ಕಳೆದ ಸರಿಸುಮಾರು ನಾಲ್ಕು ದಶಕಗಳಿಂದ ಬಿ.ಎಸ್.ಯಡಿಯೂರಪ್ಪ ಸ್ಪರ್ಧೆಯಿಂದ ಗಮನ ಸೆಳೆಯುತ್ತಿದ್ದ ಶಿಕಾರಿಪುರ ವಿಧಾನಸಭಾ ಕ್ಷೇತ್ರ, ಪ್ರಸ್ತುತ ಅವರ ಪುತ್ರ ಬಿ.ವೈ.ವಿಜಯೇಂದ್ರ ಅಖಾಡದಿಂದ ಕುತೂಹಲ ಕೆರಳಿಸಿದೆ. ಹಾಗೆಯೇ ಬದಲಾದ ರಾಜಕೀಯ ವಾತಾವರಣ, ಕೆಲ ಘಟನೆಗಳ ಹಿನ್ನೆಲೆಯಲ್ಲಿ ಪ್ರಸ್ತುತ ಚುನಾವಣಾ ಕಣ ಕಾವೇರುವಂತೆ ಮಾಡಿದೆ! ಇದೇ ಮೊದಲ ಬಾರಿಗೆ ಅಖಾಡಕ್ಕಿಳಿದಿರುವ ಬಿ.ವೈ.ವಿಜಯೇಂದ್ರಗೆ, ಪ್ರಥಮ ಚುನಾವಣೆಯೇ ಅಕ್ಷರಶಃ ಅಗ್ನಿ ಪರೀಕ್ಷೆಯಾಗಿದೆ. ಪ್ರತಿಷ್ಠೆಯ ಪ್ರಶ್ನೆಯಾಗಿದೆ. ರಾಜಕೀಯ ಭವಿಷ್ಯದ ದೃಷ್ಟಿಯಿಂದ ಗೆಲ್ಲಲೇಬೇಕಾದ ಅನಿವಾರ್ಯ ಒತ್ತಡ ಅವರ ಮೇಲಿದೆ.

ಶಿಕಾರಿಪುರ ವಿಧಾನಸಭಾ ಕ್ಷೇತ್ರ : ಯಾರಾಗಲಿದ್ದಾರೆ ಶಿಕಾರಿ..?!

ಕಳೆದ ಸರಿಸುಮಾರು ನಾಲ್ಕು ದಶಕಗಳಿಂದ ಬಿ.ಎಸ್.ಯಡಿಯೂರಪ್ಪ ಸ್ಪರ್ಧೆಯಿಂದ ಗಮನ ಸೆಳೆಯುತ್ತಿದ್ದ ಶಿಕಾರಿಪುರ ವಿಧಾನಸಭಾ ಕ್ಷೇತ್ರ, ಪ್ರಸ್ತುತ ಅವರ ಪುತ್ರ ಬಿ.ವೈ.ವಿಜಯೇಂದ್ರ ಅಖಾಡದಿಂದ ಕುತೂಹಲ ಕೆರಳಿಸಿದೆ. ಹಾಗೆಯೇ ಬದಲಾದ ರಾಜಕೀಯ ವಾತಾವರಣ, ಕೆಲ ಘಟನೆಗಳ ಹಿನ್ನೆಲೆಯಲ್ಲಿ ಪ್ರಸ್ತುತ ಚುನಾವಣಾ ಕಣ ಕಾವೇರುವಂತೆ ಮಾಡಿದೆ!

ಇದೇ ಮೊದಲ ಬಾರಿಗೆ ಅಖಾಡಕ್ಕಿಳಿದಿರುವ ಬಿ.ವೈ.ವಿಜಯೇಂದ್ರಗೆ, ಪ್ರಥಮ ಚುನಾವಣೆಯೇ ಅಕ್ಷರಶಃ ಅಗ್ನಿ ಪರೀಕ್ಷೆಯಾಗಿದೆ. ಪ್ರತಿಷ್ಠೆಯ ಪ್ರಶ್ನೆಯಾಗಿದೆ. ರಾಜಕೀಯ ಭವಿಷ್ಯದ ದೃಷ್ಟಿಯಿಂದ ಗೆಲ್ಲಲೇಬೇಕಾದ ಅನಿವಾರ್ಯ ಒತ್ತಡ ಅವರ ಮೇಲಿದೆ.

