ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ

ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ Read More
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭದ್ರತಾ ವ್ಯವಸ್ಥೆ : ದೆಹಲಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಸಮಾಲೋಚನೆ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭದ್ರತಾ ವ್ಯವಸ್ಥೆ : ದೆಹಲಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಸಮಾಲೋಚನೆ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ವಿಮಾನ ಹಾರಾಟ ಆರಂಭವಾಗುವುದು ಬಹುತೇಕ ನಿಶ್ಚಿತವಾಗಿದೆ. ಬೆಂಗಳೂರು – ಶಿವಮೊಗ್ಗ ನಡುವೆ ವಿಮಾನ ಸಂಚಾರಕ್ಕೆ ಸಂಬಂಧಿಸಿದಂತೆ, ಈಗಾಗಲೇ ಇಂಡಿಗೋ ಸಂಸ್ಥೆ ಟಿಕೆಟ್ ಬುಕ್ಕಿಂಗ್ ಕೂಡ ಆರಂಭಿಸಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭದ್ರತಾ ವ್ಯವಸ್ಥೆ : ದೆಹಲಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಸಮಾಲೋಚನೆ Read More
ಮಲೆನಾಡಿನಲ್ಲಿ ಕಡಿಮೆಯಾದ ವರ್ಷಧಾರೆಯ ಅಬ್ಬರ ಲಿಂಗನಮಕ್ಕಿ ತುಂಗಾ, ಭದ್ರಾ ಡ್ಯಾಂಗಳ ಒಳಹರಿವಿನಲ್ಲಿಇಳಿಕೆ

ತಗ್ಗಿದ ಮಳೆ : ಲಿಂಗನಮಕ್ಕಿ, ತುಂಗಾ, ಭದ್ರಾ ಡ್ಯಾಂಗಳ ಒಳಹರಿವಿನಲ್ಲಿ ಇಳಿಕೆ

ಕಳೆದೆರೆಡು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ವರ್ಷಧಾರೆಯ ಅಬ್ಬರ ಕಡಿಮೆಯಾಗಿದೆ. ನದಿಗಳ ನೀರಿನ ಹರಿವಿನಲ್ಲಿ ಇಳಿಕೆಯಾಗಿದೆ. ಇದರಿಂದ ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಸಾಕಷ್ಟು ಇಳಿಕೆ ಕಂಡುಬಂದಿದೆ.

ಶುಕ್ರವಾರದ ಬೆಳಿಗ್ಗೆಯ ಮಾಹಿತಿಯಂತೆ ರಾಜ್ಯದ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂ ಒಳಹರಿವು 25,631 ಕ್ಯೂಸೆಕ್ ಗೆ ಇಳಿಕೆಯಾಗಿದೆ. 891 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಡ್ಯಾಂ ನೀರಿನ ಮಟ್ಟ 1785.6 (1819) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 1798.4 ಅಡಿಯಿತ್ತು.

ತಗ್ಗಿದ ಮಳೆ : ಲಿಂಗನಮಕ್ಕಿ, ತುಂಗಾ, ಭದ್ರಾ ಡ್ಯಾಂಗಳ ಒಳಹರಿವಿನಲ್ಲಿ ಇಳಿಕೆ Read More
ಶಿವಮೊಗ್ಗ : ಆಗಸ್ಟ್ 31 ರಿಂದ ವಿಮಾನ ಹಾರಾಟ ಆರಂಭ ಉಡಾನ್ ಯೋಜನೆಯಡಿ ತಿರುಪತಿ ಗೋವಾ ಹೈದರಾಬಾದ್ ಗೂ ವಿಮಾನ : ಸಚಿವ ಎಂ.ಬಿ.ಪಾಟೀಲ್

ಶಿವಮೊಗ್ಗ : ಆಗಸ್ಟ್ 31 ರಿಂದ ವಿಮಾನ ಹಾರಾಟ ಆರಂಭ

ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ‌ ಕಾರ್ಯಾಚರಣೆ ಆರಂಭಿಸಲಿದ್ದು ಅಂದು‌ ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ.

