ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ! ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..!

ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ!

ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..! Read More
ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ದಿನಾಂಕ ವಿಸ್ತರಣೆ ಶಿವಮೊಗ್ಗ, ಮೇ 5: 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ, ಭದ್ರಾ ಜಲಾಶಯದಿಂದ ಬಲ ಹಾಗೂ ಎಡದಂಡೆ ನಾಲೆಗಳಿಗೆ ಹರಿಸಲಾಗುತ್ತಿರುವ ನೀರಿನ ಹರಿವನ್ನು ಇನ್ನಷ್ಟು ದಿನಗಳ ವಿಸ್ತರಿಸಲಾಗಿದೆ. ಪ್ರಸ್ತುತ ಎಡದಂಡೆ ನಾಲೆಗೆ 01.01.2023 ರ ರಾತ್ರಿಯಿಂದ ಹಾಗೂ ಬಲದಂಡೆ ನಾಲೆಗೆ 03.01.2023 ರ ರಾತ್ರಿಯಿಂದ ನೀರನ್ನು ಹರಿಸಲಾಗುತ್ತಿದೆ. ಭದ್ರಾ ಅಚ್ಚುಕಟ್ಟು ಪ್ರದೇಶದ 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಹೆಚ್ಚುವರಿ ದಿನಗಳಿಗೆ ನೀರನ್ನು ಹರಿಸಲು ಸರ್ಕಾರದ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಭದ್ರಾ ಎಡದಂಡೆ ನಾಲೆಗೆ ಮೇ 12 ರವರೆಗೆ ಹಾಗೂ ಬಲದಂಡೆ ನಾಲೆಗೆ ಮೇ 18 ರವರೆಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿನ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ದಿನಾಂಕ ವಿಸ್ತರಣೆ

ಶಿವಮೊಗ್ಗ, ಮೇ 5: 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ, ಭದ್ರಾ ಜಲಾಶಯದಿಂದ ಬಲ ಹಾಗೂ ಎಡದಂಡೆ ನಾಲೆಗಳಿಗೆ ಹರಿಸಲಾಗುತ್ತಿರುವ ನೀರಿನ ಹರಿವನ್ನು ಇನ್ನಷ್ಟು ದಿನಗಳ ವಿಸ್ತರಿಸಲಾಗಿದೆ.

ಪ್ರಸ್ತುತ ಎಡದಂಡೆ ನಾಲೆಗೆ 01.01.2023 ರ ರಾತ್ರಿಯಿಂದ ಹಾಗೂ ಬಲದಂಡೆ ನಾಲೆಗೆ 03.01.2023 ರ ರಾತ್ರಿಯಿಂದ ನೀರನ್ನು ಹರಿಸಲಾಗುತ್ತಿದೆ.

ಭದ್ರಾ ಅಚ್ಚುಕಟ್ಟು ಪ್ರದೇಶದ 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಹೆಚ್ಚುವರಿ ದಿನಗಳಿಗೆ ನೀರನ್ನು ಹರಿಸಲು ಸರ್ಕಾರದ ಅನುಮೋದನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಭದ್ರಾ ಎಡದಂಡೆ ನಾಲೆಗೆ ಮೇ 12 ರವರೆಗೆ  ಹಾಗೂ ಬಲದಂಡೆ ನಾಲೆಗೆ ಮೇ 18 ರವರೆಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿನ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ದಿನಾಂಕ ವಿಸ್ತರಣೆ Read More
ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ಸಚಿವ ಅಮಿತ್ ಶಾ ಅವರು ಶಿವಮೊಗ್ಗ ನಗರದಲ್ಲಿ ರೋಡ್ ಶೋ ನಡೆಸಿದ ಸಂದರ್ಭದಲ್ಲಿ, ಶಿವಪ್ಪ ನಾಯಕ ವೃತ್ತದ ಬಳಿ ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡಿರುವ ಕುರಿತು ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಗಳು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಮಾಡಿಕೊಂಡ ಎರಡು ಪ್ರತ್ಯೇಕ ಪ್ರಕರಣಗಳ ಕುರಿತಂತೆ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯು ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ 1986 ಅಡಿ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದೇ ರೀತಿ ಇನ್ನೊಂದು ಪ್ರಕರಣದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಮಕ್ಕಳೊಂದಿಗೆ ಚುನಾವಣಾ ಪ್ರಚಾರ ಮಾಡುತ್ತಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಲಿಸಲಾಗಿತ್ತು.

ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ : ಪ್ರಕರಣ ದಾಖಲು!

ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಿಸಲಾಗಿದೆ.

ಕೇಂದ್ರ ಸಚಿವ ಅಮಿತ್ ಶಾ ಅವರು ಶಿವಮೊಗ್ಗ ನಗರದಲ್ಲಿ ರೋಡ್ ಶೋ ನಡೆಸಿದ ಸಂದರ್ಭದಲ್ಲಿ, ಶಿವಪ್ಪ ನಾಯಕ ವೃತ್ತದ ಬಳಿ ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡಿರುವ ಕುರಿತು ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣಗಳು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಮಾಡಿಕೊಂಡ ಎರಡು ಪ್ರತ್ಯೇಕ ಪ್ರಕರಣಗಳ ಕುರಿತಂತೆ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯು ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ 1986 ಅಡಿ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದೇ ರೀತಿ ಇನ್ನೊಂದು ಪ್ರಕರಣದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಮಕ್ಕಳೊಂದಿಗೆ ಚುನಾವಣಾ ಪ್ರಚಾರ ಮಾಡುತ್ತಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಲಿಸಲಾಗಿತ್ತು.

ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ : ಪ್ರಕರಣ ದಾಖಲು! Read More
ಶಿವಮೊಗ್ಗ ನಗರದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ, ಆಟೋ ಚಾಲಕರಿಬ್ಬರು ತಮಗೆ ಸಿಕ್ಕಿದ್ದ ನಗದು ಹಾಗೂ ಮೊಬೈಲ್ ಪೋನ್ ನನ್ನು, ಪೊಲೀಸರ ಮೂಲಕ ಕಳೆದುಕೊಂಡವರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಇತರರಿಗೆ ಮಾದರಿಯಾಗಿದ್ದಾರೆ. ಇವರ ಪ್ರಾಮಾಣಿಕತೆ, ಉತ್ತಮ ನಡವಳಿಕೆ ಮೆಚ್ಚಿ ಪೊಲೀಸ್ ಇಲಾಖೆ ಹಾಗೂ ವಸ್ತುಗಳನ್ನು ಕಳೆದುಕೊಂಡಿದ್ದವರು ಸದರಿ ಆಟೋ ಚಾಲಕರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.

ಶಿವಮೊಗ್ಗ : ಆಟೋ ಚಾಲಕರಿಬ್ಬರ ಪ್ರಾಮಾಣಿಕತೆ!

ಶಿವಮೊಗ್ಗ ನಗರದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ, ಆಟೋ ಚಾಲಕರಿಬ್ಬರು ತಮಗೆ ಸಿಕ್ಕಿದ್ದ ನಗದು ಹಾಗೂ ಮೊಬೈಲ್ ಪೋನ್ ನನ್ನು, ಪೊಲೀಸರ ಮೂಲಕ ಕಳೆದುಕೊಂಡವರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಇತರರಿಗೆ ಮಾದರಿಯಾಗಿದ್ದಾರೆ.  

ಇವರ ಪ್ರಾಮಾಣಿಕತೆ, ಉತ್ತಮ ನಡವಳಿಕೆ ಮೆಚ್ಚಿ ಪೊಲೀಸ್ ಇಲಾಖೆ ಹಾಗೂ ವಸ್ತುಗಳನ್ನು ಕಳೆದುಕೊಂಡಿದ್ದವರು ಸದರಿ ಆಟೋ ಚಾಲಕರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.

ಶಿವಮೊಗ್ಗ : ಆಟೋ ಚಾಲಕರಿಬ್ಬರ ಪ್ರಾಮಾಣಿಕತೆ! Read More
ಸೊರಬ - ಕಾರು ಡಿಕ್ಕಿ : ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರ ದಾರುಣ ಸಾವು!

ಸೊರಬ : ಕಾರು – ಬೈಕ್ ನಡುವೆ ಅಪಘಾತ ; ಸಹೋದರರಿಬ್ಬರ ದಾರುಣ ಸಾವು!

ಸೊರಬ, ಮೇ 3: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ಹಾಗೂ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಉಳವಿ ಸಮೀಪ ಬುಧವಾರ ನಡೆದಿದೆ.

