ಶಿವಮೊಗ್ಗ ಜಿಲ್ಲೆ ಕರ್ನಾಟಕ ರಾಜಕೀಯ ರಂಗದ ಶಕ್ತಿ ಕೇಂದ್ರಗಳಲ್ಲೊಂದು. ಇಲ್ಲಿನ ಹಲವು ನಾಯಕರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಹಲವು ದಶಕಗಳ ‘ಎಲೆಕ್ಷನ್ ಹೋರಾಟ’ಕ್ಕೆ ಪೂರ್ಣ ವಿರಾಮ ಬೀಳುವಂತಾಗಿದೆ!
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಬಿಜೆಪಿ ಪಕ್ಷದ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಪ್ರಸ್ತುತ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.
ಚುನಾವಣೆಗಳಿಂದ ನೇಪಥ್ಯಕ್ಕೆ ಸರಿದ ಯಡಿಯೂರಪ್ಪ – ಈಶ್ವರಪ್ಪ – ಕಾಗೋಡು ತಿಮ್ಮಪ್ಪ! Read More