ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು ಪ್ರಸ್ತುತ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ, ೮೦ ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನರು ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಿದೆ. ಅದರಂತೆ ಶನಿವಾರದಿಂದ ಬ್ಯಾಲೆಟ್ ಪೇಪರ್ ವೋಟಿಂಗ್ (ಮತ ಪತ್ರದ ಮೂಲಕ ಮತದಾನ) ಗೆ ಚಾಲನೆ ದೊರಕಿದೆ. ಕಳೆದ ಕೆಲ ದಿನಗಳ ಹಿಂದೆಯೇ, ಚುನಾವಣಾ ಆಯೋಗವು ಮನೆಯಿಂದ ಮತದಾನ ಮಾಡಲು ಅರ್ಹತೆ ಹೊಂದಿದವರ ಪಟ್ಟಿ ಸಿದ್ದಪಡಿಸಿತ್ತು. ಸಂಬಂಧಿಸಿದವರಿಂದ ಒಪ್ಪಿಗೆ ಪತ್ರ ಪಡೆದುಕೊಂಡಿತ್ತು. ಅಂತಹವರಿಗೆ ಏ.29 ರಿಂದ ಚುನಾವಣಾಧಿಕಾರಿಗಳು ಅವರ ಮನೆಗಳಿಗೆ ತೆರಳಿ ಮತದಾನಕ್ಕೆ ಅವಕಾಶ ಕಲ್ಪಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ : ಹಿರಿಯರು, ವಿಕಲಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ – ಶನಿವಾರದಿಂದ ವಿಧ್ಯುಕ್ತ ಚಾಲನೆ!

ಇದೇ ಮೊದಲ ಬಾರಿಗೆ ಚುನಾವಣಾ ಆಯೋಗ ಪ್ರಸ್ತುತ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ, ೮೦ ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನರು ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಿದೆ. ಅದರಂತೆ ಶನಿವಾರದಿಂದ ಬ್ಯಾಲೆಟ್ ಪೇಪರ್ ವೋಟಿಂಗ್ (ಮತ ಪತ್ರದ ಮೂಲಕ ಮತದಾನ) ಗೆ ಚಾಲನೆ ದೊರಕಿದೆ.

ಕಳೆದ ಕೆಲ ದಿನಗಳ ಹಿಂದೆಯೇ, ಚುನಾವಣಾ ಆಯೋಗವು ಮನೆಯಿಂದ ಮತದಾನ ಮಾಡಲು ಅರ್ಹತೆ ಹೊಂದಿದವರ ಪಟ್ಟಿ ಸಿದ್ದಪಡಿಸಿತ್ತು. ಸಂಬಂಧಿಸಿದವರಿಂದ ಒಪ್ಪಿಗೆ ಪತ್ರ ಪಡೆದುಕೊಂಡಿತ್ತು. ಅಂತಹವರಿಗೆ ಏ.29 ರಿಂದ ಚುನಾವಣಾಧಿಕಾರಿಗಳು ಅವರ ಮನೆಗಳಿಗೆ ತೆರಳಿ ಮತದಾನಕ್ಕೆ ಅವಕಾಶ ಕಲ್ಪಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ : ಹಿರಿಯರು, ವಿಕಲಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ – ಶನಿವಾರದಿಂದ ವಿಧ್ಯುಕ್ತ ಚಾಲನೆ! Read More
ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪದ ಕೆ.ಹೆಚ್.ಬಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯ ಜಾನುವಾರು ಪಾಲಕರು ಅಳಲು ತೋಡಿಕೊಂಡಿದ್ದಾರೆ.

ಶಿಕಾರಿಪುರ ಅಸೆಂಬ್ಲಿ : ಬಿಜೆಪಿಯಿಂದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ನಾಮಪತ್ರ ಸಲ್ಲಿಕೆ

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ, ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಸೋಮವಾರ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಿ.ವೈ.ವಿಜಯೇಂದ್ರ ಹಾಗೂ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ಅವರು ಶಿಕಾರಿಪುರ ಪಟ್ಟಣದಲ್ಲಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಬಿ.ವೈ.ವಿಜಯೇಂದ್ರ ಅವರು ಸಾಂಕೇತಿಕವಾಗಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ. ಎ. 19 ರಂದು ಮೆರವಣಿಗೆಯ ಮೂಲಕ ಮತ್ತೊಮ್ಮೆ ಉಮೇದುವಾರಿಕೆ ಅರ್ಜಿ ಸಲ್ಲಿಸಲಿದ್ದಾರೆ. ಈ ವಿಷಯವನ್ನು ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಶಿಕಾರಿಪುರ ಅಸೆಂಬ್ಲಿ : ಬಿಜೆಪಿಯಿಂದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ನಾಮಪತ್ರ ಸಲ್ಲಿಕೆ Read More
‘ವಿಧಾನ ಪರಿಷತ್ ಸ್ಥಾನಕ್ಕೆ ಇಷ್ಟರಲ್ಲಿಯೇ ರಾಜೀನಾಮೆ ನೀಡುತ್ತಿದ್ದೆನೆ. ಕೆ.ಎಸ್.ಈಶ್ವರಪ್ಪ ವಿರುದ್ದ ಚುನಾವಣಾ ಕಣಕ್ಕಿಳಿಯುತ್ತಿದ್ದೆನೆ’ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಘೋಷಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಕುರಿತಂತೆ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ನೀಡದ ಅವರು, ‘ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳುತ್ತೆನೆ’ ಎಂದು ಪ್ರತಿಕ್ರಿಯಿಸಿದ್ದಾರೆ.

