ದಿಢೀರ್ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದ, ಮಣಿಪುರ ರಾಜ್ಯ ಅಕ್ಷರಶಃ ನುಲುಗಿ ಹೋಗಿದೆ. ಈ ನಡುವೆ ಮಣಿಪುರ ರಾಜ್ಯದಲ್ಲಿ ವಿದ್ಯಾಭ್ಯಾಸಕ್ಕೆಂದು ತೆರಳಿದ್ದ ಕರ್ನಾಟಕ ರಾಜ್ಯದ ನಾಲ್ವರು ವಿದ್ಯಾರ್ಥಿಗಳನ್ನು, ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ ನಡೆಸಲಾರಂಭಿಸಿದೆ.

ಹಿಂಸಾಪೀಡಿತ ಮಣಿಪುರದಲ್ಲಿದ್ದ ಕರ್ನಾಟಕದ ನಾಲ್ವರು ವಿದ್ಯಾರ್ಥಿಗಳಿಗೆ ನೆರವಿನಹಸ್ತ!

ಬೆಂಗಳೂರು/ಶಿವಮೊಗ್ಗ, ಮೇ 8: ದಿಢೀರ್ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದ, ಮಣಿಪುರ ರಾಜ್ಯ ಅಕ್ಷರಶಃ ನುಲುಗಿ ಹೋಗಿದೆ. ಈ ನಡುವೆ ಮಣಿಪುರ ರಾಜ್ಯದಲ್ಲಿ ವಿದ್ಯಾಭ್ಯಾಸಕ್ಕೆಂದು ತೆರಳಿದ್ದ ಕರ್ನಾಟಕ ರಾಜ್ಯದ ನಾಲ್ವರು ವಿದ್ಯಾರ್ಥಿಗಳನ್ನು, ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ ನಡೆಸಲಾರಂಭಿಸಿದೆ.   

ಇದರಲ್ಲಿ ಶಿವಮೊಗ್ಗ ನಗರದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಿಬ್ಬಂದಿ ತಿಪ್ಪೇಸ್ವಾಮಿ ಅವರ ಪುತ್ರ ಮನೋಜ್ ಹಾಗೂ ತೀರ್ಥಹಳ್ಳಿ ತಾಲೂಕು ಕೋಣಂದೂರು ನಿವಾಸಿ ವಿಶಾಲ ಪ್ರಫುಲ್ಲಚಂದ್ರ ಅವರ ಪುತ್ರಿ ಅಪ್ಸರ ಕೆ.ಪಿ. ಕೂಡ ಸೇರಿದ್ದಾರೆ. ಇವರಿಬ್ಬರು ಮಣಿಪುರದ ಇಂಫಾಲ ಅಗ್ರಿಕಲ್ಚರ್ ಯೂನಿವರ್ಸಿಟಿ ಕಾಲೇಜ್ ನಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಉಳಿದಂತೆ ಚಿಕ್ಕಮಗಳೂರು ಹಾಗೂ ಬಾಗಲಕೋಟೆ ಜಮಖಂಡಿಯ ಇಬ್ಬರು ವಿದ್ಯಾರ್ಥಿಗಳು ಎನ್.ಐ.ಟಿ. ಕಾಲೇಜೊಂದರಲ್ಲಿ ಅಭ್ಯಾಸ  ನಡೆಸುತ್ತಿದ್ದಾರೆ.

ಹಿಂಸಾಪೀಡಿತ ಮಣಿಪುರದಲ್ಲಿದ್ದ ಕರ್ನಾಟಕದ ನಾಲ್ವರು ವಿದ್ಯಾರ್ಥಿಗಳಿಗೆ ನೆರವಿನಹಸ್ತ! Read More
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ರಿಸಲ್ಟ್ : ರಾಜ್ಯದಲ್ಲಿ 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು! ಬೆಂಗಳೂರು, ಮೇ 8: 2022-23 ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಪ್ರಸ್ತುತ ವರ್ಷ ಶೇ. 83.89 ರಷ್ಟು ಫಲಿತಾಂಶ ಬಂದಿದೆ. ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ. 83.89 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದು, ಶೇ. 80.08 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ 8,35,102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 7,00,619 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಭೂಮಿಕಾ ಪೈ, ವಿಜಯಪುರ ಜಿಲ್ಲೆಯ ಭೀಮನಗೌಡ ಪಾಟೀಲ್, ಬೆಳಗಾವಿ ಜಿಲ್ಲೆ ಅನುಪಮಾ ಶ್ರೀಶೈಲ್ ಹಿರೆಹೊಳಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಯಶಸ್ ಗೌಡ ಈ ಸಾಧನೆ ಮಾಡಿದವರಾಗಿದ್ದಾರೆ. ಇಡೀ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಮಂಡ್ಯ 2 ನೇ ಸ್ಥಾನ, ಹಾಸನ 3 ನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆಯು ಕೊನೆ ಸ್ಥಾನ ಪಡೆದುಕೊಂಡಿದೆ. ಶಿವಮೊಗ್ಗ 29 ನೇ ಸ್ಥಾನದಲ್ಲಿದೆ.

