ನಿರೀಕ್ಷಿಸಿದಂತೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು ಪ್ರಯಾಸದ ಜಯ ಸಂಪಾದಿಸಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು ಭಾರೀ ಹೋರಾಟ ನೀಡಿದ್ದು, ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಣಿ ಮಾಲತೇಶ್ ಅವರು ಠೇವಣಿ ಕಳೆದುಕೊಂಡು ಹೀನಾಯ ಸೋಲನುಭವಿಸಿದ್ದಾರೆ! ವಿಜೇತ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು 81,015 ಮತ ಪಡೆದಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು 70,371 ಮತ ಪಡೆದಿದ್ದಾರೆ. ಬಿ.ವೈ. ವಿಜಯೇಂದ್ರ ಅವರು ನಾಗರಾಜಗೌಡ ಎದುರು 10,644 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ಅವರು 8038 ಮತ ಗಳಿಸಲಷ್ಟೆ ಶಕ್ತರಾಗಿದ್ದಾರೆ.

ಶಿಕಾರಿಪುರ : ಬಿ.ವೈ.ವಿಜಯೇಂದ್ರಗೆ ಪ್ರಯಾಸದ ಗೆಲುವು!

ಶಿಕಾರಿಪುರ, ಮೇ 13: ನಿರೀಕ್ಷಿಸಿದಂತೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು ಪ್ರಯಾಸದ ಜಯ ಸಂಪಾದಿಸಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು ಭಾರೀ ಹೋರಾಟ ನೀಡಿದ್ದು, ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಣಿ ಮಾಲತೇಶ್ ಅವರು ಠೇವಣಿ ಕಳೆದುಕೊಂಡು ಹೀನಾಯ ಸೋಲನುಭವಿಸಿದ್ದಾರೆ!

ವಿಜೇತ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು 81,015 ಮತ ಪಡೆದಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು 70,371 ಮತ ಪಡೆದಿದ್ದಾರೆ. ಬಿ.ವೈ. ವಿಜಯೇಂದ್ರ ಅವರು ನಾಗರಾಜಗೌಡ ಎದುರು 10,644 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ಅವರು 8038 ಮತ ಗಳಿಸಲಷ್ಟೆ ಶಕ್ತರಾಗಿದ್ದಾರೆ.

ಶಿಕಾರಿಪುರ : ಬಿ.ವೈ.ವಿಜಯೇಂದ್ರಗೆ ಪ್ರಯಾಸದ ಗೆಲುವು! Read More
ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರರಿಬ್ಬರ ಸ್ಪರ್ಧೆಯಿಂದ ಗಮನ ಸೆಳೆದಿದ್ದ, ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಭಾರೀ ಮತಗಳ ಅಂತರದಲ್ಲಿ ವಿಜಯದ ನಗೆ ಬೀರಿದ್ದಾರೆ. ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಪರಾಭವಗೊಂಡಿದ್ದು, ತೀವ್ರ ಮುಖಭಂಗಕ್ಕೀಡಾಗಿದ್ದಾರೆ! ಮಧು ಬಂಗಾರಪ್ಪ ಅವರು 98,232 ಮತ ಪಡೆದಿದ್ದಾರೆ. ಅವರ ಪ್ರತಿಸ್ಪರ್ಧಿ ಕುಮಾರ್ ಬಂಗಾರಪ್ಪ ಅವರು 54,311 ಮತ ಪಡೆಯಲಷ್ಟೆ ಶಕ್ತರಾಗಿದ್ದಾರೆ. ಮಧು ಬಂಗಾರಪ್ಪ ಅವರು 43,921 ಮತಗಳ ಅಂತರದಲ್ಲಿ ಕುಮಾರ್ ಬಂಗಾರಪ್ಪರನ್ನು ಮಣಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಬಾಸೂರು ಚಂದ್ರೇಗೌಡ ಅವರು 6428 ಮತ ಪಡೆದಿದ್ದಾರೆ. ಅಖಾಡದಲ್ಲಿದ್ದ ಉಳಿದ ಅಭ್ಯರ್ಥಿಗಳ ಮತ ಗಳಿಕೆ ಪ್ರಮಾಣ ಸಾವಿರದ ಗಡಿ ದಾಟಿಲ್ಲ.