ಶಿಕಾರಿಪುರ ವಿಧಾನಸಭಾ ಕ್ಷೇತ್ರ : ಯಾರಾಗಲಿದ್ದಾರೆ ಶಿಕಾರಿ..?! Read More
ಶಿವಮೊಗ್ಗ, ಎ. 25: ಶಿವಮೊಗ್ಗ ನಗರದ ಹೊರವಲಯ ಗಾಡಿಕೊಪ್ಪದಲ್ಲಿ ಎರಡು ದಿನಗಳ ಕಾಲ ನಡೆದ, ಮುದ್ದು ಬಸವೇಶ್ವರ ಹಾಗೂ ಕೆಂಡದೇಶ್ವರಿ ಜಾತ್ರಾ ಮಹೋತ್ಸವ ಮತ್ತು ಗುಗ್ಗಳ ಕೆಂಡಾರ್ಚನೆಯು ಮಂಗಳವಾರ ಸಂಪನ್ನಗೊಂಡಿತು.

ಶಿವಮೊಗ್ಗ : ಗಾಡಿಕೊಪ್ಪದಲ್ಲಿ ಯಶಸ್ವಿಯಾಗಿ ನಡೆದ ಜಾತ್ರಾ ಮಹೋತ್ಸವ

ಶಿವಮೊಗ್ಗ, ಎ. 25: ಶಿವಮೊಗ್ಗ ನಗರದ ಹೊರವಲಯ ಗಾಡಿಕೊಪ್ಪದಲ್ಲಿ ಎರಡು ದಿನಗಳ ಕಾಲ ನಡೆದ, ಮುದ್ದು ಬಸವೇಶ್ವರ ಹಾಗೂ ಕೆಂಡದೇಶ್ವರಿ ಜಾತ್ರಾ ಮಹೋತ್ಸವ ಮತ್ತು ಗುಗ್ಗಳ ಕೆಂಡಾರ್ಚನೆಯು ಮಂಗಳವಾರ ಸಂಪನ್ನಗೊಂಡಿತು.

ಶಿವಮೊಗ್ಗ : ಗಾಡಿಕೊಪ್ಪದಲ್ಲಿ ಯಶಸ್ವಿಯಾಗಿ ನಡೆದ ಜಾತ್ರಾ ಮಹೋತ್ಸವ Read More
ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಿಸಿಲ ಬೇಗೆಯಿಂದ ಕೆರೆಕಟ್ಟೆಗಳು ನೀರಿಲ್ಲದೆ ಬರಿದಾಗುತ್ತಿದ್ದು, ತಕ್ಷಣವೇ ತುಂಗಾಭದ್ರಾ ನದಿಯಿಂದ ಕೆರೆಗಳಿಗೆ ನೀರು ಹರಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ಮಂಗಳವಾರ ಶಿವಮೊಗ್ಗ ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರಿಗೆ ಕೊಮ್ಮನಾಳು, ಸೋಮಿನಕೊಪ್ಪ, ಆಲದಹಳ್ಳಿ, ಹರಮಘಟ್ಟ, ಸುತ್ತುಕೋಟೆ, ಬನ್ನಿಕೆರೆ, ಬೂದಿಗೆರೆ ಕಾಲೋನಿ, ಬಿಕೊನಹಳ್ಳಿ, ಕಿಟ್ಟತಾಳು ಗ್ರಾಮಸ್ಥರು ಮನವಿ ಪತ್ರ ಅರ್ಪಿಸಿದ್ದಾರೆ. ಹಾಹಾಕಾರ: ಹರಮಘಟ್ಟದ ಗೌಡನ ಕೆರೆ, ಹರಮಘಟ್ಟದ ಸಿಗೇಕೆರೆ, ಬೂದಿಗೆರೆ ಕೆರೆ, ಸುತ್ತುಕೋಟೆ, ಅಯ್ಯನಕೆರೆ ಸೇರಿದಂತೆ ಹಲವು ಕೆರೆಗಳು ಬತ್ತಲಾರಂಭಿಸಿದೆ. ಬೋರ್’ವೆಲ್, ಬಾವಿ ಮತ್ತೀತರ ಜಲಮೂಲಗಳ ಅಂತರ್ಜಲದ ಪ್ರಮಾಣ ಕೂಡ ಕುಸಿಯುತ್ತಿದೆ. ಕುಡಿಯುವ ನೀರಿಗೂ ಹಾಹಾಕಾರ ಎದುರಾಗಲಾರಂಭಿಸಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಬಿಸಿಲ ಬೇಗೆಗೆ ಬತ್ತಿದ ಕೆರೆಗಳು : ತುಂಗಾಭದ್ರಾ ನದಿಯಿಂದ ನೀರು ಹರಿಸಲು ಆಗ್ರಹಿಸಿ ಮನವಿ

ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಿಸಿಲ ಬೇಗೆಯಿಂದ ಕೆರೆಕಟ್ಟೆಗಳು ನೀರಿಲ್ಲದೆ ಬರಿದಾಗುತ್ತಿದ್ದು, ತಕ್ಷಣವೇ ತುಂಗಾಭದ್ರಾ ನದಿಯಿಂದ ಕೆರೆಗಳಿಗೆ ನೀರು ಹರಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

ಈ ಸಂಬಂಧ ಮಂಗಳವಾರ ಶಿವಮೊಗ್ಗ ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರಿಗೆ ಕೊಮ್ಮನಾಳು, ಸೋಮಿನಕೊಪ್ಪ, ಆಲದಹಳ್ಳಿ, ಹರಮಘಟ್ಟ, ಸುತ್ತುಕೋಟೆ, ಬನ್ನಿಕೆರೆ, ಬೂದಿಗೆರೆ ಕಾಲೋನಿ, ಬಿಕೊನಹಳ್ಳಿ, ಕಿಟ್ಟತಾಳು ಗ್ರಾಮಸ್ಥರು ಮನವಿ ಪತ್ರ ಅರ್ಪಿಸಿದ್ದಾರೆ.

ಬಿಸಿಲ ಬೇಗೆಗೆ ಬತ್ತಿದ ಕೆರೆಗಳು : ತುಂಗಾಭದ್ರಾ ನದಿಯಿಂದ ನೀರು ಹರಿಸಲು ಆಗ್ರಹಿಸಿ ಮನವಿ Read More
ಮತದಾನ ಕೇಂದ್ರ ಹೇಗಿರಲಿದೆ, ಅಲ್ಲಿರುವ ವ್ಯವಸ್ಥೆಗಳೇನು, ಮತಯಂತ್ರ ಹಾಗೂ ವಿವಿ ಪ್ಯಾಟ್ ಗಳ ಕಾರ್ಯನಿರ್ವಹಣೆ, ವೋಟರ್ ಹೆಲ್ಫಲೈನ್ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಹಲವು ಮಾಹಿತಿ ಒಳಗೊಂಡ ವಿಶೇಷ ‘ಸ್ವೀಪ್ ಎಕ್ಸ್ಪ್ರೆಸ್’ ಬಸ್ ವೊಂದನ್ನು ಶಿವಮೊಗ್ಗ ಜಿಲ್ಲಾಡಳಿತ ಸಿದ್ದಪಡಿಸಿದೆ.

ಎಕ್ಸ್‌ಪ್ರೆಸ್‌ ಬಸ್ ಮೂಲಕ ಮತದಾನ ಪ್ರಕ್ರಿಯೆ ಕುರಿತಂತೆ ಜಾಗೃತಿ : ಶಿವಮೊಗ್ಗ ಜಿಲ್ಲಾಡಳಿತದ ವಿನೂತನ ಪ್ರಯೋಗ!

ಮತದಾನ ಕೇಂದ್ರ ಹೇಗಿರಲಿದೆ, ಅಲ್ಲಿರುವ ವ್ಯವಸ್ಥೆಗಳೇನು, ಮತಯಂತ್ರ ಹಾಗೂ ವಿವಿ ಪ್ಯಾಟ್ ಗಳ ಕಾರ್ಯನಿರ್ವಹಣೆ, ವೋಟರ್ ಹೆಲ್ಫಲೈನ್ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಹಲವು ಮಾಹಿತಿ ಒಳಗೊಂಡ ವಿಶೇಷ ‘ಸ್ವೀಪ್ ಎಕ್ಸ್‌ಪ್ರೆಸ್‌’ ಬಸ್ ವೊಂದನ್ನು ಶಿವಮೊಗ್ಗ ಜಿಲ್ಲಾಡಳಿತ ಸಿದ್ದಪಡಿಸಿದೆ.

