಕಾಲುವೆ, ಚರಂಡಿಗಳಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗುವ ವ್ಯವಸ್ಥೆ ಮಾಡಬೇಕು. ತಗ್ಗು ಪ್ರದೇಶಗಳಲ್ಲಿ ಸಮಸ್ಯೆ ತಲೆದೋರದಂತೆ ಅಗತ್ಯವಿರುವ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

ಮಳೆಗಾಲ ಮುನ್ನೆಚ್ಚರಿಕೆ ಕ್ರಮ : ಮುಂದುವರಿದ ಜಿಲ್ಲಾಧಿಕಾರಿಗಳ ಶಿವಮೊಗ್ಗ ಸಿಟಿ ರೌಂಡ್ಸ್..!

ಶಿವಮೊಗ್ಗ, ಮೇ 26:  ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಅವರು ಇಂದು ಸಹ ನಗರ ಹಾಗೂ ಹೊರವಲಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಮಳೆಯಿಂದ ಸಮಸ್ಯೆ ಎದುರಿಸಬಹುದಾದ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ತೆರಳಿ, ಸೂಕ್ತ ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಸಲಹೆ-ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯ ಎಲ್‍ಬಿಎಸ್ ನಗರದ ಚಾನಲ್‍ಗೆ ಭೇಟಿ ನೀಡಿ, ಚಾನಲ್‍ನಲ್ಲಿರುವ ಗಿಡಗಂಟಿ, ಕಸ ತೆಗೆಸಬೇಕು. ಇಲ್ಲವಾದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ನೀರು ಹೊರಗೆ ನುಗ್ಗುವ ಸಂಭವವಿದ್ದು, ನೀರು ಸರಾಗವಾಗಿ ಹರಿಯಲು ಅನುವಾಗುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದರು.

ಮಳೆಗಾಲ ಮುನ್ನೆಚ್ಚರಿಕೆ ಕ್ರಮ : ಮುಂದುವರಿದ ಜಿಲ್ಲಾಧಿಕಾರಿಗಳ ಶಿವಮೊಗ್ಗ ಸಿಟಿ ರೌಂಡ್ಸ್..! Read More
ಶಿವಮೊಗ್ಗ, ಮೇ 26: ಶಿವಮೊಗ್ಗ ನಗರದಲ್ಲಿ ಸರ್ಕಾರಿ ಸಿಟಿ ಬಸ್’ಗಳ ಸಂಚಾರ ಸಮರ್ಪಕವಾಗಿಲ್ಲ. ನಗರದ ಹೊರವಲಯದ ಪ್ರದೇಶಗಳಿಗೆ ಸಂಚರಿಸುತ್ತಿದ್ದ ಬಸ್ ಗಳ ಸಂಚಾರವನ್ನು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ಸ್ಥಗಿತಗೊಳಿಸಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಶೋಷಿತ ಸಮುದಾಯಗಳ ವೇದಿಕೆ ಆರೋಪಿಸಿದೆ. ಈ ಸಂಬಂಧ ಶುಕ್ರವಾರ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೆ.ಎಸ್.ಆರ್.ಟಿ.ಸಿ. ವಿರುದ್ದ ಸಂಘಟನೆ ಪ್ರತಿಭಟನೆ ನಡೆಸಿತು. ನಂತರ ಡಿಸಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಪತ್ರ ಅರ್ಪಿಸಿತು. ಸ್ಥಗಿತ: ಕೆ.ಎಸ್.ಆರ್.ಟಿ.ಸಿ. ಮುಖ್ಯ ಬಸ್ ನಿಲ್ದಾಣದಿಂದ ವಿನೋಬನಗರ ಮಾರ್ಗವಾಗಿ ಸೋಮಿನಕೊಪ್ಪ, ಕೋಟೆಗಂಗೂರು, ಸಿದ್ಲಿಪುರ, ಗೆಜ್ಜೇನಹಳ್ಳಿ, ವಿರುಪಿನಕೊಪ್ಪ ಸೇರಿದಂತೆ ವಿವಿಧ ಬಡಾವಣೆ ಹಾಗೂ ಗ್ರಾಮಗಳಿಗೆ ಸರ್ಕಾರಿ ಸಿಟಿ ಬಸ್ ಗಳನ್ನು ಓಡಿಸಲಾಗುತ್ತಿತ್ತು. ಇದರಿಂದ ಸಾವಿರಾರು ಜನರಿಗೆ ಅನುಕೂಲವಾಗಿತ್ತು.

