ಶಿವಮೊಗ್ಗದ ರಾಗಿಗುಡ್ಡ ಪ್ರಕರಣ : ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ - ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಮೊಗ್ಗದ ರಾಗಿಗುಡ್ಡ ಪ್ರಕರಣ : ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಅ. 3: ನಮ್ಮ ಸರ್ಕಾರ ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಪ್ರಕರಣಗಳನ್ನು ನಿಯಂತ್ರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಕೋಮು ಗಲಭೆ ಹೆಚ್ಚಾಗಿದೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರಿಗೆ ಆರೋಪ ಮಾಡುವುದೇ ಕೆಲಸವಾಗಿದೆ. ಆರೋಪ ಮಾಡುವುದೆಲ್ಲ ಸತ್ಯವಲ್ಲ. ಶಿವಮೊಗ್ಗದ ಪ್ರಕರಣದಲ್ಲಿ ಕಲ್ಲು ಹೊಡೆದ ದುಷ್ಕರ್ಮಿಗಳನ್ನು ಬಂಧಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು  ಎಂದರು.

ಶಿವಮೊಗ್ಗದ ರಾಗಿಗುಡ್ಡ ಪ್ರಕರಣ : ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ – ಮುಖ್ಯಮಂತ್ರಿ ಸಿದ್ದರಾಮಯ್ಯ Read More