ಈ ಬಸ್ ಮೇ 9 ರವರೆಗೆ ಜಿಲ್ಲೆಯಾದ್ಯಂತ ಸಂಚರಿಸಲಿದೆ. ಮತದಾನದ ಕುರಿತಂತೆ ಜಾಗೃತಿ ಮೂಡಿಸಲಿದೆ. ವಿಶೇಷವಾಗಿ ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಪ್ರದೇಶಗಳಲ್ಲಿ ಈ ಬಸ್ ಹೆಚ್ಚಿನದಾಗಿ ಸಂಚರಿಸಲಿದೆ.

ಎಕ್ಸ್‌ಪ್ರೆಸ್‌ ಬಸ್ ಮೂಲಕ ಮತದಾನ ಪ್ರಕ್ರಿಯೆ ಕುರಿತಂತೆ ಜಾಗೃತಿ : ಶಿವಮೊಗ್ಗ ಜಿಲ್ಲಾಡಳಿತದ ವಿನೂತನ ಪ್ರಯೋಗ! Read More
ವಿಧಾನಸಭೆ ಚುನಾವಣೆ : ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..! ಲಕ್ಷಾಂತರ ರೂ. ಮೌಲ್ಯದ ಸೀರೆ ದಾಸ್ತಾನು ಪತ್ತೆ : ಮುಂದುವರಿದ ಕಟ್ಟುನಿಟ್ಟಿನ ತಪಾಸಣೆ

ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..!

ಶಿವಮೊಗ್ಗ, ಎ. 25: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಕೊಂಡೊಯ್ಯಲಾಗುತ್ತಿದ್ದ ಕೋಟ್ಯಾಂತರ ರೂಪಾಯಿ ಹಾಗೂ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಮುಂದಿನಂತಿದೆ.

ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..! Read More
ಶಿವಮೊಗ್ಗ, ಏ. 24: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಏ.24 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿತ್ತು. ಒಟ್ಟಾರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಅಂತಿಮವಾಗಿ 74 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಕ್ಷೇತ್ರವಾರು ವಿವರ ಈ ಮುಂದಿನಂತಿದೆ.

ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ : ಅಖಾಡದಲ್ಲಿ 74 ಅಭ್ಯರ್ಥಿಗಳು

ಶಿವಮೊಗ್ಗ, ಏ. 24: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಏ.24 ಉಮೇದುವಾರಿಕೆ  ಹಿಂಪಡೆಯಲು ಕಡೆಯ ದಿನವಾಗಿತ್ತು. ಒಟ್ಟಾರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಅಂತಿಮವಾಗಿ 74 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಕ್ಷೇತ್ರವಾರು ವಿವರ ಈ ಮುಂದಿನಂತಿದೆ.

ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ : ಅಖಾಡದಲ್ಲಿ 74 ಅಭ್ಯರ್ಥಿಗಳು Read More
ಶಿವಮೊಗ್ಗ ಗ್ರಾಮಾಂತರ (ಪರಿಶಿಷ್ಟ ಜಾತಿ ಮೀಸಲು) ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ, ಸುಡು ಬಿಸಿಲಿನಷ್ಟೆ ಕಾವೇರಿದೆ! ಈ ಕ್ಷೇತ್ರ ಅಸ್ತಿತ್ವಕ್ಕೆ ಬಂದ ನಂತರ ಮೂರು ಚುನಾವಣೆಗಳು ನಡೆದಿವೆ. ಎರಡು ಬಾರಿ ಬಿಜೆಪಿ, ಒಂದು ಬಾರಿ ಜೆಡಿಎಸ್ ಜಯ ಸಾಧಿಸಿದೆ. ಆದರೆ ಒಮ್ಮೆ ಜಯ ಸಾಧಿಸಿದವರು ಮತ್ತೊಮ್ಮೆ ಆಯ್ಕೆಯಾಗಿಲ್ಲ! ಕಳೆದ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನಿಂದ ಕಣಕ್ಕಿಳಿದ ಅಭ್ಯರ್ಥಿಗಳೇ ಈ ಬಾರಿಯೂ ಎದುರಾಳಿಗಳಾಗಿದ್ದಾರೆ. ಬಿಜೆಪಿಯಿಂದ ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್, ಜೆಡಿಎಸ್ ನಿಂದ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಹಾಗೂ ಕಾಂಗ್ರೆಸ್ ನಿಂದ ಡಾ.ಶ್ರೀನಿವಾಸ್ ಕರಿಯಣ್ಣ ಸ್ಪರ್ಧಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ : ಕಾವೇರಿದ ಚುನಾವಣಾ ಕಣ!