ಸರ್ಕಾರಿ ಸಿಟಿ ಬಸ್ ಓಡಿಸಲು ಕೆ.ಎಸ್.ಆರ್.ಟಿ.ಸಿ. ನಿರ್ಲಕ್ಷ್ಯ : ಡಿಸಿ ಕಚೇರಿ ಎದುರು ಪ್ರತಿಭಟನೆ

ಶಿವಮೊಗ್ಗ, ಮೇ 26: ಶಿವಮೊಗ್ಗ ನಗರದಲ್ಲಿ ಸರ್ಕಾರಿ ಸಿಟಿ ಬಸ್’ಗಳ ಸಂಚಾರ ಸಮರ್ಪಕವಾಗಿಲ್ಲ. ನಗರದ ಹೊರವಲಯದ ಪ್ರದೇಶಗಳಿಗೆ ಸಂಚರಿಸುತ್ತಿದ್ದ ಬಸ್ ಗಳ ಸಂಚಾರವನ್ನು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ಸ್ಥಗಿತಗೊಳಿಸಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಶೋಷಿತ ಸಮುದಾಯಗಳ ವೇದಿಕೆ ಆರೋಪಿಸಿದೆ.

ಈ ಸಂಬಂಧ ಶುಕ್ರವಾರ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೆ.ಎಸ್.ಆರ್.ಟಿ.ಸಿ. ವಿರುದ್ದ ಸಂಘಟನೆ ಪ್ರತಿಭಟನೆ ನಡೆಸಿತು. ನಂತರ ಡಿಸಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಪತ್ರ ಅರ್ಪಿಸಿತು.

ಸರ್ಕಾರಿ ಸಿಟಿ ಬಸ್ ಓಡಿಸಲು ಕೆ.ಎಸ್.ಆರ್.ಟಿ.ಸಿ. ನಿರ್ಲಕ್ಷ್ಯ : ಡಿಸಿ ಕಚೇರಿ ಎದುರು ಪ್ರತಿಭಟನೆ Read More
ಶಿವಮೊಗ್ಗ, ಮೇ 25: ರೈಲ್ವೆ ಎಂಜಿನ್ ಹಾಗೂ ಬೋಗಿ ನಡುವೆ ಸಂಪರ್ಕದ ಕೊಂಡಿ ಕಳಚಿ, ಬೋಗಿಗಳನ್ನು ಬಿಟ್ಟು ಎಂಜಿನ್ ಮುಂದಕ್ಕೆ ಚಲಿಸಿದ ವಿಲಕ್ಷಣ ಘಟನೆ, ಭದ್ರಾವತಿ ತಾಲೂಕು ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ತಾಳಗುಪ್ಪ – ಬೆಂಗಳೂರು ನಡುವೆ ಸಂಚರಿಸುವ ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು, ಎಂಜಿನ್ – ಬೋಗಿಗಳ ನಡುವೆ ಸಂಪರ್ಕ ಕಳೆದುಕೊಂಡ ರೈಲಾಗಿದೆ. ಈ ಘಟನೆಯಿಂದ ಕೆಲ ಸಮಯ ಪ್ರಯಾಣಿಕರು ಗೊಂದಲಕ್ಕೊಳಗಾಗಿದ್ದರು. ತಾಳಗುಪ್ಪದಿಂದ ಶಿವಮೊಗ್ಗ ಮುಖ್ಯ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ ಸದರಿ ರೈಲು, ಬೆಳಿಗ್ಗೆ 7 ಗಂಟೆ 5 ನಿಮಿಷಕ್ಕೆ ಭದ್ರಾವತಿ ನಿಲ್ದಾಣದತ್ತ ಪ್ರಯಾಣ ಬೆಳೆಸಿತ್ತು. ಬಿಳಕಿ ಸಮೀಪ ಏಕಾಏಕಿ ರೈಲ್ವೆ ಎಂಜಿನ್ ಬೋಗಿಗಳ ಬಿಟ್ಟು ಮುಂದಕ್ಕೆ ಚಲಿಸಿದೆ. ಕೊಂಚ ದೂರ ಕ್ರಮಿಸಿದ ನಂತರ ಎಂಜಿನ್ ನನ್ನು, ಲೋಕೋ ಪೈಲೆಟ್ ನಿಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ರೈಲ್ವೆ ಎಂಜಿನ್ – ಬೋಗಿಗಳ ನಡುವೆ ತಪ್ಪಿದ ಸಂಪರ್ಕ..! ಬೋಗಿಗಳನ್ನೇ ಬಿಟ್ಟು ಮುಂದಕ್ಕೆ ಚಲಿಸಿದ ರೈಲ್ವೆ ಎಂಜಿನ್..!!

