ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ಸಚಿವ ಅಮಿತ್ ಶಾ ಅವರು ಶಿವಮೊಗ್ಗ ನಗರದಲ್ಲಿ ರೋಡ್ ಶೋ ನಡೆಸಿದ ಸಂದರ್ಭದಲ್ಲಿ, ಶಿವಪ್ಪ ನಾಯಕ ವೃತ್ತದ ಬಳಿ ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡಿರುವ ಕುರಿತು ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಗಳು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಮಾಡಿಕೊಂಡ ಎರಡು ಪ್ರತ್ಯೇಕ ಪ್ರಕರಣಗಳ ಕುರಿತಂತೆ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯು ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ 1986 ಅಡಿ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದೇ ರೀತಿ ಇನ್ನೊಂದು ಪ್ರಕರಣದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಮಕ್ಕಳೊಂದಿಗೆ ಚುನಾವಣಾ ಪ್ರಚಾರ ಮಾಡುತ್ತಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಲಿಸಲಾಗಿತ್ತು.

ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ : ಪ್ರಕರಣ ದಾಖಲು!

ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಿಸಲಾಗಿದೆ.

ಕೇಂದ್ರ ಸಚಿವ ಅಮಿತ್ ಶಾ ಅವರು ಶಿವಮೊಗ್ಗ ನಗರದಲ್ಲಿ ರೋಡ್ ಶೋ ನಡೆಸಿದ ಸಂದರ್ಭದಲ್ಲಿ, ಶಿವಪ್ಪ ನಾಯಕ ವೃತ್ತದ ಬಳಿ ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡಿರುವ ಕುರಿತು ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣಗಳು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಮಾಡಿಕೊಂಡ ಎರಡು ಪ್ರತ್ಯೇಕ ಪ್ರಕರಣಗಳ ಕುರಿತಂತೆ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯು ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ 1986 ಅಡಿ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದೇ ರೀತಿ ಇನ್ನೊಂದು ಪ್ರಕರಣದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಮಕ್ಕಳೊಂದಿಗೆ ಚುನಾವಣಾ ಪ್ರಚಾರ ಮಾಡುತ್ತಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಲಿಸಲಾಗಿತ್ತು.

ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ : ಪ್ರಕರಣ ದಾಖಲು! Read More
ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ವಿಧಾನಸಭಾ ಚುನಾವಣಾ ಕಣ ರಂಗೇರಲಾರಂಭಿಸಿದೆ. ಈ ನಡುವೆ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ, ಜಿಲ್ಲೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಆಗಮಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರು ಎ. 27 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ. ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗ ನಗರಕ್ಕೆ ಆಗಮಿಸಲಿರುವ ಈ ಇಬ್ಬರು ನಾಯಕರು, ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ನಂತರ ಹೆಲಿಕ್ಯಾಪ್ಟರ್ ಮೂಲಕ ಉಡುಪಿ ಜಿಲ್ಲೆಗೆ ತೆರಳುತ್ತಿದ್ದಾರೆ. ಮತ್ತೊಂದೆಡೆ, ಮೇ ತಿಂಗಳಲ್ಲಿ ಬಿಜೆಪಿ ನಾಯಕರ ಪ್ರಧಾನಿ ನರೇಂದ್ರ, ಗೃಹ ಸಚಿವ ಅಮಿತ್ ಶಾ, ಆ ಪಕ್ಷದ ರಾಷ್ಟ್ರಾಧ್ಯಕ್ಷ ನಡ್ಡಾ ಅವರು ಪ್ರತ್ಯೇಕವಾಗಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದು ತಿಳಿದುಬಂದಿದ್ದು, ಅಧಿಕೃತ ದಿನಾಂಕಗಳು ಇನ್ನಷ್ಟೆ ಖಚಿತವಾಗಬೇಕಾಗಿದೆ.

ಚುನಾವಣಾ ಪ್ರಚಾರ : ಶಿವಮೊಗ್ಗ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ರಾಷ್ಟ್ರೀಯ ನಾಯಕರು!

ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ವಿಧಾನಸಭಾ ಚುನಾವಣಾ ಕಣ ರಂಗೇರಲಾರಂಭಿಸಿದೆ. ಈ ನಡುವೆ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ, ಜಿಲ್ಲೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಆಗಮಿಸುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರು ಎ. 27 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ.

ಚುನಾವಣಾ ಪ್ರಚಾರ : ಶಿವಮೊಗ್ಗ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ರಾಷ್ಟ್ರೀಯ ನಾಯಕರು! Read More

ಚುನಾವಣೆಗೆ ಮಕ್ಕಳ ಬಳಕೆ ನಿರ್ಬಂಧ : ಶಿಸ್ತುಕ್ರಮದ ಎಚ್ಚರಿಕೆ!

ವಿಧಾನಸಭೆ ಚುನಾವಣೆಯ ಕಾರ್ಯ ಹಾಗೂ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಕಾರ್ಮಿಕ ಇಲಾಖೆ ತಿಳಿಸಿದೆ.

ಚುನಾವಣೆಗೆ ಮಕ್ಕಳ ಬಳಕೆ ನಿರ್ಬಂಧ : ಶಿಸ್ತುಕ್ರಮದ ಎಚ್ಚರಿಕೆ! Read More