ಶಿವಮೊಗ್ಗ ಗ್ರಾಮಾಂತರ (ಪರಿಶಿಷ್ಟ ಜಾತಿ ಮೀಸಲು) ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ, ಸುಡು ಬಿಸಿಲಿನಷ್ಟೆ ಕಾವೇರಿದೆ! ಈ ಕ್ಷೇತ್ರ ಅಸ್ತಿತ್ವಕ್ಕೆ ಬಂದ ನಂತರ ಮೂರು ಚುನಾವಣೆಗಳು ನಡೆದಿವೆ. ಎರಡು ಬಾರಿ ಬಿಜೆಪಿ, ಒಂದು ಬಾರಿ ಜೆಡಿಎಸ್ ಜಯ ಸಾಧಿಸಿದೆ. ಆದರೆ ಒಮ್ಮೆ ಜಯ ಸಾಧಿಸಿದವರು ಮತ್ತೊಮ್ಮೆ ಆಯ್ಕೆಯಾಗಿಲ್ಲ!

ಕಳೆದ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನಿಂದ ಕಣಕ್ಕಿಳಿದ ಅಭ್ಯರ್ಥಿಗಳೇ ಈ ಬಾರಿಯೂ ಎದುರಾಳಿಗಳಾಗಿದ್ದಾರೆ. ಬಿಜೆಪಿಯಿಂದ ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್, ಜೆಡಿಎಸ್ ನಿಂದ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಹಾಗೂ ಕಾಂಗ್ರೆಸ್ ನಿಂದ ಡಾ.ಶ್ರೀನಿವಾಸ್ ಕರಿಯಣ್ಣ ಸ್ಪರ್ಧಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ : ಕಾವೇರಿದ ಚುನಾವಣಾ ಕಣ! Read More
ಶಿವಮೊಗ್ಗ ನಗರದ ಹೊರವಲಯ ಕೇಂದ್ರ ಕಾರಾಗೃಹಕ್ಕೆ ಸೋಮವಾರ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದ ಪೊಲೀಸ್ ತಂಡವು, ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ ಘಟನೆ ನಡೆಯಿತು. ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್, ಇನ್ಸ್’ಪೆಕ್ಟರ್ ಗಳಾದ ಮಂಜುನಾಥ್, ಅಂಜನ್ ಕುಮಾರ್, ಗಜೇಂದ್ರಪ್ಪ, ಜಯಶ್ರೀ ಮಾನೆ, ಸಂಜೀವ್ ಮಹಾಜನ್ ಹಾಗೂ 5 ಜನ ಸಬ್ ಇನ್ಸ್’ಪೆಕ್ಟರ್ ಸೇರಿದಂತೆ ಒಟ್ಟಾರೆ 50 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು ತಪಾಸಣೆಯಲ್ಲಿ ಭಾಗಿಯಾಗಿದ್ದರು.

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ರೈಡ್ : ತಪಾಸಣೆ!

ಶಿವಮೊಗ್ಗ ನಗರದ ಹೊರವಲಯ ಕೇಂದ್ರ ಕಾರಾಗೃಹಕ್ಕೆ ಸೋಮವಾರ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದ ಪೊಲೀಸ್ ತಂಡವು, ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ ಘಟನೆ ನಡೆಯಿತು.

ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್, ಇನ್ಸ್’ಪೆಕ್ಟರ್ ಗಳಾದ ಮಂಜುನಾಥ್, ಅಂಜನ್ ಕುಮಾರ್, ಗಜೇಂದ್ರಪ್ಪ, ಜಯಶ್ರೀ ಮಾನೆ, ಸಂಜೀವ್ ಮಹಾಜನ್ ಹಾಗೂ 5 ಜನ ಸಬ್ ಇನ್ಸ್’ಪೆಕ್ಟರ್ ಸೇರಿದಂತೆ ಒಟ್ಟಾರೆ 50 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು ತಪಾಸಣೆಯಲ್ಲಿ ಭಾಗಿಯಾಗಿದ್ದರು.

