ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಕ್ಷೇತ್ರಗಳ ಕಾಂಗ್ರೆಸ್ ಪಾಳೇಯದಲ್ಲಿ ಭಿನ್ನಮತ ಭುಗಿಲೆದ್ದಿದೆ! ಮೂರು ಕ್ಷೇತ್ರಗಳಲ್ಲಿ ಭಾನುವಾರ ಕೆಲ ಟಿಕೆಟ್ ಆಕಾಂಕ್ಷಿಗಳು ಮತ್ತವರ ಬೆಂಬಲಿಗರು ಬಹಿರಂಗವಾಗಿಯೇ ಆಕ್ರೋಶ ಹೊರ ಹಾಕಲಾರಂಭಿಸಿದ್ದಾರೆ. ಪ್ರತ್ಯೇಕ ಸಭೆ ನಡೆಸಿದ್ದಾರೆ. ಜೊತೆಗೆ ಕೆಲ ನಾಯಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರದಲ್ಲಿ ಟಿಕೆಟ್ ವಂಚಿತ ಕೆಲ ನಾಯಕರು ಪಕ್ಷದ ಅಧಿಕೃತ ಅಭ್ಯರ್ಥಿಯ ಎದುರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.

ಟಿಕೆಟ್ ಘೋಷಣೆ ಬೆನ್ನಲ್ಲೇ ‘ಕೈ’ ಪಾಳೇಯದಲ್ಲಿ ಭುಗಿಲೆದ್ದ ಭಿನ್ನಮತ!

ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಕ್ಷೇತ್ರಗಳ ಕಾಂಗ್ರೆಸ್ ಪಾಳೇಯದಲ್ಲಿ ಭಿನ್ನಮತ ಭುಗಿಲೆದ್ದಿದೆ!

ಮೂರು ಕ್ಷೇತ್ರಗಳಲ್ಲಿ ಭಾನುವಾರ ಕೆಲ ಟಿಕೆಟ್ ಆಕಾಂಕ್ಷಿಗಳು ಮತ್ತವರ ಬೆಂಬಲಿಗರು ಬಹಿರಂಗವಾಗಿಯೇ ಆಕ್ರೋಶ ಹೊರ ಹಾಕಲಾರಂಭಿಸಿದ್ದಾರೆ. ಪ್ರತ್ಯೇಕ ಸಭೆ ನಡೆಸಿದ್ದಾರೆ. ಜೊತೆಗೆ ಕೆಲ ನಾಯಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರದಲ್ಲಿ ಟಿಕೆಟ್ ವಂಚಿತ ಕೆಲ ನಾಯಕರು ಪಕ್ಷದ ಅಧಿಕೃತ ಅಭ್ಯರ್ಥಿಯ ಎದುರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.

ಟಿಕೆಟ್ ಘೋಷಣೆ ಬೆನ್ನಲ್ಲೇ ‘ಕೈ’ ಪಾಳೇಯದಲ್ಲಿ ಭುಗಿಲೆದ್ದ ಭಿನ್ನಮತ! Read More
ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೂರನೇ ಹಂತದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಸದರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಈ ಮೂಲಕ ಜಿಲ್ಲೆಯ ಎಲ್ಲ 7 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಹುರಿಯಾಳುಗಳನ್ನು ಕಣಕ್ಕಿಳಿಸಿದಂತಾಗಿದೆ. ಪ್ರತಿಷ್ಠಿತ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹಾಲಿ ಮಹಾನಗರ ಪಾಲಿಕೆ ಕಾರ್ಪೋರೇಟರ್ ಹಾಗು ಮಾಜಿ ಸಚಿವ ಹೆಚ್.ಎಂ.ಚಂದ್ರಶೇಖರಪ್ಪ ಅವರ ಪುತ್ರ ಹೆಚ್.ಸಿ.ಯೋಗೇಶ್ ಅವರನ್ನು ಕಣಕ್ಕಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ, ಮಾಜಿ ಶಾಸಕ ಕರಿಯಣ್ಣ ಅವರ ಪುತ್ರ ಡಾ.ಶ್ರೀನಿವಾಸ್ ಕರಿಯಣ್ಣ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಪ್ರಕಟ!

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೂರನೇ ಹಂತದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಸದರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಈ ಮೂಲಕ ಜಿಲ್ಲೆಯ ಎಲ್ಲ 7 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಹುರಿಯಾಳುಗಳನ್ನು ಕಣಕ್ಕಿಳಿಸಿದಂತಾಗಿದೆ.