ಸೊರಬ : ಭಾರೀ ಮತಗಳ ಅಂತರದಲ್ಲಿ ಜಯ ಸಾಧಿಸಿದ ಮಧು ಬಂಗಾರಪ್ಪ!

ಸೊರಬ, ಮೇ 13: ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರರಿಬ್ಬರ ಸ್ಪರ್ಧೆಯಿಂದ ಗಮನ ಸೆಳೆದಿದ್ದ, ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಭಾರೀ ಮತಗಳ ಅಂತರದಲ್ಲಿ ವಿಜಯದ ನಗೆ ಬೀರಿದ್ದಾರೆ. ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಪರಾಭವಗೊಂಡಿದ್ದು, ತೀವ್ರ ಮುಖಭಂಗಕ್ಕೀಡಾಗಿದ್ದಾರೆ!

ಮಧು ಬಂಗಾರಪ್ಪ ಅವರು 98,232 ಮತ ಪಡೆದಿದ್ದಾರೆ. ಅವರ ಪ್ರತಿಸ್ಪರ್ಧಿ ಕುಮಾರ್ ಬಂಗಾರಪ್ಪ ಅವರು 54,311 ಮತ ಪಡೆಯಲಷ್ಟೆ ಶಕ್ತರಾಗಿದ್ದಾರೆ. ಮಧು ಬಂಗಾರಪ್ಪ ಅವರು 43,921 ಮತಗಳ ಅಂತರದಲ್ಲಿ ಕುಮಾರ್ ಬಂಗಾರಪ್ಪರನ್ನು ಮಣಿಸಿದ್ದಾರೆ.

ಸೊರಬ : ಭಾರೀ ಮತಗಳ ಅಂತರದಲ್ಲಿ ಜಯ ಸಾಧಿಸಿದ ಮಧು ಬಂಗಾರಪ್ಪ! Read More
ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು, ಮೇ 13 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 13 ರಂದು ನಗರದ ವಿವಿಧೆಡೆ ವಾಹನಗಳ ಸಂಚಾರ ಮಾರ್ಗ ಬದಲಾವಣೆಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ವಿವರ: ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲ ವಾಹನಗಳ ಸಂಚಾರ, ನಿಲುಗಡೆ ನಿಷೇಧಿಸಲಾಗಿದೆ. ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಹೆಚ್ ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ ವರೆಗೆ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ವಿಧಾನಸಭೆ ಚುನಾವಣೆ ಮತ ಎಣಿಕೆ : ಮೇ 13 ರಂದು ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ, ಮೇ 12: ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು, ಮೇ 13 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 13 ರಂದು ನಗರದ ವಿವಿಧೆಡೆ  ವಾಹನಗಳ ಸಂಚಾರ ಮಾರ್ಗ ಬದಲಾವಣೆಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ವಿವರ: ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲ ವಾಹನಗಳ ಸಂಚಾರ, ನಿಲುಗಡೆ ನಿಷೇಧಿಸಲಾಗಿದೆ. ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಹೆಚ್ ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ ವರೆಗೆ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರು, ಭದ್ರಾವತಿ, ಎನ್.ಆರ್ ಪುರ ಕಡೆಯಿಂದ ಬರುವ ಭಾರೀ ವಾಹನ, ಬಸ್, ಕಾರು, ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಸಂಚರಿಸಬೇಕು.

ವಿಧಾನಸಭೆ ಚುನಾವಣೆ ಮತ ಎಣಿಕೆ : ಮೇ 13 ರಂದು ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳ ಸಂಚಾರ ಮಾರ್ಗ ಬದಲಾವಣೆ Read More
ಶಿವಮೊಗ್ಗ, ಮೇ.11: ‘ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ : ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಮತ ಎಣಿಕೆ!

ಶಿವಮೊಗ್ಗ, ಮೇ.12: ‘ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಅಂಚೆ ಮತ ಎಣಿಕೆಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರವಾರು ಹೆಚ್ಚುವರಿಯಾಗಿ 6 ಮಂದಿ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರು ಶನಿವಾರ ಬೆಳಿಗ್ಗೆ 7ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಆಗಮಿಸಲು ಸೂಚನೆ ನೀಡಲಾಗಿದೆ.

ವಿಧಾನಸಭೆ ಚುನಾವಣೆ : ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಮತ ಎಣಿಕೆ! Read More
ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ

ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು – 10 ಜನರಿಗೆ ಗಾಯ!