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ರೈಡ್ : ತಪಾಸಣೆ! Read More
#ವಿಧಾನಸಭೆಚುನಾವಣೆಸಾರ್ವಜನಿಕ ಸಮಸ್ಯೆಗಳ ಕಡೆಗಣನೆ, ನೀತಿಸಂಹಿತೆ ನೆಪ - ಹೆಚ್ಚಾಗುತ್ತಿರುವ ನಾಗರೀಕರ ಪರಿತಾಪ! ಮತ ಬೇಟೆಯಲ್ಲಿ ಮುಳುಗಿದ ಜನಪ್ರತಿನಿಧಿಗಳು : ಆಲಿಸುವವರಿಲ್ಲ ನಾಗರೀಕರ ಗೋಳು!!

ವಿಧಾನಸಭೆ ಚುನಾವಣೆ : ಸಾರ್ವಜನಿಕ ಸಮಸ್ಯೆಗಳ ಕಡೆಗಣನೆ!

ಒಂದೆಡೆ, ದಿನದಿಂದ ದಿನಕ್ಕೆ ಬಿಸಿಲ ತಾಪ ಏರುತ್ತಿದೆ. ಮತ್ತೊಂದೆಡೆ, ವಿಧಾನಸಭೆ ಚುನಾವಣೆ ಅಬ್ಬರ ಕೂಡ ಜೋರಾಗಿದೆ. ಜನಪ್ರತಿನಿಧಿಗಳು ಸಂಪೂರ್ಣವಾಗಿ ‘ಮತ ಬೇಟೆ’ಯಲ್ಲಿ ಮುಳುಗಿದ್ದಾರೆ.  ಆಡಳಿತ ಯಂತ್ರವು ಸುಗಮ-ಶಾಂತಿಯುತ ಚುನಾವಣೆ ಸಿದ್ದತೆಯಲ್ಲಿ ತಲ್ಲೀನವಾಗಿದೆ!

ವಿಧಾನಸಭೆ ಚುನಾವಣೆ : ಸಾರ್ವಜನಿಕ ಸಮಸ್ಯೆಗಳ ಕಡೆಗಣನೆ! Read More
ಸಮಾಜವಾದಿಗಳ ತವರು, ಪ್ರಜ್ಞಾವಂತ, ಪ್ರಬುದ್ಧ ಮತದಾರರ ಕ್ಷೇತ್ರವೆಂದೇ ಕರೆಯಲಾಗುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಹಾಲಿ – ಮಾಜಿ ಸಚಿವರುಗಳ ನಡುವೆ ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ದವಾಗಿದೆ! ಹೌದು. 1989 ರಿಂದ 2018 ರವರೆಗೆ ನಡೆದ 5 ಚುನಾವಣೆಗಳಲ್ಲಿ ಪರಸ್ಪರ ಎದುರಾಳಿಗಳಾಗಿದ್ದ, ಹಾಲಿ ಗೃಹ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವರೂ ಆದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು, 2023 ರ ಅಸೆಂಬ್ಲಿ ಚುನಾವಣೆಯಲ್ಲಿ 6 ನೇ ಬಾರಿ ಮುಖಾಮುಖಿಯಾಗುತ್ತಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕುತೂಹಲ ಮೂಡಿಸಿದ ಹಾಲಿ – ಮಾಜಿ ಸಚಿವರ ಕೊನೆಯ ಚುನಾವಣೆ!

ಸಮಾಜವಾದಿಗಳ ತವರು, ಪ್ರಜ್ಞಾವಂತ, ಪ್ರಬುದ್ಧ ಮತದಾರರ ಕ್ಷೇತ್ರವೆಂದೇ ಕರೆಯಲಾಗುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಹಾಲಿ – ಮಾಜಿ ಸಚಿವರುಗಳ ನಡುವೆ ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ದವಾಗಿದೆ!

ಹೌದು. 1989 ರಿಂದ 2018 ರವರೆಗೆ ನಡೆದ 5 ಚುನಾವಣೆಗಳಲ್ಲಿ ಪರಸ್ಪರ ಎದುರಾಳಿಗಳಾಗಿದ್ದ, ಹಾಲಿ ಗೃಹ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವರೂ ಆದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು, 2023 ರ ಅಸೆಂಬ್ಲಿ ಚುನಾವಣೆಯಲ್ಲಿ 6 ನೇ ಬಾರಿ ಮುಖಾಮುಖಿಯಾಗುತ್ತಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕುತೂಹಲ ಮೂಡಿಸಿದ ಹಾಲಿ – ಮಾಜಿ ಸಚಿವರ ಕೊನೆಯ ಚುನಾವಣೆ! Read More