ಮತ ಎಣಿಕೆ ಕೇಂದ್ರದ ಸುತ್ತಮುತ್ತ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ
ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಮತ ಎಣಿಕೆ ನಡೆಯಲಿರುವ, ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ ಮೇ 13 ರ ಬೆಳಗ್ಗೆ 6 ರಿಂದ ಮೇ 14 ರ ಬೆಳಿಗ್ಗೆ 6 ಗಂಟೆಯವರೆಗೆ, ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ನಿಬಂಧನೆಗಳ ವಿವರ: ನಿಷೇಧಾಜ್ಞೆ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗೂಡುವಂತಿಲ್ಲ. ಮೆರವಣಿಗೆ, ಸಭೆ, ಸಮಾರಂಭ, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ.
ಮತ ಎಣಿಕೆ ಕೇಂದ್ರದ ಸುತ್ತಮುತ್ತ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ Read More
