ಪ್ರಮಾಣ ವಚನ ಸ್ವೀಕಾರ : ಕಾಂಗ್ರೆಸ್ ಸರ್ಕಾರದ ಅಧಿಕಾರ!
ಬೆಂಗಳೂರು, ಮೇ 20: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ 8 ಶಾಸಕರು ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ರಾಜ್ಯದ ವಿವಿಧೆಡೆಯಿಂದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸಮಾರಂಭಕ್ಕೆ ಸಾಕ್ಷಿಯಾದರು.
ಪ್ರಮಾಣ ವಚನ ಸ್ವೀಕಾರ : ಕಾಂಗ್ರೆಸ್ ಸರ್ಕಾರದ ಅಧಿಕಾರ! Read More