ಶಿವಮೊಗ್ಗ, ಮೇ 25: ರೈಲ್ವೆ ಎಂಜಿನ್ ಹಾಗೂ ಬೋಗಿ ನಡುವೆ ಸಂಪರ್ಕದ ಕೊಂಡಿ ಕಳಚಿ, ಬೋಗಿಗಳನ್ನು ಬಿಟ್ಟು ಎಂಜಿನ್ ಮುಂದಕ್ಕೆ ಚಲಿಸಿದ ವಿಲಕ್ಷಣ ಘಟನೆ, ಭದ್ರಾವತಿ ತಾಲೂಕು ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ತಾಳಗುಪ್ಪ – ಬೆಂಗಳೂರು ನಡುವೆ ಸಂಚರಿಸುವ ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು, ಎಂಜಿನ್ – ಬೋಗಿಗಳ ನಡುವೆ ಸಂಪರ್ಕ ಕಳೆದುಕೊಂಡ ರೈಲಾಗಿದೆ.  ಈ ಘಟನೆಯಿಂದ ಕೆಲ ಸಮಯ ಪ್ರಯಾಣಿಕರು ಗೊಂದಲಕ್ಕೊಳಗಾಗಿದ್ದರು.

ತಾಳಗುಪ್ಪದಿಂದ ಶಿವಮೊಗ್ಗ ಮುಖ್ಯ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ ಸದರಿ ರೈಲು, ಬೆಳಿಗ್ಗೆ 7 ಗಂಟೆ 5 ನಿಮಿಷಕ್ಕೆ ಭದ್ರಾವತಿ ನಿಲ್ದಾಣದತ್ತ ಪ್ರಯಾಣ ಬೆಳೆಸಿತ್ತು.

ರೈಲ್ವೆ ಎಂಜಿನ್ – ಬೋಗಿಗಳ ನಡುವೆ ತಪ್ಪಿದ ಸಂಪರ್ಕ..! ಬೋಗಿಗಳನ್ನೇ ಬಿಟ್ಟು ಮುಂದಕ್ಕೆ ಚಲಿಸಿದ ರೈಲ್ವೆ ಎಂಜಿನ್..!! Read More
ಶಿವಮೊಗ್ಗ, ಮೇ 25: ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಗಾಜನೂರಿನ ತುಂಗಾ ಜಲಾಶಯದಲ್ಲಿ ದಿನದಿಂದ ದಿನಕ್ಕೆ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಾಗುತ್ತಿದೆ! ಇದರ ನೇರ ಪರಿಣಾಮ ಶಿವಮೊಗ್ಗ ನಗರದ ಕುಡಿಯುವ ನೀರು ಪೂರೈಕೆ ಮೇಲೆ ಬೀರಿದೆ. ಹೌದು. ಕಳೆದ ಕೆಲ ದಿನಗಳಿಂದ ನಗರದ ಹಲವೆಡೆ ಕುಡಿಯುವ ನೀರಿಗೆ ತೀವ್ರ ಸ್ವರೂಪದ ಹಾಹಾಕಾರ ಕಂಡುಬರಲಾರಂಭಿಸಿದೆ. ಕೆಲ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ.!