ಸೊರಬ : ಕಾರು – ಬೈಕ್ ನಡುವೆ ಅಪಘಾತ ; ಸಹೋದರರಿಬ್ಬರ ದಾರುಣ ಸಾವು! Read More
ಮೊಟ್ಟಮೊದಲ ಬಾರಿಗೆ ಮಲೆನಾಡು ಭಾಗದಲ್ಲಿ ಮೂತ್ರಪಿಂಡ ಕಸಿ (ಕಿಡ್ನಿ ಟ್ರಾನ್ಸ್ಪ್ಲಾಂಟ್) ಶಸ್ತ್ರಚಿಕಿತ್ಸೆಯನ್ನು ಎನ್ ಯು ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ. 'ಇದೊಂದು ಮೈಲಿಗಲ್ಲಾಗಿದೆ' ಎಂದು ಎನ್‌ಯು ಆಸತ್ರೆ ಸಹಾಯಕ ವೈದ್ಯಕೀಯ ನಿರ್ದೇಶಕ ಡಾ.ಪ್ರವೀಣ್ ಮಾಳವದೆ ತಿಳಿಸಿದ್ದಾರೆ. ಮಾಚೇನಹಳ್ಳಿಯಲ್ಲಿಯ ಎನ್‌ಯು ಆಸ್ಪತ್ರೆಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 23 ವರ್ಷದ ಯುವತಿ ಉಸಿರಾಟದ ತೊಂದರೆಯಿಂದ ಬಳುತ್ತಿದ್ದರು. ಅವರನ್ನು ಪರೀಕ್ಷಿಸಿದಾಗ ಅಧಿಕ ರಕ್ತದೊತ್ತಡ, ಮೂತ್ರಪಿಂಡ ವೈಫಲ್ಯ ಕಂಡುಬಂದಿತ್ತು.

ಮೂತ್ರಪಿಂಡ ಕಸಿ ಯಶಸ್ವಿ ಶಸ್ತ್ರ ಚಿಕಿತ್ಸೆ : ಶಿವಮೊಗ್ಗ ಎನ್.ಯು. ಆಸ್ಪತ್ರೆ ವೈದ್ಯರ ತಂಡದ ಸಾಧನೆ!

ಮೊಟ್ಟಮೊದಲ ಬಾರಿಗೆ ಮಲೆನಾಡು ಭಾಗದಲ್ಲಿ ಮೂತ್ರಪಿಂಡ ಕಸಿ (ಕಿಡ್ನಿ ಟ್ರಾನ್ಸ್ಪ್ಲಾಂಟ್) ಶಸ್ತ್ರಚಿಕಿತ್ಸೆಯನ್ನು ಎನ್ ಯು ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ. ‘ಇದೊಂದು ಮೈಲಿಗಲ್ಲಾಗಿದೆ’ ಎಂದು ಎನ್‌ಯು ಆಸತ್ರೆ ಸಹಾಯಕ ವೈದ್ಯಕೀಯ ನಿರ್ದೇಶಕ ಡಾ.ಪ್ರವೀಣ್ ಮಾಳವದೆ ತಿಳಿಸಿದ್ದಾರೆ.

ಮಾಚೇನಹಳ್ಳಿಯಲ್ಲಿಯ ಎನ್‌ಯು ಆಸ್ಪತ್ರೆಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 23 ವರ್ಷದ ಯುವತಿ ಉಸಿರಾಟದ ತೊಂದರೆಯಿಂದ ಬಳುತ್ತಿದ್ದರು. ಅವರನ್ನು ಪರೀಕ್ಷಿಸಿದಾಗ ಅಧಿಕ ರಕ್ತದೊತ್ತಡ, ಮೂತ್ರಪಿಂಡ ವೈಫಲ್ಯ ಕಂಡುಬಂದಿತ್ತು.

ಮೂತ್ರಪಿಂಡ ಕಸಿ ಯಶಸ್ವಿ ಶಸ್ತ್ರ ಚಿಕಿತ್ಸೆ : ಶಿವಮೊಗ್ಗ ಎನ್.ಯು. ಆಸ್ಪತ್ರೆ ವೈದ್ಯರ ತಂಡದ ಸಾಧನೆ! Read More
ಮೊಬೈಲ್ ನಲ್ಲಿ ಬಾಲಕಿಯ ಅಶ್ಲೀಲ ಫೋಟೋ ತೆಗೆದು ಕಿರುಕುಳ ನೀಡುತ್ತಿದ್ದ ಯುವಕನಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO)  ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಶಿವಮೊಗ್ಗ ನಗರದ ನಿವಾಸಿ 24 ವರ್ಷ ವಯೋಮಾನದ ಯುವಕನೆ ಜೈಲು ಶಿಕ್ಷೆಗೆ ಗುರಿಯಾದವನೆಂದು ಗುರುತಿಸಲಾಗಿದೆ. ಜೈಲು ಶಿಕ್ಷೆಯ ಜೊತೆಗೆ 3,01,000 ರೂ. ದಂಡ ವಿಧಿಸಲಾಗಿದೆ. ಮೇ 2 ರಂದು ನ್ಯಾಯಾಧೀಶರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ಮೊಬೈಲ್ ಪೋನ್ ಮೂಲಕ ಬಾಲಕಿಯ ಅಶ್ಲೀಲ ಫೋಟೋ ತೆಗೆದು ಕಿರುಕುಳ : ಯುವಕನಿಗೆ ಜೈಲು ಶಿಕ್ಷೆ!

