ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಕ್ಷೇತ್ರಗಳ ಕಾಂಗ್ರೆಸ್ ಪಾಳೇಯದಲ್ಲಿ ಭಿನ್ನಮತ ಭುಗಿಲೆದ್ದಿದೆ! ಮೂರು ಕ್ಷೇತ್ರಗಳಲ್ಲಿ ಭಾನುವಾರ ಕೆಲ ಟಿಕೆಟ್ ಆಕಾಂಕ್ಷಿಗಳು ಮತ್ತವರ ಬೆಂಬಲಿಗರು ಬಹಿರಂಗವಾಗಿಯೇ ಆಕ್ರೋಶ ಹೊರ ಹಾಕಲಾರಂಭಿಸಿದ್ದಾರೆ. ಪ್ರತ್ಯೇಕ ಸಭೆ ನಡೆಸಿದ್ದಾರೆ. ಜೊತೆಗೆ ಕೆಲ ನಾಯಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರದಲ್ಲಿ ಟಿಕೆಟ್ ವಂಚಿತ ಕೆಲ ನಾಯಕರು ಪಕ್ಷದ ಅಧಿಕೃತ ಅಭ್ಯರ್ಥಿಯ ಎದುರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.

ಟಿಕೆಟ್ ಘೋಷಣೆ ಬೆನ್ನಲ್ಲೇ ‘ಕೈ’ ಪಾಳೇಯದಲ್ಲಿ ಭುಗಿಲೆದ್ದ ಭಿನ್ನಮತ!

ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಕ್ಷೇತ್ರಗಳ ಕಾಂಗ್ರೆಸ್ ಪಾಳೇಯದಲ್ಲಿ ಭಿನ್ನಮತ ಭುಗಿಲೆದ್ದಿದೆ!

ಮೂರು ಕ್ಷೇತ್ರಗಳಲ್ಲಿ ಭಾನುವಾರ ಕೆಲ ಟಿಕೆಟ್ ಆಕಾಂಕ್ಷಿಗಳು ಮತ್ತವರ ಬೆಂಬಲಿಗರು ಬಹಿರಂಗವಾಗಿಯೇ ಆಕ್ರೋಶ ಹೊರ ಹಾಕಲಾರಂಭಿಸಿದ್ದಾರೆ. ಪ್ರತ್ಯೇಕ ಸಭೆ ನಡೆಸಿದ್ದಾರೆ. ಜೊತೆಗೆ ಕೆಲ ನಾಯಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರದಲ್ಲಿ ಟಿಕೆಟ್ ವಂಚಿತ ಕೆಲ ನಾಯಕರು ಪಕ್ಷದ ಅಧಿಕೃತ ಅಭ್ಯರ್ಥಿಯ ಎದುರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.

ಟಿಕೆಟ್ ಘೋಷಣೆ ಬೆನ್ನಲ್ಲೇ ‘ಕೈ’ ಪಾಳೇಯದಲ್ಲಿ ಭುಗಿಲೆದ್ದ ಭಿನ್ನಮತ! Read More

ಡಿಸಿ – ಎಸ್ಪಿ ಖಡಕ್ ಸೂಚನೆ : ಮರಳು, ಜಲ್ಲಿ ಕಲ್ಲು ಸಾಗಾಣೆ ಲಾರಿಗಳು ವಶ!

