ಕಂದುರೋಗ (ಬ್ರುಸೆಲೋಸಿಸ್) ದ ವಿರುದ್ಧ ಲಸಿಕೆ ಹಾಕಿಸಿ ಜಾನುವಾರುಗಳ ರಕ್ಷಣೆಗೆ ಪಶು ವೈದ್ಯಕೀಯ ಇಲಾಖೆ ಮನವಿ
ಶಿವಮೊಗ್ಗ, ಮೇ 10: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದುರೋಗ ನಿಯಂತ್ರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ ಬಿ ಯಲಿ ತಿಳಿಸಿದ್ದಾರೆ.
ಕಂದುರೋಗವು ಪ್ರಾಣಿಜನ್ಯರೋಗವಾಗಿದ್ದು, ರಾಸುಗಳಲ್ಲಿ ಈ ರೋಗದಿಂದ ಗರ್ಭ ಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಹಾಕಬಹುದು. ಅವುಗಳ ಗರ್ಭ ಸ್ರಾವದಿಂದ ಮತ್ತು ಹಸಿ ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ ರೋಗವು ಮನುಷ್ಯರಿಗೂ ಹರಡಬಹುದು. ಸದರಿ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.
ಕಂದುರೋಗ (ಬ್ರುಸೆಲೋಸಿಸ್) ದ ವಿರುದ್ಧ ಲಸಿಕೆ ಹಾಕಿಸಿ ಜಾನುವಾರುಗಳ ರಕ್ಷಣೆಗೆ ಪಶು ವೈದ್ಯಕೀಯ ಇಲಾಖೆ ಮನವಿ Read More