ತುಂಗಾ ಡ್ಯಾಂನಲ್ಲಿ ಕಡಿಮೆಯಾಗುತ್ತಿರುವ ನೀರಿನ ಸಂಗ್ರಹ : ಶಿವಮೊಗ್ಗದಲ್ಲಿ ಕುಡಿಯುವ ನೀರಿಗೆ ಶುರುವಾಗಿದೆ ಹಾಹಾಕಾರ!

ಶಿವಮೊಗ್ಗ, ಮೇ 25: ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಗಾಜನೂರಿನ ತುಂಗಾ ಜಲಾಶಯದಲ್ಲಿ ದಿನದಿಂದ ದಿನಕ್ಕೆ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಾಗುತ್ತಿದೆ!

ಇದರ ನೇರ ಪರಿಣಾಮ ಶಿವಮೊಗ್ಗ ನಗರದ ಕುಡಿಯುವ ನೀರು ಪೂರೈಕೆ ಮೇಲೆ ಬೀರಿದೆ. ಹೌದು. ಕಳೆದ ಕೆಲ ದಿನಗಳಿಂದ ನಗರದ ಹಲವೆಡೆ ಕುಡಿಯುವ ನೀರಿಗೆ ತೀವ್ರ ಸ್ವರೂಪದ ಹಾಹಾಕಾರ ಕಂಡುಬರಲಾರಂಭಿಸಿದೆ. ಕೆಲ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ.!

ತುಂಗಾ ಡ್ಯಾಂನಲ್ಲಿ ಕಡಿಮೆಯಾಗುತ್ತಿರುವ ನೀರಿನ ಸಂಗ್ರಹ : ಶಿವಮೊಗ್ಗದಲ್ಲಿ ಕುಡಿಯುವ ನೀರಿಗೆ ಶುರುವಾಗಿದೆ ಹಾಹಾಕಾರ! Read More
ಶಿವಮೊಗ್ಗ, ಮೇ 25: ಶಿವಮೊಗ್ಗ ನಗರದ ಫ್ಯಾಮಿಲಿ ಸಲೂನ್ – ಸ್ಪಾ ಕೇಂದ್ರದಲ್ಲಿ ನಡೆಯುತ್ತಿದ್ದ, ಹೈಟೆಕ್ ವೇಶ್ಯಾವಾಟಿಕೆ ದಂಧೆ ಬಯಲಿಗೆ ಬಂದಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ, ಪತಿ-ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. 6 ಯುವತಿಯರನ್ನು ರಕ್ಷಿಸಿದ್ದಾರೆ. ಕುವೆಂಪು ರಸ್ತೆಯ ಕಟ್ಟಡವೊಂದರಲ್ಲಿ ನಡೆಯುತ್ತಿದ್ದ, ಫ್ಯಾಮಿಲಿ ಸಲೂನ್ ಮತ್ತು ಸ್ಪಾ ಕೇಂದ್ರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಮೇ 24 ರಂದು ಈ ಕಾರ್ಯಾಚರಣೆ ನಡೆಸಿದ್ದಾರೆ.

ಫ್ಯಾಮಿಲಿ ಸಲೂನ್ – ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ : ದಂಪತಿ ಅರೆಸ್ಟ್ – 6 ಯುವತಿಯರ ರಕ್ಷಣೆ!

ಶಿವಮೊಗ್ಗ, ಮೇ 25: ಶಿವಮೊಗ್ಗ ನಗರದ ಫ್ಯಾಮಿಲಿ ಸಲೂನ್ – ಸ್ಪಾ ಕೇಂದ್ರದಲ್ಲಿ ನಡೆಯುತ್ತಿದ್ದ, ಹೈಟೆಕ್ ವೇಶ್ಯಾವಾಟಿಕೆ ದಂಧೆ ಬಯಲಿಗೆ ಬಂದಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ, ಪತಿ-ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. 6 ಯುವತಿಯರನ್ನು ರಕ್ಷಿಸಿದ್ದಾರೆ.

