ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ದಿನಾಂಕ ವಿಸ್ತರಣೆ
ಶಿವಮೊಗ್ಗ, ಮೇ 5: 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ, ಭದ್ರಾ ಜಲಾಶಯದಿಂದ ಬಲ ಹಾಗೂ ಎಡದಂಡೆ ನಾಲೆಗಳಿಗೆ ಹರಿಸಲಾಗುತ್ತಿರುವ ನೀರಿನ ಹರಿವನ್ನು ಇನ್ನಷ್ಟು ದಿನಗಳ ವಿಸ್ತರಿಸಲಾಗಿದೆ.
ಪ್ರಸ್ತುತ ಎಡದಂಡೆ ನಾಲೆಗೆ 01.01.2023 ರ ರಾತ್ರಿಯಿಂದ ಹಾಗೂ ಬಲದಂಡೆ ನಾಲೆಗೆ 03.01.2023 ರ ರಾತ್ರಿಯಿಂದ ನೀರನ್ನು ಹರಿಸಲಾಗುತ್ತಿದೆ.
ಭದ್ರಾ ಅಚ್ಚುಕಟ್ಟು ಪ್ರದೇಶದ 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಹೆಚ್ಚುವರಿ ದಿನಗಳಿಗೆ ನೀರನ್ನು ಹರಿಸಲು ಸರ್ಕಾರದ ಅನುಮೋದನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಭದ್ರಾ ಎಡದಂಡೆ ನಾಲೆಗೆ ಮೇ 12 ರವರೆಗೆ ಹಾಗೂ ಬಲದಂಡೆ ನಾಲೆಗೆ ಮೇ 18 ರವರೆಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿನ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ದಿನಾಂಕ ವಿಸ್ತರಣೆ Read More
