ಎಸ್ಎಸ್ಎಲ್ಸಿ ರಿಸಲ್ಟ್ : 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು!
ಬೆಂಗಳೂರು, ಮೇ 8: 2022-23 ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಪ್ರಸ್ತುತ ವರ್ಷ ಶೇ. 83.89 ರಷ್ಟು ಫಲಿತಾಂಶ ಬಂದಿದೆ. ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಶೇ. 83.89 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದು, ಶೇ. 80.08 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ 8,35,102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 7,00,619 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ನಾಲ್ವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಭೂಮಿಕಾ ಪೈ, ವಿಜಯಪುರ ಜಿಲ್ಲೆಯ ಭೀಮನಗೌಡ ಪಾಟೀಲ್, ಬೆಳಗಾವಿ ಜಿಲ್ಲೆಯ ಅನುಪಮಾ ಶ್ರೀಶೈಲ್ ಹಿರೆಹೊಳಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಯಶಸ್ ಗೌಡ ಈ ಸಾಧನೆ ಮಾಡಿದವರಾಗಿದ್ದಾರೆ.
ಇಡೀ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಮಂಡ್ಯ 2 ನೇ ಸ್ಥಾನ, ಹಾಸನ 3 ನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆಯು ಕೊನೆ ಸ್ಥಾನ ಪಡೆದುಕೊಂಡಿದೆ. ಶಿವಮೊಗ್ಗ 29 ನೇ ಸ್ಥಾನದಲ್ಲಿದೆ.
ಎಸ್ಎಸ್ಎಲ್ಸಿ ರಿಸಲ್ಟ್ : 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು! Read More