ಶಿವಮೊಗ್ಗ ತಾಲೂಕಿನ ಚೋರಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯ ಹಳೇ ಸೇತುವೆ ತಿರುವಿನ ಬಳಿ, ಬುಧವಾರ ಸಂಜೆ ಎರಡು ಖಾಸಗಿ ಪ್ರಯಾಣಿಕ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಪ್ರಾಥಮಿಕ ಹಂತದ ಮಾಹಿತಿ ಅನುಸಾರ, ಇಬ್ಬರು ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದಂತೆ ಸುಮಾರು 5 ರಿಂದ 6 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗದಿಂದ ಶಿಕಾರಿಪುರದೆಡೆಗೆ ತೆರಳುತ್ತಿದ್ದ ಹಾಗೂ ಶಿಕಾರಿಪುರದಿಂದ ಶಿವಮೊಗ್ಗದೆಡೆಗೆ ಆಗಮಿಸುತ್ತಿದ್ದ ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಎರಡು ಬಸ್ ಗಳ ಮುಂಭಾಗ ಸಂಪೂರ್ಣ ನುಜ್ಜಗಜ್ಜಾಗಿದೆ.

ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು – 10 ಜನರಿಗೆ ಗಾಯ! Read More
ವಿಧಾನಸಭೆ ಸಾರ್ವತ್ರಿಕ ಚುನಾವಣೆ - 2023 ಮಹಾ ಸಮರಕ್ಕೆ ತೆರೆ ಬಿದ್ದಿದೆ. ಮೇ 13 ರ ಮತ ಎಣಿಕೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ರಾಜಕೀಯ ಪಕ್ಷ ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರಗಳು ಬಿರುಸುಗೊಂಡಿವೆ! ಯಾವ ಅಸೆಂಬ್ಲಿ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ? ಯಾವ ಪಕ್ಷಕ್ಕೆ ಎಷ್ಟೆಷ್ಟು ಮತ ಬೀಳಬಹುದು? ಯಾವ ಅಭ್ಯರ್ಥಿ ಗೆಲ್ಲಬಹುದು – ಸೋಲಬಹುದು? ಸೋಲು – ಗೆಲುವಿಗೆ ಕಾರಣವಾಗುವ ಅಂಶಗಳೇನು? ಎಂಬಿತ್ಯಾದಿ ಚರ್ಚೆಗಳು ಸರ್ವೇ ಸಾಮಾನ್ಯವಾಗಿದೆ. ಮತ್ತೊಂದೆಡೆ, ಕೆಲ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಅಸೆಂಬ್ಲಿ ಕ್ಷೇತ್ರಗಳ ಪ್ರತಿಯೊಂದು ಬೂತ್ ನಲ್ಲಿ ಆಗಿರುವ ಮತದಾನದ ವಿವರ ಕಲೆ ಹಾಕುತ್ತಿದ್ದಾರೆ. ತಮ್ಮ ಪಕ್ಷಗಳ ಬೂತ್ ಏಜೆಂಟ್ ಗಳ ಮೂಲಕ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇದರ ಆಧಾರದ ಮೇಲೆ ಯಾವ್ಯಾವ ಭಾಗದಲ್ಲಿ ಎಷ್ಟೆಷ್ಟು ಮತ ತಮಗೆ ಬಿದ್ದಿರಬಹುದು? ಎದುರಾಳಿಗಳ ಮತ ಗಳಿಕೆ ಎಷ್ಟಿರಬಹುದು? ಎಂಬ ಊಹಾತ್ಮಕ ಲೆಕ್ಕಾಚಾರದಲ್ಲಿ ಮುಳುಗಿರುವುದು ಕಂಡುಬರುತ್ತಿದೆ.

ಮತದಾನದ ನಂತರ ಸೋಲು-ಗೆಲುವಿನ ಲೆಕ್ಕಾಚಾರ ಬಿರುಸು!

ವಿಧಾನಸಭೆ ಸಾರ್ವತ್ರಿಕ ಚುನಾವಣೆ – 2023 ಮಹಾ ಸಮರಕ್ಕೆ ತೆರೆ ಬಿದ್ದಿದೆ. ಮೇ 13 ರ ಮತ ಎಣಿಕೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ರಾಜಕೀಯ ಪಕ್ಷ ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರಗಳು ಬಿರುಸುಗೊಂಡಿವೆ!

