The schedule for the election of the prestigious state government employees' association has been announced! ಪ್ರತಿಷ್ಠಿತ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ವೇಳಾಪಟ್ಟಿ ಪ್ರಕಟ

ತೊಂದರೆಗೆ ಸರ್ಕಾರವೇ ನೇರ ಕಾರಣ  : ಕಾಂಗ್ರೆಸ್ ಮುಖಂಡ ಮಧು ಆಕ್ರೋಶ!

ಸರ್ಕಾರಿ ನೌಕರರ ಮುಷ್ಕರದಿಂದ ಉಂಟಾಗುತ್ತಿರುವ ಸಾರ್ವಜನಿಕರ ತೊಂದರೆಗೆ ಸರ್ಕಾರವೇ ನೇರ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಜಿ.ಮಧುಕುಮಾರ್ ಕಿಡಿ ಕಾರಿದ್ದಾರೆ.

ತೊಂದರೆಗೆ ಸರ್ಕಾರವೇ ನೇರ ಕಾರಣ  : ಕಾಂಗ್ರೆಸ್ ಮುಖಂಡ ಮಧು ಆಕ್ರೋಶ! Read More

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಂದಾಯ ಇಲಾಖೆ ನೌಕರರ ಸಂಘ ಬೆಂಬಲ!

ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಮಾ.01 ರಿಂದ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಯು ಬೆಂಬಲ ವ್ಯಕ್ತಪಡಿಸಿದೆ.

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಂದಾಯ ಇಲಾಖೆ ನೌಕರರ ಸಂಘ ಬೆಂಬಲ! Read More

ಮಾರ್ಚ್ 1 ರಿಂದ ಸರ್ಕಾರಿ ನೌಕರರ ಮುಷ್ಕರ : ಬೇಡಿಕೆ ಈಡೇರಿಕೆಯ ಭರವಸೆ ನೀಡಿದ ಮುಖ್ಯಮಂತ್ರಿ

ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯಾದ್ಯಂತ ಮಾರ್ಚ್ 1 ರಿಂದ ರಾಜ್ಯ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬೇಡಿಕೆ ಈಡೇರುವವರೆಗೂ ಕಚೇರಿಗೆ ಸರ್ಕಾರಿ ನೌಕರರು ಆಗಮಿಸುವುದಿಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸ್ಪಷ್ಟಪಡಿಸಿದ್ದಾರೆ.
ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನೌಕರರ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಜೊತೆಗೆ ಹಿರಿಯ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. ಈಗಾಗಲೇ 7 ನೇ ವೇತನ ಆಯೋಗ ರಚಿಸಲಾಗಿದೆ. 2023-24 ರಲ್ಲಿಯೇ ಶಿಫಾರಸ್ಸು ಜಾರಿಗೊಳಿಸಲಾಗುವುದು ಎಂದು ವಿಧಾನಸಭೆಯಲ್ಲಿಯೇ ಸ್ಪಷ್ಟಪಡಿಸಲಾಗಿದೆ. ಇದಕ್ಕಾಗಿ ಬಜೆಟ್ ನಲ್ಲಿ ಹಣ ಕೂಡ ಮೀಸಲಿರಿಸಲಾಗಿದೆ.
ಆದರೆ ಮಧ್ಯಂತರ ವರದಿ ಪಡೆದು ಶಿಫಾರಸ್ಸು ಅನುಷ್ಠಾನಗೊಳಿಸುವಂತೆ ನೌಕರರ ಸಂಘದವರು ಬೇಡಿಕೆ ಮುಂದಿಟ್ಟಿದ್ಧಾರೆ. ಅದಕ್ಕೂ ಕೂಡ ಒಪ್ಪಿಕೊಳ್ಳಲಾಗಿದೆ. ಅದರಂತೆ ಆಯೋಗದ ಜೊತೆ ಸಮಾಲೋಚಿಸಿ, ಮಧ್ಯಂತರ ವರದಿ ಪಡೆದು ಶಿಫಾರಸ್ಸು ಅನುಷ್ಠಾನಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

ಮಾರ್ಚ್ 1 ರಿಂದ ಸರ್ಕಾರಿ ನೌಕರರ ಮುಷ್ಕರ : ಬೇಡಿಕೆ ಈಡೇರಿಕೆಯ ಭರವಸೆ ನೀಡಿದ ಮುಖ್ಯಮಂತ್ರಿ Read More

ಶಿವಮೊಗ್ಗ ಜಿಲ್ಲೆಯನ್ನು ಹಾಡಿ ಹೊಗಳಿದ ನರೇಂದ್ರ ಮೋದಿ!

‘ಶಿವಮೊಗ್ಗ ಜಿಲ್ಲೆಯು ‘ನೇಚರ್ (ಪ್ರಕೃತಿ), ಕಲ್ಚರ್ (ಸಂಸ್ಕೃತಿ), ಅಗ್ರಿಕಲ್ಚರ್ (ಕೃಷಿ) ಧರತಿ (ಭೂಮಿ) ಯಾಗಿದೆ’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಣಗಾನ ಮಾಡಿದ್ದಾರೆ

ಶಿವಮೊಗ್ಗ ಜಿಲ್ಲೆಯನ್ನು ಹಾಡಿ ಹೊಗಳಿದ ನರೇಂದ್ರ ಮೋದಿ! Read More

👉 ಬೇಡಿಕೆ ಈಡೇರದಿದ್ದರೆ ಮಾರ್ಚ್ 1 ರಿಂದ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ನಿಶ್ಚಿತ 👉 ಮುಖ್ಯಮಂತ್ರಿಗೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಖಡಕ್ ಎಚ್ಚರಿಕೆ!

ನೌಕರರ ಪ್ರಮುಖ ಬೇಡಿಕೆಗಳೇನು?
ರಾಜ್ಯ ಸರ್ಕಾರಿ ನೌಕರರ ವೇತನ, ತುಟ್ಟಿ ಭತ್ಯೆ, ಸೌಲಭ್ಯಗಳ ಪರಿಷ್ಕರಣೆಗಾಗಿ ನೇಮಿಸಲಾಗಿರುವ 7 ನೇ ವೇತನ ಆಯೋಗದ ಶಿಫಾರಸ್ಸುಗಳ ಮಧ್ಯಂತರ ವರದಿ ಪಡೆದು ಶೇ.40 ರಷ್ಟು ಫಿಟ್ಮೆಂಟ್ ಅನ್ನು ಜುಲೈ 1 ರಿಂದ ಜಾರಿಗೊಳಿಸಬೇಕು.
ಈಗಾಗಲೇ ಹಲವು ರಾಜ್ಯಗಳಲ್ಲಿ ಎನ್.ಪಿ.ಎಸ್. ವ್ಯವಸ್ಥೆ ರದ್ದುಗೊಳಿಸಲಾಗಿದೆ. ಅದೇ ರೀತಿಯಲ್ಲಿ ಕರ್ನಾಟಕ ರಾಜ್ಯದಲ್ಲಿಯೂ ಎನ್.ಪಿ.ಎಸ್ ರದ್ದುಗೊಳಿಸಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು ಎಂಬುವುದು ಸಂಘದ ಪ್ರಮುಖ ಬೇಡಿಕೆಯಾಗಿದೆ.

👉 ಬೇಡಿಕೆ ಈಡೇರದಿದ್ದರೆ ಮಾರ್ಚ್ 1 ರಿಂದ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ನಿಶ್ಚಿತ 👉 ಮುಖ್ಯಮಂತ್ರಿಗೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಖಡಕ್ ಎಚ್ಚರಿಕೆ! Read More