ಶಿವಮೊಗ್ಗ : ಅಂತಿಮ ಹಂತಕ್ಕೆರೈಲ್ವೆ ಫ್ಲೈ ಓವರ್ ಕಾಮಗಾರಿ

ಶಿವಮೊಗ್ಗ – ಅಂತಿಮ ಹಂತಕ್ಕೆ ಫ್ಲೈ ಓವರ್ ಕಾಮಗಾರಿ : ಉದ್ಘಾಟನೆ ಯಾವಾಗ..?

ಶಿವಮೊಗ್ಗ, ಆ. 16: ಶಿವಮೊಗ್ಗ ನಗರದ ಹೊರವಲಯ ಕಾಶೀಪುರ ರೈಲ್ವೆ ಗೇಟ್ ಬಳಿ ನಿರ್ಮಿಸಲಾಗುತ್ತಿರುವ, ರೈಲ್ವೆ ಫ್ಲೈ ಓವರ್ (ಮೇಲ್ಸೇತುವೆ) ಕಾಮಗಾರಿ ಅಂತೂ ಇಂತೂ ಕೊನೆಗೂ ಅಂತಿಮ ಹಂತಕ್ಕೆ ಬರಲಾರಂಭಿಸಿದೆ. ಸದ್ಯ ಡಾಂಬರೀಕರಣ ಕಾಮಗಾರಿಗೆ ಚಾಲನೆ ದೊರಕಿದೆ.

ಶಿವಮೊಗ್ಗ – ಅಂತಿಮ ಹಂತಕ್ಕೆ ಫ್ಲೈ ಓವರ್ ಕಾಮಗಾರಿ : ಉದ್ಘಾಟನೆ ಯಾವಾಗ..? Read More

ಶಿವಮೊಗ್ಗದ ಮೊದಲ ರೈಲ್ವೆ ಅಂಡರ್ ಪಾಸ್ ಕಾಮಗಾರಿ ಪೂರ್ಣ – ವಾಹನಗಳ ಸಂಚಾರಕ್ಕೆ ಮುಕ್ತ!

ಶಿವಮೊಗ್ಗ, ಆ. 15: ಶಿವಮೊಗ್ಗ ನಗರದ ವೀರಣ್ಣನ ಲೇಔಟ್ ಬಳಿ ರೈಲ್ವೆ ಇಲಾಖೆ ನಿರ್ಮಿಸುತ್ತಿದ್ದ ಅಂಡರ್ ಪಾಸ್ (ಕೆಳ ಸೇತುವೆ) ಕಾಮಗಾರಿಯು ಬಹುತೇಕ ಪೂರ್ಣಗೊಂಡಿದ್ದು, ಈಗಾಗಲೇ ವಾಹನಗಳ ಸಂಚಾರ ಆರಂಭವಾಗಿದೆ.

ಶಿವಮೊಗ್ಗದ ಮೊದಲ ರೈಲ್ವೆ ಅಂಡರ್ ಪಾಸ್ ಕಾಮಗಾರಿ ಪೂರ್ಣ – ವಾಹನಗಳ ಸಂಚಾರಕ್ಕೆ ಮುಕ್ತ! Read More
ಹುಬ್ಬಳ್ಳಿ/ಶಿವಮೊಗ್ಗ, ಮೇ 23: ‘ಕೇಂದ್ರ – ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ, ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಮೊದಲ ಹಂತದ ಕಾಮಗಾರಿ, ಮುಂದಿನ ವಾರದಿಂದ ಆರಂಭಗೊಳ್ಳಲಿದೆ’ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಮೇ 22 ರಂದು ನೈರುತ್ಯ ರೈಲ್ವೆ ವಲಯದ ಹಿರಿಯ ಅಧಿಕಾರಿಗಳ ಜೊತೆ ಸಂಸದರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಚರ್ಚಿಸಲಾದ ವಿಷಯದ ಕುರಿತಂತೆ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 2025 ಕ್ಕೆ ಪೂರ್ಣ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆಯನ್ನು 1200 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದಲ್ಲಿ ಶಿವಮೊಗ್ಗ – ಶಿಕಾರಿಪುರ ನಡುವಿನ 46 ಕಿ.ಮೀ. ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಭೂ ಸ್ವಾದೀನ ಪ್ರಕ್ರಿಯೆ, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ.

ಮುಂದಿನ ವಾರದಿಂದ ಆರಂಭವಾಗಲಿರುವ ಶಿವಮೊಗ್ಗ – ಶಿಕಾರಿಪುರ ರೈಲ್ವೆ ಮಾರ್ಗದ ಕಾಮಗಾರಿ 2025 ಕ್ಕೆ ಪೂರ್ಣ

ಹುಬ್ಬಳ್ಳಿ/ಶಿವಮೊಗ್ಗ, ಮೇ 23: ‘ಕೇಂದ್ರ – ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ, ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಮೊದಲ ಹಂತದ ಕಾಮಗಾರಿ, ಮುಂದಿನ ವಾರದಿಂದ ಆರಂಭಗೊಳ್ಳಲಿದೆ’ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಮೇ 22 ರಂದು ನೈರುತ್ಯ ರೈಲ್ವೆ ವಲಯದ ಹಿರಿಯ ಅಧಿಕಾರಿಗಳ ಜೊತೆ ಸಂಸದರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಚರ್ಚಿಸಲಾದ ವಿಷಯದ ಕುರಿತಂತೆ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

2025 ಕ್ಕೆ ಪೂರ್ಣ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆಯನ್ನು 1200 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದಲ್ಲಿ ಶಿವಮೊಗ್ಗ – ಶಿಕಾರಿಪುರ ನಡುವಿನ 46 ಕಿ.ಮೀ. ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಭೂ ಸ್ವಾದೀನ ಪ್ರಕ್ರಿಯೆ, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ.

ಮುಂದಿನ ವಾರದಿಂದ ಆರಂಭವಾಗಲಿರುವ ಶಿವಮೊಗ್ಗ – ಶಿಕಾರಿಪುರ ರೈಲ್ವೆ ಮಾರ್ಗದ ಕಾಮಗಾರಿ 2025 ಕ್ಕೆ ಪೂರ್ಣ Read More