ಯಾವ ಅಸೆಂಬ್ಲಿ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ? ಯಾವ ಪಕ್ಷಕ್ಕೆ ಎಷ್ಟೆಷ್ಟು ಮತ ಬೀಳಬಹುದು? ಯಾವ ಅಭ್ಯರ್ಥಿ ಗೆಲ್ಲಬಹುದು – ಸೋಲಬಹುದು? ಸೋಲು – ಗೆಲುವಿಗೆ ಕಾರಣವಾಗುವ ಅಂಶಗಳೇನು? ಎಂಬಿತ್ಯಾದಿ ಚರ್ಚೆಗಳು ಸರ್ವೇ ಸಾಮಾನ್ಯವಾಗಿದೆ.

ಮತದಾನದ ನಂತರ ಸೋಲು-ಗೆಲುವಿನ ಲೆಕ್ಕಾಚಾರ ಬಿರುಸು! Read More
ಶಿವಮೊಗ್ಗ, ಮೇ 10: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಬುಧವಾರ ನಡೆದ ಮತದಾನ ಕಾರ್ಯಕ್ಕೆ ಅಂತಿಮ ತೆರೆ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ, ಒಟ್ಟಾರೆ ಶೇ. 78.28 ರಷ್ಟು ಮತದಾನವಾಗಿದೆ. ಶಿವಮೊಗ್ಗಗ್ರಾಮಾಂತರ ಶೇ. 83.71, ಭದ್ರಾವತಿ ಶೇ. 68.47, ಶಿವಮೊಗ್ಗ ಶೇ. 68.74, ತೀರ್ಥಹಳ್ಳಿ ಶೇ. 84.83, ಶಿಕಾರಿಪುರ ಶೇ. 82.57, ಸೊರಬ ಶೇ. 82.97, ಸಾಗರ ಶೇ. 80.29 ರಷ್ಟು ಮತದಾನವಾಗಿದೆ.

ವಿಧಾನಸಭೆ ಚುನಾವಣೆ : ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 78.28 ರಷ್ಟು ಮತದಾನ

ಶಿವಮೊಗ್ಗ, ಮೇ 10: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಬುಧವಾರ ನಡೆದ ಮತದಾನ ಕಾರ್ಯಕ್ಕೆ ಅಂತಿಮ ತೆರೆ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ, ಒಟ್ಟಾರೆ ಶೇ. 78.28 ರಷ್ಟು ಮತದಾನವಾಗಿದೆ.

ಶಿವಮೊಗ್ಗಗ್ರಾಮಾಂತರ ಶೇ. 83.71, ಭದ್ರಾವತಿ ಶೇ. 68.47, ಶಿವಮೊಗ್ಗ ಶೇ. 68.74, ತೀರ್ಥಹಳ್ಳಿ ಶೇ. 84.83, ಶಿಕಾರಿಪುರ ಶೇ. 82.57, ಸೊರಬ ಶೇ. 82.97, ಸಾಗರ ಶೇ. 80.29 ರಷ್ಟು ಮತದಾನವಾಗಿದೆ.

ವಿಧಾನಸಭೆ ಚುನಾವಣೆ : ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 78.28 ರಷ್ಟು ಮತದಾನ Read More
ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಬುಧವಾರ ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿತ್ತು. ಬಿಸಿಲ ಬೇಗೆಯ ನಡುವೆಯೂ ಮತಗಟ್ಟೆಗಳಲ್ಲಿ ಸರದಿ ಸಾಲಿನಲ್ಲಿ ನಿಂತು, ಅತ್ಯಂತ ಉತ್ಸಾಹದಿಂದ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ, ಕೆಲ ಸಮಯ ಮತದಾನ ಕಾರ್ಯ ಸ್ಥಗಿತಗೊಂಡಿದ್ದ ವರದಿಗಳು ಹೊರತುಪಡಿಸಿದರೆ, ಉಳಿದಂತೆ ಯಾವುದೇ ಅಹಿತಕರ ಘಟನೆ ಹಾಗೂ ಗೊಂದಲ-ಗಡಿಬಿಡಿಯಿಲ್ಲದೆ ಮತದಾನ ಪ್ರಕ್ರಿಯೆ ನಡೆಯಿತು.

ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ

ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಬುಧವಾರ ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿತ್ತು. ಬಿಸಿಲ ಬೇಗೆಯ ನಡುವೆಯೂ ಮತಗಟ್ಟೆಗಳಲ್ಲಿ ಸರದಿ ಸಾಲಿನಲ್ಲಿ ನಿಂತು, ಅತ್ಯಂತ ಉತ್ಸಾಹದಿಂದ ಮತದಾರರು ತಮ್ಮ ಹಕ್ಕು ಚಲಾಯಿಸಿದರು.

ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ, ಕೆಲ ಸಮಯ ಮತದಾನ ಕಾರ್ಯ ಸ್ಥಗಿತಗೊಂಡಿದ್ದ ವರದಿಗಳು ಹೊರತುಪಡಿಸಿದರೆ, ಉಳಿದಂತೆ ಯಾವುದೇ ಅಹಿತಕರ ಘಟನೆ ಹಾಗೂ ಗೊಂದಲ-ಗಡಿಬಿಡಿಯಿಲ್ಲದೆ ಮತದಾನ ಪ್ರಕ್ರಿಯೆ ನಡೆಯಿತು.

ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ Read More
ಶಿವಮೊಗ್ಗ, ಮೇ 9: ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಇಬ್ಬರು ಸಿಬ್ಬಂದಿಗಳು, ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ, ಆರೋಪಿತ ನೌಕರರನ್ನು ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಮದ್ಯ ಸೇವಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರು : ಇಬ್ಬರು ಸಸ್ಪೆಂಡ್!

ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಇಬ್ಬರು ಸಿಬ್ಬಂದಿಗಳು, ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ, ಆರೋಪಿತ ನೌಕರರನ್ನು ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಭದ್ರಾವತಿ ತಾಲೂಕು ಬಿ.ಆರ್.ಪಿ. ತೋಟಗಾರಿಕೆ ಕ್ಷೇತ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಬಿ.ರಮೇಶ್ ಹಾಗೂ ಸೊರಬ ತಾಲೂಕು ಹುರುಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾದ ಮಾಲತೇಶ್ ಎನ್ ಅಮಾನತ್ತುಗೊಂಡವರೆಂದು ಗುರುತಿಸಲಾಗಿದೆ.

ಮದ್ಯ ಸೇವಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರು : ಇಬ್ಬರು ಸಸ್ಪೆಂಡ್! Read More
2023 ನೇ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾನ ಜಾಗೃತಿ ನಡೆಯುತ್ತಿದ್ದು, ಮದುವೆ ಮನೆಯೊಂದರಲ್ಲಿ ಸಮನ್ವಯ ಟ್ರಸ್ಟ್ ಸದಸ್ಯರು ಮತದಾನ ಮಾಡುವಂತೆ ಮದುವೆಗೆ ಆಗಮಿಸಿದ್ದವರಿಗೆ ಜಾಗೃತಿ ಮೂಡಿಸಿದರು. ಶಿವಮೊಗ್ಗ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ ಅವರ ಪುತ್ರಿ ದಾಮಿನಿ ಟಿ.ಕೆ. ಹಾಗೂ ಶಿಕಾರಿಪುರದ ಡಾ. ಹೇಮಂತ್ಕುಮಾರ್ ಅವರ ವಿವಾಹವು ಭಾನುವಾರ ಜರುಗಿತು

ಮದುವೆ ಮನೆಯಲ್ಲಿ ಮತದಾನ ಜಾಗೃತಿ!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾನ ಜಾಗೃತಿ ನಡೆಯುತ್ತಿದ್ದು, ಮದುವೆ ಮನೆಯೊಂದರಲ್ಲಿ ಸಮನ್ವಯ ಟ್ರಸ್ಟ್ ಸದಸ್ಯರು ಮತದಾನ ಮಾಡುವಂತೆ ಮದುವೆಗೆ ಆಗಮಿಸಿದ್ದವರಿಗೆ ಜಾಗೃತಿ ಮೂಡಿಸಿದರು.

ಶಿವಮೊಗ್ಗ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ ಅವರ ಪುತ್ರಿ ದಾಮಿನಿ ಟಿ.ಕೆ. ಹಾಗೂ ಶಿಕಾರಿಪುರದ ಡಾ. ಹೇಮಂತ್‌ಕುಮಾರ್ ಅವರ ವಿವಾಹವು ಭಾನುವಾರ ಜರುಗಿತು.

ಮದುವೆ ಮನೆಯಲ್ಲಿ ಮತದಾನ ಜಾಗೃತಿ! Read More