ಅಕ್ರಮ ಮರಳು ಹಾಗೂ ಜಲ್ಲಿ ಕಲ್ಲು ಸಾಗಣೆಗೆ ಕಡಿವಾಣ ಹಾಕುವಂತೆ ಡಿಸಿ ಡಾ.ಆರ್.ಸೆಲ್ವಮಣಿ ಹಾಗೂ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಅವರು ಖಡಕ್ ಸೂಚನೆ ರವಾನಿಸಿದ ಬೆನ್ನಲ್ಲೇ, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಕಾನೂನುಬಾಹಿರವಾಗಿ ಮರಳು – ಜಲ್ಲಿಕಲ್ಲು ಸಾಗಾಣೆ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಡಿಸಿ – ಎಸ್ಪಿ ಖಡಕ್ ಸೂಚನೆ : ಮರಳು, ಜಲ್ಲಿ ಕಲ್ಲು ಸಾಗಾಣೆ ಲಾರಿಗಳು ವಶ! Read More
ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೂರನೇ ಹಂತದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಸದರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಈ ಮೂಲಕ ಜಿಲ್ಲೆಯ ಎಲ್ಲ 7 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಹುರಿಯಾಳುಗಳನ್ನು ಕಣಕ್ಕಿಳಿಸಿದಂತಾಗಿದೆ. ಪ್ರತಿಷ್ಠಿತ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹಾಲಿ ಮಹಾನಗರ ಪಾಲಿಕೆ ಕಾರ್ಪೋರೇಟರ್ ಹಾಗು ಮಾಜಿ ಸಚಿವ ಹೆಚ್.ಎಂ.ಚಂದ್ರಶೇಖರಪ್ಪ ಅವರ ಪುತ್ರ ಹೆಚ್.ಸಿ.ಯೋಗೇಶ್ ಅವರನ್ನು ಕಣಕ್ಕಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ, ಮಾಜಿ ಶಾಸಕ ಕರಿಯಣ್ಣ ಅವರ ಪುತ್ರ ಡಾ.ಶ್ರೀನಿವಾಸ್ ಕರಿಯಣ್ಣ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಪ್ರಕಟ!

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೂರನೇ ಹಂತದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಸದರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಈ ಮೂಲಕ ಜಿಲ್ಲೆಯ ಎಲ್ಲ 7 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಹುರಿಯಾಳುಗಳನ್ನು ಕಣಕ್ಕಿಳಿಸಿದಂತಾಗಿದೆ.

ಪ್ರತಿಷ್ಠಿತ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹಾಲಿ ಮಹಾನಗರ ಪಾಲಿಕೆ ಕಾರ್ಪೋರೇಟರ್ ಹಾಗು ಮಾಜಿ ಸಚಿವ ಹೆಚ್.ಎಂ.ಚಂದ್ರಶೇಖರಪ್ಪ ಅವರ ಪುತ್ರ ಹೆಚ್.ಸಿ.ಯೋಗೇಶ್ ಅವರನ್ನು ಕಣಕ್ಕಿಳಿಸಲಾಗುತ್ತಿದೆ.

ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಪ್ರಕಟ! Read More
ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ವೊಂದು, ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಪರಿಣಾಮ, ಬಸ್ ನಲ್ಲಿದ್ದ 13 ಜನ ಮೃತಪಟ್ಟು 27 ಮಂದಿ ಗಾಯಗೊಂಡ ದಾರುಣ ಘಟನೆ ಮಹಾರಾಷ್ಟ್ರ ರಾಜ್ಯದ ರಾಯಗಡ ಬಳಿ ಶನಿವಾರ ಮುಂಜಾನೆ ನಡೆದಿದೆ.

ಮಹಾರಾಷ್ಟ್ರದ ರಾಯಗಡ ಬಳಿ ಕಂದಕಕ್ಕೆ ಉರುಳಿದ ಖಾಸಗಿ ಬಸ್ : 13 ಮಂದಿ ಸಾವು – 29 ಜನರಿಗೆ ಗಾಯ!

ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ವೊಂದು, ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಪರಿಣಾಮ, ಬಸ್ ನಲ್ಲಿದ್ದ 13 ಜನ ಮೃತಪಟ್ಟು 27 ಮಂದಿ ಗಾಯಗೊಂಡ ದಾರುಣ ಘಟನೆ ಮಹಾರಾಷ್ಟ್ರ ರಾಜ್ಯದ ರಾಯಗಡ ಬಳಿ ಶನಿವಾರ ಮುಂಜಾನೆ ನಡೆದಿದೆ.