ಈ ಮುಂಚೆ ಆಗಸ್ಟ್ 11ರಿಂದ ಆರಂಭವಾಗಬೇಕಿತ್ತು. ತಾಂತ್ರಿಕ ಕಾರಣಗಳಿಂದ 31ಕ್ಕೆ ಹೋಗಿದ್ದು ಇಂಡಿಗೊ‌ ಏರ್ ಲೈನ್ಸ್ ತನ್ನ ಬುಕ್ಕಿಂಗ್ ಅನ್ನು ಆರಂಭಿಸಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ಶಿವಮೊಗ್ಗ : ಆಗಸ್ಟ್ 31 ರಿಂದ ವಿಮಾನ ಹಾರಾಟ ಆರಂಭ Read More
ಹಿಂದಿನ ವರ್ಷಗಳ ಅನುಭವದಿಂದ ಜೀವಹಾನಿ ತಪ್ಪಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಿಂದಿನ ವರ್ಷಗಳ ಅನುಭವದಿಂದ ಜೀವಹಾನಿ ತಪ್ಪಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜು. 26: ಹಿಂದಿನ ಪ್ರವಾಹದ  ಅನುಭವದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಜೀವಹಾನಿ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. 

ಹಿಂದಿನ ವರ್ಷಗಳ ಅನುಭವದಿಂದ ಜೀವಹಾನಿ ತಪ್ಪಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ Read More

ಜೆಸಿಬಿ ಮೂಲಕ ಎಟಿಎಂ ಯಂತ್ರ ಕಳವಿಗೆ ಯತ್ನಿಸಿದ ಐನಾತಿ ಕಳ್ಳ : ಶಿವಮೊಗ್ಗದಲ್ಲೊಂದು ಸಿನಿಮೀಯ ಘಟನೆ!

ಐನಾತಿ ಕಳ್ಳನೋರ್ವ, ಜೆಸಿಬಿ ಮೂಲಕ ಎಟಿಎಂ ಯಂತ್ರವನ್ನೇ ಕದ್ದಯ್ಯೊಲು ವಿಫಲ ಯತ್ನ ನಡೆಸಿದ ಸಿನಿಮೀಯ ಶೈಲಿಯ ಘಟನೆಯೊಂದು, ಶಿವಮೊಗ್ಗ ನಗರದ ವಿನೋಬನಗರದಲ್ಲಿ ತಡರಾತ್ರಿ ನಡೆದಿದೆ.
100 ಅಡಿ ರಸ್ತೆ ಶಿವಾಲಯ ಎದುರಿನ ಪೂರ್ಯಾನಾಯ್ಕ್ ಪೆಟ್ರೋಲ್ ಬಂಕ್ ಸಮೀಪದ ಕಟ್ಟಡವೊಂದರಲ್ಲಿರುವ, ಆಕ್ಸೆಸ್ ಬ್ಯಾಂಕ್ ಗೆ ಸೇರಿದ ಎಟಿಎಂ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ಜೆಸಿಬಿ ಮೂಲಕ ಎಟಿಎಂ ಯಂತ್ರ ಕಳವಿಗೆ ಯತ್ನಿಸಿದ ಐನಾತಿ ಕಳ್ಳ : ಶಿವಮೊಗ್ಗದಲ್ಲೊಂದು ಸಿನಿಮೀಯ ಘಟನೆ! Read More
‘ಗೃಹ ಲಕ್ಷ್ಮೀ’ ಯೋಜನೆಗೆ ಆನ್’ಲೈನ್ ನಲ್ಲಿ ಅರ್ಜಿ ಹಾಕಲು ಹಣ ಪಡೆಯುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗದ ಸೇವಾ ಸಿಂಧು ಕೇಂದ್ರವೊಂದರ ಬಾಗಿಲು ಮುಚ್ಚಿಸಲಾಗಿದೆ. ಜೊತೆಗೆ ಸದರಿ ಸೇವಾ ಕೇಂದ್ರದ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಘಟನೆ ನಡೆದಿದೆ.

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಹಣ ವಸೂಲಿ : ಶಿವಮೊಗ್ಗದಲ್ಲಿ ಸೇವಾ ಸಿಂಧು ಕೇಂದ್ರದ ಬಾಗಿಲು ಬಂದ್ – ಪೊಲೀಸರಿಗೆ ದೂರು!

‘ಗೃಹ ಲಕ್ಷ್ಮೀ’ ಯೋಜನೆಗೆ ಆನ್’ಲೈನ್ ನಲ್ಲಿ ಅರ್ಜಿ ಹಾಕಲು ಹಣ ಪಡೆಯುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗದ ಸೇವಾ ಸಿಂಧು ಕೇಂದ್ರವೊಂದರ ಬಾಗಿಲು ಮುಚ್ಚಿಸಲಾಗಿದೆ. ಜೊತೆಗೆ ಸದರಿ ಸೇವಾ ಕೇಂದ್ರದ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಘಟನೆ ನಡೆದಿದೆ.