ಮೊಬೈಲ್ ನಲ್ಲಿ ಬಾಲಕಿಯ ಅಶ್ಲೀಲ ಫೋಟೋ ತೆಗೆದು ಕಿರುಕುಳ ನೀಡುತ್ತಿದ್ದ ಯುವಕನಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO)  ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಶಿವಮೊಗ್ಗ ನಗರದ ನಿವಾಸಿ 24 ವರ್ಷ ವಯೋಮಾನದ ಯುವಕನೆ ಜೈಲು ಶಿಕ್ಷೆಗೆ ಗುರಿಯಾದವನೆಂದು ಗುರುತಿಸಲಾಗಿದೆ. ಜೈಲು ಶಿಕ್ಷೆಯ ಜೊತೆಗೆ 3,01,000 ರೂ. ದಂಡ ವಿಧಿಸಲಾಗಿದೆ. ಮೇ 2 ರಂದು ನ್ಯಾಯಾಧೀಶರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ಮೊಬೈಲ್ ಪೋನ್ ಮೂಲಕ ಬಾಲಕಿಯ ಅಶ್ಲೀಲ ಫೋಟೋ ತೆಗೆದು ಕಿರುಕುಳ : ಯುವಕನಿಗೆ ಜೈಲು ಶಿಕ್ಷೆ! Read More
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ 20 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO)  ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.  33 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದವ. ಶಿಕ್ಷೆಯ ಜೊತೆಗೆ 20 ಸಾವಿರ ರೂ. ದಂಡ ಕೂಡ ವಿಧಿಸಲಾಗಿದ್ದು, ದಂಡ ಕಟ್ಟಲು ವಿಫಲವಾದಲ್ಲಿ 6 ತಿಂಗಳ ಕಾಲ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಮೇ 2 ರಂದು ನೀಡಿರುವ ತೀರ್ಪಿನಲ್ಲಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ಬಾಲಕಿಗೆ ಲೈಂಗಿಕ ಕಿರುಕುಳ : ಯುವಕನಿಗೆ 20 ವರ್ಷ ಜೈಲು ಶಿಕ್ಷೆ!

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ 20 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO)  ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. 

33 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದವ. ಶಿಕ್ಷೆಯ ಜೊತೆಗೆ 20 ಸಾವಿರ ರೂ. ದಂಡ ಕೂಡ ವಿಧಿಸಲಾಗಿದ್ದು, ದಂಡ ಕಟ್ಟಲು ವಿಫಲವಾದಲ್ಲಿ 6 ತಿಂಗಳ ಕಾಲ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಮೇ 2 ರಂದು ನೀಡಿರುವ ತೀರ್ಪಿನಲ್ಲಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ಬಾಲಕಿಗೆ ಲೈಂಗಿಕ ಕಿರುಕುಳ : ಯುವಕನಿಗೆ 20 ವರ್ಷ ಜೈಲು ಶಿಕ್ಷೆ! Read More
ಚಿತ್ರನಟ ಶಿವರಾಜಕುಮಾರ್ ಅವರು ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಬೀಡುಬಿಟ್ಟಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ ಮಂಗಳವಾರ ಆಯೋಜಿತವಾಗಿದ್ದ ಕಾಂಗ್ರೆಸ್ ಪಕ್ಷದ ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿರವರ ಜೊತೆ ವೇದಿಕೆ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಸಮಾರಂಭದಲ್ಲಿ ಮಾತನಾಡಿದ ಶಿವರಾಜಕುಮಾರ್, ‘ತಾವು ರಾಹುಲ್ ಗಾಂಧಿ ಅಭಿಮಾನಿಯಾಗಿದ್ದೆನೆ. ಅವರನ್ನು ನೋಡಲೆಂದು ಆಗಮಿಸಿದ್ದೆನೆ. ಭಾರತ್ ಜೋಡೋ ಯಾತ್ರೆ ನೋಡಿ ತಮಗೆ ಅತೀವ ಸಂತೋಷ ಉಂಟಾಯಿತು. ಅವರ ಫಿಟ್ನೆಸ್ ಇಷ್ಟವಾಯಿತು. ಒಂದು ಉದ್ದೇಶಕ್ಕಾಗಿ ಇಡೀ ದೇಶವನ್ನು ನಡೆದುಕೊಂಡು ಹೋದ ಅವರ ಬಗ್ಗೆ ಅಭಿಮಾನವಿದೆ.

