ಶಿವಮೊಗ್ಗ, ಮೇ 21: ವಿಧಾನಸಭೆ ಅಧಿವೇಶನದ ನಂತರ, ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಈ ವೇಳೆ ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ, ಓರ್ವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವುದು ಖಚಿತ ಎಂದು ಹೇಳಲಾಗುತ್ತಿದ್ದು, ಯಾರಿಗೆ ಅವಕಾಶ ದೊರಕಲಿದೆ ಎಂಬ ಕುತೂಹಲ ಮೂಡಿಸಿದೆ!
ಕಾಂಗ್ರೆಸ್ ಮೂಲಗಳ ಅನುಸಾರ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಹಾಗೂ ಸೊರಬ ಶಾಸಕ ಮಧು ಬಂಗಾರಪ್ಪ ಅವರ ನಡುವೆ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಇವರಿಬ್ಬರಲ್ಲಿ ಓರ್ವರಿಗೆ ಮಂತ್ರಿ ಪದವಿ ನಿಶ್ಚಿತ ಎಂದು ಹೇಳಲಾಗುತ್ತಿದೆ.
ಬಿ.ಕೆ.ಸಂಗಮೇಶ್ವರ್ – ಮಧು ಬಂಗಾರಪ್ಪ ನಡುವೆ ಸಚಿವ ಸ್ಥಾನಕ್ಕೆ ಭಾರೀ ಪೈಪೋಟಿ! Read More