ಎಸ್​ಎಸ್​ಎಲ್​ಸಿ ರಿಸಲ್ಟ್ : 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು!

ಬೆಂಗಳೂರು, ಮೇ 8: 2022-23 ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಪ್ರಸ್ತುತ ವರ್ಷ ಶೇ. 83.89 ರಷ್ಟು ಫಲಿತಾಂಶ ಬಂದಿದೆ. ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಶೇ. 83.89 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದು, ಶೇ. 80.08 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ 8,35,102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 7,00,619 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ನಾಲ್ವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಭೂಮಿಕಾ ಪೈ, ವಿಜಯಪುರ ಜಿಲ್ಲೆಯ ಭೀಮನಗೌಡ ಪಾಟೀಲ್, ಬೆಳಗಾವಿ ಜಿಲ್ಲೆಯ ಅನುಪಮಾ ಶ್ರೀಶೈಲ್ ಹಿರೆಹೊಳಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಯಶಸ್ ಗೌಡ ಈ ಸಾಧನೆ ಮಾಡಿದವರಾಗಿದ್ದಾರೆ.

ಇಡೀ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಮಂಡ್ಯ 2 ನೇ ಸ್ಥಾನ, ಹಾಸನ 3 ನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆಯು ಕೊನೆ ಸ್ಥಾನ ಪಡೆದುಕೊಂಡಿದೆ. ಶಿವಮೊಗ್ಗ 29 ನೇ ಸ್ಥಾನದಲ್ಲಿದೆ.

ಎಸ್​ಎಸ್​ಎಲ್​ಸಿ ರಿಸಲ್ಟ್ : 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು! Read More
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ಬಿಜೆಪಿ ಪಕ್ಷ ಆಯೋಜಿಸಿದ್ದ ಸಮಾವೇಶದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು.

ಕಾಂಗ್ರೆಸ್ ವಿರುದ್ದ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ಬಿಜೆಪಿ ಪಕ್ಷ ಆಯೋಜಿಸಿದ್ದ ಸಮಾವೇಶದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು.

‘ಕಾಂಗ್ರೆಸ್ ಪಕ್ಷ ಹಾರಿ ಬಿಡುತ್ತಿರುವ ಸುಳ್ಳು ಭರವಸೆಯ ಬಲೂನ್ ಗಳನ್ನು ಕರ್ನಾಟಕದ ಜನತೆ ಚೂರುಚೂರು ಮಾಡಿದ್ದಾರೆ. ಈ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಭಯ ಶುರುವಾಗಿದೆ. ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದವರನ್ನು ಮತ್ತೆ ಕರೆತಂದು ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ’ ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಚಾರದ ಕುರಿತಂತೆ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ವಿರುದ್ದ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ! Read More
ರಾಜ್ಯದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಮೇ 8 ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸುದ್ಧಿಗೋಷ್ಠಿಯ ಮೂಲಕ ಪರೀಕ್ಷಾ ಫಲಿತಾಂಶ ಪ್ರಕಟಣೆ ಮಾಡಲಿದೆ. 11 ಗಂಟೆಯ ಬಳಿಕ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ತಿಳಿದುಬಂದಿದೆ.

ಮೇ 8 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ

: ರಾಜ್ಯದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಮೇ 8 ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸುದ್ಧಿಗೋಷ್ಠಿಯ ಮೂಲಕ ಪರೀಕ್ಷಾ ಫಲಿತಾಂಶ ಪ್ರಕಟಣೆ ಮಾಡಲಿದೆ. 11 ಗಂಟೆಯ ಬಳಿಕ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ತಿಳಿದುಬಂದಿದೆ.

ಮೇ 8 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ Read More
ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಮತ ಎಣಿಕೆ ನಡೆಯಲಿರುವ ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ ಮೇ 13 ರ ಬೆಳಗ್ಗೆ 6 ರಿಂದ ಮೇ14 ರ ಬೆಳಿಗ್ಗೆ 6 ಗಂಟೆಯವರೆಗೆ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ನಿಬಂಧನೆಗಳ ವಿವರ: ನಿಷೇಧಾಜ್ಞೆ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗೂಡುವಂತಿಲ್ಲ. ಮೆರವಣಿಗೆ, ಸಭೆ, ಸಮಾರಂಭ, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ.