ಕುವೆಂಪು ರಸ್ತೆಯ ಕಟ್ಟಡವೊಂದರಲ್ಲಿ ನಡೆಯುತ್ತಿದ್ದ, ಫ್ಯಾಮಿಲಿ ಸಲೂನ್ ಮತ್ತು ಸ್ಪಾ ಕೇಂದ್ರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಮೇ 24 ರಂದು ಈ ಕಾರ್ಯಾಚರಣೆ ನಡೆಸಿದ್ದಾರೆ.

ಫ್ಯಾಮಿಲಿ ಸಲೂನ್ – ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ : ದಂಪತಿ ಅರೆಸ್ಟ್ – 6 ಯುವತಿಯರ ರಕ್ಷಣೆ! Read More
ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ, ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ಅವರು ನೀಡಿದರು. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮಳೆಗಾಲ : ತಗ್ಗು ಪ್ರದೇಶಗಳು ಜಲಾವೃತವಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಿವಮೊಗ್ಗ ಡಿಸಿ ಖಡಕ್ ಸೂಚನೆ!

ಶಿವಮೊಗ್ಗ, ಮೇ.24 : ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ, ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ಅವರು ನೀಡಿದರು.

ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮಳೆಗಾಲ : ತಗ್ಗು ಪ್ರದೇಶಗಳು ಜಲಾವೃತವಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಿವಮೊಗ್ಗ ಡಿಸಿ ಖಡಕ್ ಸೂಚನೆ! Read More
ಶಿವಮೊಗ್ಗ, ಮೇ 23: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ತೊರೆದಿದ್ದ ಕೆಲ ನಾಯಕರು, ಇದೀಗ ಆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸದ್ದುಗದ್ದಲವಿಲ್ಲದೆ ಮತ್ತೇ ‘ಕೈ’ ಹಿಡಿಯುವ ಕಸರತ್ತು ನಡೆಸಲಾರಂಭಿಸಿದ್ದಾರೆ. ಆದರೆ ಪಕ್ಷಾಂತರ ನಾಯಕರ ಪುನಾರಾಗಮನಕ್ಕೆ, ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಲಾರಂಭಿಸಿದ್ದಾರೆ! ಈ ಸಂಬಂಧ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮಧು ಕುಮಾರ್ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಇತ್ತೀಚೆಗೆ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದ ಪಕ್ಷದ ಮುಖಂಡರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು’ ಎಂದು ಪಕ್ಷದ ವರಿಷ್ಠರಿಗೆ ಆಗ್ರಹಿಸಿದ್ದಾರೆ.

ಮತ್ತೇ ಕಾಂಗ್ರೆಸ್ ನತ್ತ ‘ಪಕ್ಷಾಂತರ’ ನಾಯಕರು : ಮರುಸೇರ್ಪಡೆಗೆ ಮುಖಂಡರ ಆಕ್ರೋಶ!

ಶಿವಮೊಗ್ಗ, ಮೇ 23: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ತೊರೆದಿದ್ದ ಕೆಲ ನಾಯಕರು, ಇದೀಗ ಆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸದ್ದುಗದ್ದಲವಿಲ್ಲದೆ ಮತ್ತೇ ‘ಕೈ’ ಹಿಡಿಯುವ ಕಸರತ್ತು ನಡೆಸಲಾರಂಭಿಸಿದ್ದಾರೆ. ಆದರೆ ಪಕ್ಷಾಂತರ ನಾಯಕರ ಪುನಾರಾಗಮನಕ್ಕೆ, ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಲಾರಂಭಿಸಿದ್ದಾರೆ!

ಈ ಸಂಬಂಧ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮಧು ಕುಮಾರ್ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಇತ್ತೀಚೆಗೆ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದ ಪಕ್ಷದ ಮುಖಂಡರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು’ ಎಂದು ಪಕ್ಷದ ವರಿಷ್ಠರಿಗೆ ಆಗ್ರಹಿಸಿದ್ದಾರೆ.

ಮತ್ತೇ ಕಾಂಗ್ರೆಸ್ ನತ್ತ ‘ಪಕ್ಷಾಂತರ’ ನಾಯಕರು : ಮರುಸೇರ್ಪಡೆಗೆ ಮುಖಂಡರ ಆಕ್ರೋಶ! Read More