ಶಿವಮೊಗ್ಗ, ಮೇ 23: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ತೊರೆದಿದ್ದ ಕೆಲ ನಾಯಕರು, ಇದೀಗ ಆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸದ್ದುಗದ್ದಲವಿಲ್ಲದೆ ಮತ್ತೇ ‘ಕೈ’ ಹಿಡಿಯುವ ಕಸರತ್ತು ನಡೆಸಲಾರಂಭಿಸಿದ್ದಾರೆ. ಆದರೆ ಪಕ್ಷಾಂತರ ನಾಯಕರ ಪುನಾರಾಗಮನಕ್ಕೆ, ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಲಾರಂಭಿಸಿದ್ದಾರೆ! ಈ ಸಂಬಂಧ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮಧು ಕುಮಾರ್ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಇತ್ತೀಚೆಗೆ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದ ಪಕ್ಷದ ಮುಖಂಡರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು’ ಎಂದು ಪಕ್ಷದ ವರಿಷ್ಠರಿಗೆ ಆಗ್ರಹಿಸಿದ್ದಾರೆ.

ಮತ್ತೇ ಕಾಂಗ್ರೆಸ್ ನತ್ತ ‘ಪಕ್ಷಾಂತರ’ ನಾಯಕರು : ಮರುಸೇರ್ಪಡೆಗೆ ಮುಖಂಡರ ಆಕ್ರೋಶ!

ಶಿವಮೊಗ್ಗ, ಮೇ 23: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ತೊರೆದಿದ್ದ ಕೆಲ ನಾಯಕರು, ಇದೀಗ ಆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸದ್ದುಗದ್ದಲವಿಲ್ಲದೆ ಮತ್ತೇ ‘ಕೈ’ ಹಿಡಿಯುವ ಕಸರತ್ತು ನಡೆಸಲಾರಂಭಿಸಿದ್ದಾರೆ. ಆದರೆ ಪಕ್ಷಾಂತರ ನಾಯಕರ ಪುನಾರಾಗಮನಕ್ಕೆ, ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಲಾರಂಭಿಸಿದ್ದಾರೆ!

ಈ ಸಂಬಂಧ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮಧು ಕುಮಾರ್ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಇತ್ತೀಚೆಗೆ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದ ಪಕ್ಷದ ಮುಖಂಡರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು’ ಎಂದು ಪಕ್ಷದ ವರಿಷ್ಠರಿಗೆ ಆಗ್ರಹಿಸಿದ್ದಾರೆ.

ಮತ್ತೇ ಕಾಂಗ್ರೆಸ್ ನತ್ತ ‘ಪಕ್ಷಾಂತರ’ ನಾಯಕರು : ಮರುಸೇರ್ಪಡೆಗೆ ಮುಖಂಡರ ಆಕ್ರೋಶ! Read More
ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ ಯಾರಿಗೆ ಮಂತ್ರಿ ಪದವಿಯ ಯೋಗ?

ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ ಯಾರಿಗೆ ಮಂತ್ರಿ ಪದವಿಯ ಯೋಗ?

ಶಿವಮೊಗ್ಗ, ಮೇ 15: ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ಗಮನ ಸೆಳೆದಿದೆ. ಕಾಂಗ್ರೆಸ್ ನ ಮೂವರು ಶಾಸಕರಲ್ಲಿ, ಯಾರಿಗೆ ‘ಮಂತ್ರಿ ಪದವಿ’ಯ ಯೋಗ ದೊರಕಲಿದೆ? ಎಂಬ ಕುತೂಹಲ ಜಿಲ್ಲೆಯ ರಾಜಕೀಯ ವಲಯದಲ್ಲಿ ಮನೆ ಮಾಡಿದೆ.

ಸದ್ಯ ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ್, ಸೊರಬದಿಂದ ಮಧು ಬಂಗಾರಪ್ಪ ಹಾಗೂ ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರು ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಬಿ.ಕೆ.ಸಂಗಮೇಶ್ವರ್ ಅವರು, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದರಲ್ಲಿ ಮೂರು ಬಾರಿ ಕಾಂಗ್ರೆಸ್ ನಿಂದ ಹಾಗೂ ಒಮ್ಮೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕರಾಗಿ ಚುನಾಯಿತರಾಗಿದ್ದರು.

ಬೇಳೂರು ಗೋಪಾಲಕೃಷ್ಣ ಅವರು ಮೂರನೇ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ. ಈ ಹಿಂದೆ ಎರಡು ಬಾರಿ ಅವರು ಬಿಜೆಪಿಯಿಂದ ಕಣಕ್ಕಿಳಿದು ಶಾಸಕರಾಗಿ ಆಯ್ಕೆಯಾಗಿದ್ದರು. 2018 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಅವರು ಇದೀಗ ಆ ಪಕ್ಷದಿಂದಲೇ ಶಾಸಕರಾಗಿ ಆಯ್ಕೆಯಾಗುವಲ್ಲಿ ಸಫಲರಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ ಯಾರಿಗೆ ಮಂತ್ರಿ ಪದವಿಯ ಯೋಗ? Read More