ಮುಂಬಯಿ – ಪುಣೆ ಹಳೇ ಹೆದ್ಧಾರಿಯ, ಖೋಪೊಲಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿಂಗ್ರೋಬಾ ದೇವಾಲಯ ಸಮೀಪ ಅವಘಡ ಸಂಭವಿಸಿದೆ. ಸದರಿ ಸ್ಥಳವು ಮುಂಬೈಯಿಂದ 70 ಕಿ.ಮೀ. ದೂರದಲ್ಲಿದೆ. ಪುಣೆಯ ಪಿಂಪ್ರಿ ಚಿಂಚವಾಡದಿಂದ ಮುಂಬೈಗೆ ಬಸ್ ಆಗಮಿಸುತ್ತಿದ್ದ ವೇಳೆ ಈ ಭೀಕರ ಅವಘಡ ಸಂಭವಿಸಿದೆ.

ಮಹಾರಾಷ್ಟ್ರದ ರಾಯಗಡ ಬಳಿ ಕಂದಕಕ್ಕೆ ಉರುಳಿದ ಖಾಸಗಿ ಬಸ್ : 13 ಮಂದಿ ಸಾವು – 29 ಜನರಿಗೆ ಗಾಯ! Read More
ಜಾತಿ, ಮತ ಬಿಡಿ ಮಾನವತೆಗೆ ಜೀವ ಕೊಡಿ ಎನ್ನುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ರವರು ಜಾತಿ-ಮತ ಮೀರಲು ಅವಶ್ಯಕವಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದರು ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಮಹಾದೇವಸ್ವಾಮಿ ತಿಳಿಸಿದರು. ಶಿವಮೊಗ್ಗ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ರವರ 132 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

‘ಜಾತಿ-ಮತ ಬಿಡಿ, ಮಾನವತೆಗೆ ಜೀವ ಕೊಡಿ ಎಂದಿದ್ದರು ಡಾ.ಬಿ.ಆರ್.ಅಂಬೇಡ್ಕರ್’ : ಪ್ರೊ.ಮಹಾದೇವಸ್ವಾಮಿ

ಜಾತಿ, ಮತ ಬಿಡಿ ಮಾನವತೆಗೆ ಜೀವ ಕೊಡಿ ಎನ್ನುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್‍ರವರು ಜಾತಿ-ಮತ ಮೀರಲು ಅವಶ್ಯಕವಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದರು ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಮಹಾದೇವಸ್ವಾಮಿ ತಿಳಿಸಿದರು.

ಶಿವಮೊಗ್ಗ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‍ರವರ 132 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

‘ಜಾತಿ-ಮತ ಬಿಡಿ, ಮಾನವತೆಗೆ ಜೀವ ಕೊಡಿ ಎಂದಿದ್ದರು ಡಾ.ಬಿ.ಆರ್.ಅಂಬೇಡ್ಕರ್’ : ಪ್ರೊ.ಮಹಾದೇವಸ್ವಾಮಿ Read More
ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ಚಾಲನೆ ದೊರಕಿ ಎರಡು ದಿನವಾಗಿದೆ. ಆದರೆ ಇಲ್ಲಿಯವರೆಗೂ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿಲ್ಲ. ಆದರೆ ಮೂರು ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ, ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಇದರಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಕುರಿತಂತೆ, ರಾಜಕೀಯ ವಲಯದಲ್ಲಿ ಮತ್ತಷ್ಟು ರೋಚಕತೆ ಮನೆ ಮಾಡುವಂತಾಗಿದೆ!

ಶಿವಮೊಗ್ಗ ನಗರ ಕ್ಷೇತ್ರ : ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್’ಗೆ ಬಿಜೆಪಿ ಟಿಕೆಟ್ ಸಾಧ್ಯತೆ..?

ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ಚಾಲನೆ ದೊರಕಿ ಎರಡು ದಿನವಾಗಿದೆ. ಆದರೆ ಇಲ್ಲಿಯವರೆಗೂ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿಲ್ಲ. ಆದರೆ ಮೂರು ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ, ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಇದರಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಕುರಿತಂತೆ, ರಾಜಕೀಯ ವಲಯದಲ್ಲಿ ಮತ್ತಷ್ಟು ರೋಚಕತೆ ಮನೆ ಮಾಡುವಂತಾಗಿದೆ!

ಶಿವಮೊಗ್ಗ ನಗರ ಕ್ಷೇತ್ರ : ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್’ಗೆ ಬಿಜೆಪಿ ಟಿಕೆಟ್ ಸಾಧ್ಯತೆ..? Read More

ಸಾಗರ ವಿಧಾನಸಭಾ ಕ್ಷೇತ್ರ : ಮುಖಂಡ ತೀ.ನಾ.ಶ್ರೀನಿವಾಸ್ ನಾಮಪತ್ರ ಸಲ್ಲಿಕೆ

ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕರಾದ, ಇತ್ತೀಚೆಗೆ ಕಾಂಗ್ರೆಸ್ ಪಕ್ಷ ತೊರೆದಿದ್ದ ಆ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಸಾಗರ ವಿಧಾನಸಭಾ ಕ್ಷೇತ್ರ : ಮುಖಂಡ ತೀ.ನಾ.ಶ್ರೀನಿವಾಸ್ ನಾಮಪತ್ರ ಸಲ್ಲಿಕೆ Read More
ಎನ್.ಆರ್.ಪುರ (ಚಿಕ್ಕಮಗಳೂರು), ಎ. 13: ‘ಮೂಲಸೌಕರ್ಯಗಳ ಕೊರತೆ, ಆಡಳಿತ ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಖಂಡಿಸಿ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ’ ಎಂದು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಭೈರಾಪುರ ಗ್ರಾಮದ ಮರಾಠಿ ಕ್ಯಾಂಪ್ ಗ್ರಾಮಸ್ಥರು ತಿಳಿಸಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರ್ಪಡೆಯಾಗುವ ತಮ್ಮ ಗ್ರಾಮಕ್ಕೆ ಸೂಕ್ತ ಸಂಪರ್ಕ ರಸ್ತೆಯಿಲ್ಲ. ಕುಡಿಯುವ ನೀರಿನ ಪೂರೈಕೆಯಿಲ್ಲ. ಅಂಗನವಾಡಿ ಕೇಂದ್ರವೂ ಇಲ್ಲ. ಮೂರು ಕಿ.ಮೀ. ದೂರದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಕಾಡಲ್ಲಿ ಪುಟಾಣಿ ಮಕ್ಕಳು ನಡೆದುಕೊಂಡು ಹೋಗಬೇಕು ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಮತದಾನ ಬಹಿಷ್ಕಾರಕ್ಕೆ ಕರೆ ನೀಡಿದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಭೈರಾಪುರ ಮರಾಠಿ ಕ್ಯಾಂಪ್ ಗ್ರಾಮಸ್ಥರು!

ಎನ್.ಆರ್.ಪುರ (ಚಿಕ್ಕಮಗಳೂರು), ಎ. 13: ‘ಮೂಲಸೌಕರ್ಯಗಳ ಕೊರತೆ, ಆಡಳಿತ ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಖಂಡಿಸಿ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ’ ಎಂದು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಭೈರಾಪುರ ಗ್ರಾಮದ ಮರಾಠಿ ಕ್ಯಾಂಪ್ ಗ್ರಾಮಸ್ಥರು ತಿಳಿಸಿದ್ದಾರೆ.

ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರ್ಪಡೆಯಾಗುವ ತಮ್ಮ ಗ್ರಾಮಕ್ಕೆ ಸೂಕ್ತ ಸಂಪರ್ಕ ರಸ್ತೆಯಿಲ್ಲ. ಕುಡಿಯುವ ನೀರಿನ ಪೂರೈಕೆಯಿಲ್ಲ. ಅಂಗನವಾಡಿ ಕೇಂದ್ರವೂ ಇಲ್ಲ. ಮೂರು ಕಿ.ಮೀ. ದೂರದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಕಾಡಲ್ಲಿ ಪುಟಾಣಿ ಮಕ್ಕಳು ನಡೆದುಕೊಂಡು ಹೋಗಬೇಕು ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಮತದಾನ ಬಹಿಷ್ಕಾರಕ್ಕೆ ಕರೆ ನೀಡಿದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಭೈರಾಪುರ ಮರಾಠಿ ಕ್ಯಾಂಪ್ ಗ್ರಾಮಸ್ಥರು! Read More
ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣ ಕಣ ರಂಗೇರಲಾರಂಭಿಸಿದೆ. ಈಗಾಗಲೇ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ನಾಲ್ಕು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಪಕ್ಷದ, ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಾಕಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ!

ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಕ್ಷೇತ್ರ : ಕುತೂಹಲ ಮೂಡಿಸಿದ ‘ಕೈ’ ಅಭ್ಯರ್ಥಿಗಳ ಆಯ್ಕೆ!

ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣ ಕಣ ರಂಗೇರಲಾರಂಭಿಸಿದೆ. ಈಗಾಗಲೇ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ನಾಲ್ಕು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಪಕ್ಷದ, ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಾಕಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ!

ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಕ್ಷೇತ್ರ : ಕುತೂಹಲ ಮೂಡಿಸಿದ ‘ಕೈ’ ಅಭ್ಯರ್ಥಿಗಳ ಆಯ್ಕೆ! Read More
ರಾಷ್ಟ್ರೀಯ ಹೆದ್ಧಾರಿ ಬದಿಯ ಆಲದ ಮರವೊಂದರ ಬಳಿ ವಾಮಾಚಾರ ನಡೆಸಿ, ಸದರಿ ಸ್ಥಳದಲ್ಲಿಯೇ ಜೀವಂತ ಕುರಿ ಬಿಟ್ಟು ಹೋದ ಘಟನೆ, ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಭೋವಿ ಕಾಲೋನಿ ಸಮೀಪ ನಡೆದಿದ್ದು ಗುರುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ! ತಡರಾತ್ರಿ ವೇಳೆ ವಾಮಾಚಾರ ನಡೆಸಲಾಗಿದೆ. ವಾಮಾಚಾರ ನಡೆಸಿದ ಸ್ಥಳದಲ್ಲಿ ಮಡಕೆಗಳು, ಅನ್ನ, ಬಿದಿರಿನ ಮರ ಹಾಗೂ ಪುಟ್ಟಿಗಳು, ಮೊಟ್ಟೆ, ಬಟ್ಟೆಗಳು, ಅರಿಷಿಣ-ಕುಂಕುಮ, ಗೊಂಬೆ ಸೇರಿದಂತೆ ಮೊದಲಾದ ಪೂಜಾ ಸಾಮಗ್ರಿಗಳಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ವಾಮಾಚಾರ ಮಾಡಿದ ಸ್ಥಳದಲ್ಲಿಯೇ ಜೀವಂತ ಕುರಿ ಬಿಟ್ಟು ಹೋದರು..!

ರಾಷ್ಟ್ರೀಯ ಹೆದ್ಧಾರಿ ಬದಿಯ ಆಲದ ಮರವೊಂದರ ಬಳಿ ವಾಮಾಚಾರ ಮಾಡಿ, ಸದರಿ ಸ್ಥಳದಲ್ಲಿ ಜೀವಂತ ಕುರಿ ಬಿಟ್ಟು ಹೋದ ಘಟನೆ, ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಗ್ರಾಮದಲ್ಲಿ ನಡೆದಿದ್ದು ಗುರುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ!

ವಾಮಾಚಾರ ಮಾಡಿದ ಸ್ಥಳದಲ್ಲಿಯೇ ಜೀವಂತ ಕುರಿ ಬಿಟ್ಟು ಹೋದರು..! Read More