ಮತ ಎಣಿಕೆ ಕೇಂದ್ರದ ಸುತ್ತಮುತ್ತ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ

ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಮತ ಎಣಿಕೆ ನಡೆಯಲಿರುವ, ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ ಮೇ 13  ರ ಬೆಳಗ್ಗೆ 6 ರಿಂದ ಮೇ 14 ರ ಬೆಳಿಗ್ಗೆ 6 ಗಂಟೆಯವರೆಗೆ, ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ನಿಬಂಧನೆಗಳ ವಿವರ: ನಿಷೇಧಾಜ್ಞೆ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗೂಡುವಂತಿಲ್ಲ. ಮೆರವಣಿಗೆ, ಸಭೆ, ಸಮಾರಂಭ, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ.

ಮತ ಎಣಿಕೆ ಕೇಂದ್ರದ ಸುತ್ತಮುತ್ತ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ Read More
ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ! ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..!

ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ!

ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..! Read More
ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ದಿನಾಂಕ ವಿಸ್ತರಣೆ ಶಿವಮೊಗ್ಗ, ಮೇ 5: 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ, ಭದ್ರಾ ಜಲಾಶಯದಿಂದ ಬಲ ಹಾಗೂ ಎಡದಂಡೆ ನಾಲೆಗಳಿಗೆ ಹರಿಸಲಾಗುತ್ತಿರುವ ನೀರಿನ ಹರಿವನ್ನು ಇನ್ನಷ್ಟು ದಿನಗಳ ವಿಸ್ತರಿಸಲಾಗಿದೆ. ಪ್ರಸ್ತುತ ಎಡದಂಡೆ ನಾಲೆಗೆ 01.01.2023 ರ ರಾತ್ರಿಯಿಂದ ಹಾಗೂ ಬಲದಂಡೆ ನಾಲೆಗೆ 03.01.2023 ರ ರಾತ್ರಿಯಿಂದ ನೀರನ್ನು ಹರಿಸಲಾಗುತ್ತಿದೆ. ಭದ್ರಾ ಅಚ್ಚುಕಟ್ಟು ಪ್ರದೇಶದ 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಹೆಚ್ಚುವರಿ ದಿನಗಳಿಗೆ ನೀರನ್ನು ಹರಿಸಲು ಸರ್ಕಾರದ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಭದ್ರಾ ಎಡದಂಡೆ ನಾಲೆಗೆ ಮೇ 12 ರವರೆಗೆ ಹಾಗೂ ಬಲದಂಡೆ ನಾಲೆಗೆ ಮೇ 18 ರವರೆಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿನ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ದಿನಾಂಕ ವಿಸ್ತರಣೆ

ಶಿವಮೊಗ್ಗ, ಮೇ 5: 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ, ಭದ್ರಾ ಜಲಾಶಯದಿಂದ ಬಲ ಹಾಗೂ ಎಡದಂಡೆ ನಾಲೆಗಳಿಗೆ ಹರಿಸಲಾಗುತ್ತಿರುವ ನೀರಿನ ಹರಿವನ್ನು ಇನ್ನಷ್ಟು ದಿನಗಳ ವಿಸ್ತರಿಸಲಾಗಿದೆ.

ಪ್ರಸ್ತುತ ಎಡದಂಡೆ ನಾಲೆಗೆ 01.01.2023 ರ ರಾತ್ರಿಯಿಂದ ಹಾಗೂ ಬಲದಂಡೆ ನಾಲೆಗೆ 03.01.2023 ರ ರಾತ್ರಿಯಿಂದ ನೀರನ್ನು ಹರಿಸಲಾಗುತ್ತಿದೆ.

ಭದ್ರಾ ಅಚ್ಚುಕಟ್ಟು ಪ್ರದೇಶದ 2022-23ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಹೆಚ್ಚುವರಿ ದಿನಗಳಿಗೆ ನೀರನ್ನು ಹರಿಸಲು ಸರ್ಕಾರದ ಅನುಮೋದನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಭದ್ರಾ ಎಡದಂಡೆ ನಾಲೆಗೆ ಮೇ 12 ರವರೆಗೆ  ಹಾಗೂ ಬಲದಂಡೆ ನಾಲೆಗೆ ಮೇ 18 ರವರೆಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿನ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ದಿನಾಂಕ ವಿಸ್ತರಣೆ Read More
ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ಸಚಿವ ಅಮಿತ್ ಶಾ ಅವರು ಶಿವಮೊಗ್ಗ ನಗರದಲ್ಲಿ ರೋಡ್ ಶೋ ನಡೆಸಿದ ಸಂದರ್ಭದಲ್ಲಿ, ಶಿವಪ್ಪ ನಾಯಕ ವೃತ್ತದ ಬಳಿ ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡಿರುವ ಕುರಿತು ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಗಳು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಮಾಡಿಕೊಂಡ ಎರಡು ಪ್ರತ್ಯೇಕ ಪ್ರಕರಣಗಳ ಕುರಿತಂತೆ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯು ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ 1986 ಅಡಿ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದೇ ರೀತಿ ಇನ್ನೊಂದು ಪ್ರಕರಣದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಮಕ್ಕಳೊಂದಿಗೆ ಚುನಾವಣಾ ಪ್ರಚಾರ ಮಾಡುತ್ತಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಲಿಸಲಾಗಿತ್ತು.

ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ : ಪ್ರಕರಣ ದಾಖಲು!

ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಿಸಲಾಗಿದೆ.

ಕೇಂದ್ರ ಸಚಿವ ಅಮಿತ್ ಶಾ ಅವರು ಶಿವಮೊಗ್ಗ ನಗರದಲ್ಲಿ ರೋಡ್ ಶೋ ನಡೆಸಿದ ಸಂದರ್ಭದಲ್ಲಿ, ಶಿವಪ್ಪ ನಾಯಕ ವೃತ್ತದ ಬಳಿ ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡಿರುವ ಕುರಿತು ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣಗಳು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಮಾಡಿಕೊಂಡ ಎರಡು ಪ್ರತ್ಯೇಕ ಪ್ರಕರಣಗಳ ಕುರಿತಂತೆ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯು ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ 1986 ಅಡಿ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದೇ ರೀತಿ ಇನ್ನೊಂದು ಪ್ರಕರಣದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಮಕ್ಕಳೊಂದಿಗೆ ಚುನಾವಣಾ ಪ್ರಚಾರ ಮಾಡುತ್ತಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಲಿಸಲಾಗಿತ್ತು.

ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ : ಪ್ರಕರಣ ದಾಖಲು! Read More
ಶಿವಮೊಗ್ಗ ನಗರದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ, ಆಟೋ ಚಾಲಕರಿಬ್ಬರು ತಮಗೆ ಸಿಕ್ಕಿದ್ದ ನಗದು ಹಾಗೂ ಮೊಬೈಲ್ ಪೋನ್ ನನ್ನು, ಪೊಲೀಸರ ಮೂಲಕ ಕಳೆದುಕೊಂಡವರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಇತರರಿಗೆ ಮಾದರಿಯಾಗಿದ್ದಾರೆ. ಇವರ ಪ್ರಾಮಾಣಿಕತೆ, ಉತ್ತಮ ನಡವಳಿಕೆ ಮೆಚ್ಚಿ ಪೊಲೀಸ್ ಇಲಾಖೆ ಹಾಗೂ ವಸ್ತುಗಳನ್ನು ಕಳೆದುಕೊಂಡಿದ್ದವರು ಸದರಿ ಆಟೋ ಚಾಲಕರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.

ಶಿವಮೊಗ್ಗ : ಆಟೋ ಚಾಲಕರಿಬ್ಬರ ಪ್ರಾಮಾಣಿಕತೆ!

ಶಿವಮೊಗ್ಗ ನಗರದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ, ಆಟೋ ಚಾಲಕರಿಬ್ಬರು ತಮಗೆ ಸಿಕ್ಕಿದ್ದ ನಗದು ಹಾಗೂ ಮೊಬೈಲ್ ಪೋನ್ ನನ್ನು, ಪೊಲೀಸರ ಮೂಲಕ ಕಳೆದುಕೊಂಡವರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಇತರರಿಗೆ ಮಾದರಿಯಾಗಿದ್ದಾರೆ.  

ಇವರ ಪ್ರಾಮಾಣಿಕತೆ, ಉತ್ತಮ ನಡವಳಿಕೆ ಮೆಚ್ಚಿ ಪೊಲೀಸ್ ಇಲಾಖೆ ಹಾಗೂ ವಸ್ತುಗಳನ್ನು ಕಳೆದುಕೊಂಡಿದ್ದವರು ಸದರಿ ಆಟೋ ಚಾಲಕರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.

ಶಿವಮೊಗ್ಗ : ಆಟೋ ಚಾಲಕರಿಬ್ಬರ ಪ್ರಾಮಾಣಿಕತೆ! Read More
ಸೊರಬ - ಕಾರು ಡಿಕ್ಕಿ : ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರ ದಾರುಣ ಸಾವು!

ಸೊರಬ : ಕಾರು – ಬೈಕ್ ನಡುವೆ ಅಪಘಾತ ; ಸಹೋದರರಿಬ್ಬರ ದಾರುಣ ಸಾವು!

ಸೊರಬ, ಮೇ 3: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ಹಾಗೂ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಉಳವಿ ಸಮೀಪ ಬುಧವಾರ ನಡೆದಿದೆ.

ಸೊರಬ : ಕಾರು – ಬೈಕ್ ನಡುವೆ ಅಪಘಾತ ; ಸಹೋದರರಿಬ್ಬರ ದಾರುಣ ಸಾವು! Read More