‘ಎಂ.ಎಲ್.ಸಿ. ಸ್ಥಾನಕ್ಕೆ ರಾಜೀನಾಮೆ : ಕೆ.ಎಸ್.ಈಶ್ವರಪ್ಪ ವಿರುದ್ದ ಕಣಕ್ಕೆ!’ – ಆಯನೂರು ಮಂಜುನಾಥ್ ಘೋಷಣೆ

‘ವಿಧಾನ ಪರಿಷತ್ ಸ್ಥಾನಕ್ಕೆ ಇಷ್ಟರಲ್ಲಿಯೇ ರಾಜೀನಾಮೆ ನೀಡುತ್ತಿದ್ದೆನೆ. ಕೆ.ಎಸ್.ಈಶ್ವರಪ್ಪ ವಿರುದ್ದ ಚುನಾವಣಾ ಕಣಕ್ಕಿಳಿಯುತ್ತಿದ್ದೆನೆ’ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಘೋಷಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಕುರಿತಂತೆ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ನೀಡದ ಅವರು, ‘ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳುತ್ತೆನೆ’ ಎಂದು ಪ್ರತಿಕ್ರಿಯಿಸಿದ್ದಾರೆ.

‘ಎಂ.ಎಲ್.ಸಿ. ಸ್ಥಾನಕ್ಕೆ ರಾಜೀನಾಮೆ : ಕೆ.ಎಸ್.ಈಶ್ವರಪ್ಪ ವಿರುದ್ದ ಕಣಕ್ಕೆ!’ – ಆಯನೂರು ಮಂಜುನಾಥ್ ಘೋಷಣೆ Read More
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆಗಳಿಗೆ ಚಾಲನೆ ನೀಡಿದೆ. ಭಾನುವಾರ ರಾತ್ರಿ ತುಂಗಾ ನಗರ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ, ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದೆ.

ಪೊಲೀಸರ ಕಾರ್ಯಾಚರಣೆ : ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರ ವಿರುದ್ದ ಕೇಸ್!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆಗಳಿಗೆ ಚಾಲನೆ ನೀಡಿದೆ. ಭಾನುವಾರ ರಾತ್ರಿ ತುಂಗಾ ನಗರ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ, ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದೆ.

ಪೊಲೀಸರ ಕಾರ್ಯಾಚರಣೆ : ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರ ವಿರುದ್ದ ಕೇಸ್! Read More
#ಕರ್ನಾಟಕವಿಧಾನಸಭೆ ಚುನಾವಣೆ2023 #ಕರ್ನಾಟಕವಿಧಾನಸಭೆಎಲೆಕ್ಷನ್, #ಕರ್ನಾಟಕವಿಧಾನಸಭೆ, #ವಿಧಾನಸಭೆಚುನಾವಣೆ, #ಅಸೆಂಬ್ಲಿಎಲೆಕ್ಷನ್, #ಕರ್ನಾಟಕವಿಧಾನಸಭೆಚುನಾವಣೆಗೆವೇಳಾಪಟ್ಟಿಪ್ರಕಟ, #ಅಸೆಂಬ್ಲಿಎಲೆಕ್ಷನ್, #ವಿಧಾನಸಭೆಚುನಾವಣೆ, #ಚುನಾವಣಾವೇಳಾಪಟ್ಟಿ,

ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಡಿಸಿ ನೀಡಿದ ಸೂಚನೆಯೇನು?

ವಿಧಾನಸಭೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾದ ಅಧಿಕಾರಿಗಳು ಮಾದರಿ ನೀತಿ-ಸಂಹಿತೆ ಉಲ್ಲಂಘನೆಗೆ ಆಸ್ಪದವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಭಾನುವಾರ ಶಿವಮೊಗ್ಗ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ವೇಳೆ ಈ ಸೂಚನೆ ನೀಡಿದ್ದಾರೆ.

ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಡಿಸಿ ನೀಡಿದ ಸೂಚನೆಯೇನು? Read More