‘ಬಸವರಾಜ ಬೊಮ್ಮಾಯಿಗೆ ಬೆಂಬಲ : ರಾಜಕೀಯಕ್ಕೆ ಬರಲ್ಲ!’ – ನಟ ಸುದೀಪ್ ಹೇಳಿಕೆ
‘ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲಿಸುತ್ತಿದ್ದೆನೆ. ಅವರು ನನಗೆ ಕಷ್ಟ ಕಾಲದಲ್ಲಿ ಸ್ಪಂದಿಸಿದ್ದಾರೆ. ಅದಕ್ಕಾಗಿ ಅವರ ಪರವಾಗಿ ನಿಲ್ಲುತ್ತಿದ್ದೆನೆ. ತಮಗೆ ಯಾವುದೇ ಒತ್ತಡವಿಲ್ಲ. ಒತ್ತಡಕ್ಕಾಗಿ ಬರುವ ವ್ಯಕ್ತಿಯಲ್ಲ’ ಎಂದು ಚಿತ್ರನಟ ಸುದೀಪ್ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಕಿಕ್ಕಿರಿದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ‘ರಾಜಕೀಯಕ್ಕೆ ಬರುವುದಿಲ್ಲ. ಬಿಜೆಪಿಗೆ ಸೇರ್ಪಡೆಯಾಗಿಲ್ಲ. ತಮ್ಮದೇನಿದ್ದರೂ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ’ ಎಂದು ಸುದೀಪ್ ಗೊಂದಲದ ಹೇಳಿಕೆ ನೀಡಿದರು.