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಹಣ ವಸೂಲಿ : ಶಿವಮೊಗ್ಗದಲ್ಲಿ ಸೇವಾ ಸಿಂಧು ಕೇಂದ್ರದ ಬಾಗಿಲು ಬಂದ್ – ಪೊಲೀಸರಿಗೆ ದೂರು! Read More
1.50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ಕಚೇರಿ ಶಿರಸ್ತೇದಾರ್!

1.50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ಕಚೇರಿ ಶಿರಸ್ತೇದಾರ್!

ಕಚೇರಿಯಲ್ಲಿಯೇ ವ್ಯಕ್ತಿಯೋರ್ವರಿಂದ 1.50 ಲಕ್ಷ ರೂ. ಲಂಚ ಪಡೆಯುತ್ತಿದ್ದ ಅಧಿಕಾರಿಯೋರ್ವರನ್ನು, ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ಶಿವಮೊಗ್ಗ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ನಡೆದಿದೆ.

ತಹಶೀಲ್ದಾರ್ ಕಚೇರಿಯಲ್ಲಿ ಹಕ್ಕು ದಾಖಲೆ ವಿಭಾಗದ ಶಿರಸ್ತೇದಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಅರುಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ ಎಂದು ಗುರುತಿಸಲಾಗಿದೆ. ಇವರು ಕಂದಾಯ ನೌಕರರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಣೆ ಮಾಡುತ್ತಿದ್ದರು.

1.50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ಕಚೇರಿ ಶಿರಸ್ತೇದಾರ್! Read More
ತುಂಗಾ ಡ್ಯಾಂನಿಂದ 70 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ : ಶಿವಮೊಗ್ಗದಲ್ಲಿ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ತುಂಗಾ ನದಿ!

ತುಂಗಾ ಡ್ಯಾಂನಿಂದ 67 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ : ಶಿವಮೊಗ್ಗದಲ್ಲಿ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ತುಂಗಾ ನದಿ!

ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರೆದಿರುವುದರಿಂದ, ತುಂಗಾ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡುಬರಲಾರಂಭಿಸಿದೆ!
ಸೋಮವಾರ ಮಧ್ಯಾಹ್ನದ ಮಾಹಿತಿ ಅನುಸಾರ, ಡ್ಯಾಂಗೆ ಸುಮಾರು 70 ಸಾವಿರ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ ಒಳ ಹರಿವಿನಷ್ಟೆ ನೀರನ್ನು ಡ್ಯಾಂನಿಂದ ಹೊರ ಬಿಡಲಾಗುತ್ತಿದೆ.

ತುಂಗಾ ಡ್ಯಾಂನಿಂದ 67 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ : ಶಿವಮೊಗ್ಗದಲ್ಲಿ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ತುಂಗಾ ನದಿ! Read More
ಒಂದೇ ದಿನದಲ್ಲಿ ಲಿಂಗನಮಕ್ಕಿಗೆ 5, ಭದ್ರಾ ಡ್ಯಾಂಗೆ 4 ಅಡಿ ನೀರು : ತುಂಗಾ ಡ್ಯಾಂನಿಂದ 57 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ!

ಒಂದೇ ದಿನದಲ್ಲಿ ಲಿಂಗನಮಕ್ಕಿಗೆ 5, ಭದ್ರಾ ಡ್ಯಾಂಗೆ 4 ಅಡಿ ನೀರು : ತುಂಗಾ ಡ್ಯಾಂನಿಂದ 57 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ!

ಮಲೆನಾಡಿನಲ್ಲಿ ವರ್ಷಧಾರೆಯ ಆರ್ಭಟ ಮುಂದುವರಿದಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಮೈದುಂಬಿ ಹರಿಯಲಾರಂಭಿಸಿವೆ. ಇದರಿಂದ ಪ್ರಮುಖ ಜಲಾಶಯಗಳ ನೀರಿನ ಸಂಗ್ರಹದಲ್ಲಿ, ಗಣನೀಯ ಪ್ರಮಾಣದ ಹೆಚ್ಚಳ ಕಂಡುಬರಲಾರಂಭಿಸಿದೆ.

ಲಿಂಗನಮಕ್ಕಿ ಡ್ಯಾಂ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಬೀಳುತ್ತಿರುವ ಭಾರೀ ವರ್ಷಧಾರೆಯಿಂದ, ಡ್ಯಾಂಗೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 5 ಅಡಿ ನೀರು ಸಂಗ್ರಹವಾಗಿದೆ.

ಒಂದೇ ದಿನದಲ್ಲಿ ಲಿಂಗನಮಕ್ಕಿಗೆ 5, ಭದ್ರಾ ಡ್ಯಾಂಗೆ 4 ಅಡಿ ನೀರು : ತುಂಗಾ ಡ್ಯಾಂನಿಂದ 57 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ! Read More