ತೀರ್ಥಹಳ್ಳಿ – ‘ರಾಹುಲ್ ಗಾಂಧಿ ಅಭಿಮಾನಿಯಾಗಿ ಬಂದಿದ್ದೆನೆ’ : ನಟ ಶಿವರಾಜಕುಮಾರ್

ಚಿತ್ರನಟ ಶಿವರಾಜಕುಮಾರ್ ಅವರು ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಬೀಡುಬಿಟ್ಟಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.

ಈ ನಡುವೆ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ ಮಂಗಳವಾರ ಆಯೋಜಿತವಾಗಿದ್ದ ಕಾಂಗ್ರೆಸ್ ಪಕ್ಷದ ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿರವರ ಜೊತೆ ವೇದಿಕೆ ಹಂಚಿಕೊಂಡು ಗಮನ ಸೆಳೆದಿದ್ದಾರೆ.

ಸಮಾರಂಭದಲ್ಲಿ ಮಾತನಾಡಿದ ಶಿವರಾಜಕುಮಾರ್, ‘ತಾವು ರಾಹುಲ್ ಗಾಂಧಿ ಅಭಿಮಾನಿಯಾಗಿದ್ದೆನೆ. ಅವರನ್ನು ನೋಡಲೆಂದು ಆಗಮಿಸಿದ್ದೆನೆ. ಭಾರತ್ ಜೋಡೋ ಯಾತ್ರೆ ನೋಡಿ ತಮಗೆ ಅತೀವ ಸಂತೋಷ ಉಂಟಾಯಿತು.

ತೀರ್ಥಹಳ್ಳಿ – ‘ರಾಹುಲ್ ಗಾಂಧಿ ಅಭಿಮಾನಿಯಾಗಿ ಬಂದಿದ್ದೆನೆ’ : ನಟ ಶಿವರಾಜಕುಮಾರ್ Read More
‘ಬಿಜೆಪಿಯವರಿಗೆ 40 ನಂಬರ್ ಮೇಲೆ ಬಹಳ ಪ್ರೀತಿಯಿದೆ. ಈ ಕಾರಣದಿಂದ ಅವರಿಗೆ 40 ಸೀಟ್ ಮಾತ್ರ ನೀಡಿ’ ಎಂದು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಮತದಾರರಿಗೆ ಕರೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ ಮಂಗಳವಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿಜೆಪಿ ಕಳ್ಳತನ ಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಮುಂದೆಯೂ ಹೀಗೆಯೇ ಮಾಡಲಿದೆ. ಈ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ ಎಂದರು.

ತೀರ್ಥಹಳ್ಳಿ – ‘ಬಿಜೆಪಿಯವರಿಗೆ 40 ನಂಬರ್ ಎಂದರೇ ಇಷ್ಟ – ಅವರಿಗೆ 40 ಸೀಟ್ ಮಾತ್ರ ನೀಡಿ’ : ರಾಹುಲ್ ಗಾಂಧಿ

‘ಬಿಜೆಪಿಯವರಿಗೆ 40 ನಂಬರ್ ಮೇಲೆ ಬಹಳ ಪ್ರೀತಿಯಿದೆ. ಈ ಕಾರಣದಿಂದ ಅವರಿಗೆ 40 ಸೀಟ್ ಮಾತ್ರ ನೀಡಿ’ ಎಂದು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಮತದಾರರಿಗೆ ಕರೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಬಾಳೇಬೈಲಿನಲ್ಲಿ ಮಂಗಳವಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಿಜೆಪಿ ಕಳ್ಳತನ ಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಮುಂದೆಯೂ ಹೀಗೆಯೇ ಮಾಡಲಿದೆ. ಈ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ ಎಂದರು.

ತೀರ್ಥಹಳ್ಳಿ – ‘ಬಿಜೆಪಿಯವರಿಗೆ 40 ನಂಬರ್ ಎಂದರೇ ಇಷ್ಟ – ಅವರಿಗೆ 40 ಸೀಟ್ ಮಾತ್ರ ನೀಡಿ’ : ರಾಹುಲ್ ಗಾಂಧಿ Read More