ಪ್ರತಿಷ್ಠಿತ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹಾಲಿ ಮಹಾನಗರ ಪಾಲಿಕೆ ಕಾರ್ಪೋರೇಟರ್ ಹಾಗು ಮಾಜಿ ಸಚಿವ ಹೆಚ್.ಎಂ.ಚಂದ್ರಶೇಖರಪ್ಪ ಅವರ ಪುತ್ರ ಹೆಚ್.ಸಿ.ಯೋಗೇಶ್ ಅವರನ್ನು ಕಣಕ್ಕಿಳಿಸಲಾಗುತ್ತಿದೆ.

ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಪ್ರಕಟ! Read More
#ಬಣಜಾರಸಮುದಾಯದಪ್ರತಿಭಟನೆ,

ಶಿವಮೊಗ್ಗ – ಶಿಕಾರಿಪುರ ಹೆದ್ದಾರಿ ಮಧ್ಯೆ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ

ಒಳ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ಮಂಗಳವಾರ ಬೆಳಿಗ್ಗೆ ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ ಗ್ರಾಮಸ್ಥರು ಶಿವಮೊಗ್ಗ – ಶಿಕಾರಿಪುರ ರಾಜ್ಯ ಹೆದ್ದಾರಿಯಲ್ಲಿ ದಿಢೀರ್ ಪ್ರತಿಭಟನೆ ನಡೆಸಲಾರಂಭಿಸಿದ್ದಾರೆ.

ಶಿವಮೊಗ್ಗ – ಶಿಕಾರಿಪುರ ಹೆದ್ದಾರಿ ಮಧ್ಯೆ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ Read More

ಶಿಕಾರಿಪುರದಲ್ಲಿ ನಡೆದಿದ್ದಾರೂ ಏನು?

ಶಿಕಾರಿಪುರ ಪಟ್ಟಣದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ಕಂಡುಕೇಳರಿಯದ ಅಹಿತಕರ ಘಟನೆಗಳು ನಡೆದು ಹೋದವು. ಇದಕ್ಕೆಲ್ಲ ಕಾರಣವಾಗಿದ್ದು, ಒಳ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರ.

ಶಿಕಾರಿಪುರದಲ್ಲಿ ನಡೆದಿದ್ದಾರೂ ಏನು? Read More

ಅಪ್ಪು ಹುಟ್ಟು ಹಬ್ಬದಂದು ಅನ್ನ ಸಂತರ್ಪಣೆ ಕಾರ್ಯಕ್ರಮ

ಶಿಕಾರಿಪುರದಲ್ಲಿ ಮಾ. 17ರ ಶುಕ್ರವಾರ ಬೆಳಗ್ಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಡಾ. ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಸ್ನೇಹ ಬಳಗ, ತಾ. ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮುಕ್ತಿದಾಮ ಅಭಿವೃದ್ಧಿ ಸಮಿತಿ ವತಿಯಿಂದ ಸಿಹಿ ವಿತರಣೆ ಮತ್ತು ಬೃಹತ್ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಸ್ನೇಹ ಬಳಗದ ವೈಭವ್ ಬಸವರಾಜ್ ತಿಳಿಸಿದರು.

ಅಪ್ಪು ಹುಟ್ಟು ಹಬ್ಬದಂದು ಅನ್ನ ಸಂತರ್ಪಣೆ ಕಾರ್ಯಕ್ರಮ Read More

ಜಮೀನು ವ್ಯಾಜ್ಯ : ಸಹೋದರನ ಕೊಲೆ ಮಾಡಿದ್ದವನಿಗೆ ಜೀವಾವಧಿ ಶಿಕ್ಷೆ!

ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಸಹೋದರನನ್ನೇ ಕೊಲೆ ಮಾಡಿದ್ದವನಿಗೆ ಜೀವಾವಧಿ ಹಾಗೂ ಇತರೆ ನಾಲ್ವರಿಗೆ 1 ತಿಂಗಳ ಸಾದಾ ಕಾರಾಗೃಹ ವಾಸದ ಶಿಕ್ಷೆ ವಿಧಿಸಿ, ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಜಮೀನು ವ್ಯಾಜ್ಯ : ಸಹೋದರನ ಕೊಲೆ ಮಾಡಿದ್ದವನಿಗೆ ಜೀವಾವಧಿ ಶಿಕ್ಷೆ! Read More