ಬಿ.ಎಸ್.ಯಡಿಯೂರಪ್ಪ – ಎಸ್. ಬಂಗಾರಪ್ಪ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ 2008 ರ ಚುನಾವಣೆ!

ಬಿ.ಎಸ್.ಯಡಿಯೂರಪ್ಪ – ಎಸ್. ಬಂಗಾರಪ್ಪ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ 2008 ರ ಚುನಾವಣೆ!

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ದಿವಂಗತ ಎಸ್.ಬಂಗಾರಪ್ಪ ಎದುರಾಳಿಗಳಾಗಿ ಕಣಕ್ಕಿಳಿದಿದ್ದ 2008 ರ ವಿಧಾನಸಭೆ ಚುನಾವಣೆಯು, ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಅಕ್ಷರಶಃ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿತ್ತು..!

ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದ ಯಡಿಯೂರಪ್ಪ ಎದುರು, ಅಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಬಂಗಾರಪ್ಪ ಕಣಕ್ಕಿಳಿಯುವ ಘೋಷಣೆ ಮಾಡಿದ್ದರು. ಇದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು!

ಬಿ.ಎಸ್.ಯಡಿಯೂರಪ್ಪ – ಎಸ್. ಬಂಗಾರಪ್ಪ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ 2008 ರ ಚುನಾವಣೆ! Read More
ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಘೋಷಣೆ ನಂತರ, ಕಾಂಗ್ರೆಸ್ ನಲ್ಲಿ ಭುಗಿಲೆದ್ದಿರುವ ಭಿನ್ನಮತ ಸದ್ಯಕ್ಕೆ ಶಮನಗೊಳ್ಳುವ ಲಕ್ಷಣಗಳು ಗೋಚರವಾಗುತ್ತಿಲ್ಲ. ದಿಢೀರ್ ವಿದ್ಯಮಾನವೊಂದರಲ್ಲಿ, ಟಿಕೆಟ್ ಸಿಗದೆ ಮುನಿಸಿಕೊಂಡಿದ್ದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು ಕಾಂಗ್ರೆಸ್ ತ್ಯಜಿಸಿ, ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿಬರಲಾರಂಭಿಸಿದೆ!

ಶಿವಮೊಗ್ಗ ನಗರ ಕ್ಷೇತ್ರ ಕಾಂಗ್ರೆಸ್ ಭಿನ್ನಮತ : ಮಾಜಿ ಶಾಸಕರ ಬಂಡಾಯ – ಜೆಡಿಎಸ್ ನಿಂದ ಕಣಕ್ಕೆ?!

ಶಿವಮೊಗ್ಗ, ಎ. 17: ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಘೋಷಣೆ ನಂತರ, ಕಾಂಗ್ರೆಸ್ ನಲ್ಲಿ ಭುಗಿಲೆದ್ದಿರುವ ಭಿನ್ನಮತ ಸದ್ಯಕ್ಕೆ ಶಮನಗೊಳ್ಳುವ ಲಕ್ಷಣಗಳು ಗೋಚರವಾಗುತ್ತಿಲ್ಲ. ದಿಢೀರ್ ವಿದ್ಯಮಾನವೊಂದರಲ್ಲಿ, ಟಿಕೆಟ್ ಸಿಗದೆ ಮುನಿಸಿಕೊಂಡಿದ್ದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು ಕಾಂಗ್ರೆಸ್ ತ್ಯಜಿಸಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ!

ಶಿವಮೊಗ್ಗ ನಗರ ಕ್ಷೇತ್ರ ಕಾಂಗ್ರೆಸ್ ಭಿನ್ನಮತ : ಮಾಜಿ ಶಾಸಕರ ಬಂಡಾಯ – ಜೆಡಿಎಸ್ ನಿಂದ ಕಣಕ್ಕೆ?! Read More
ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ, 10 ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟಿಸಿದೆ. ಆದರೆ ಟಿ -20 ಕ್ರಿಕೆಟ್ ಮ್ಯಾಚ್ ನಷ್ಟೆ ಕುತೂಹಲ ಕೆರಳಿಸಿರುವ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಇದರಿಂದ ಕುತೂಹಲ ಮುಂದುವರಿಯುವಂತಾಗಿದೆ! ಪ್ರಸ್ತುತ ಶಿವಮೊಗ್ಗ ನಗರ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ, ಬಿಜೆಪಿ ಪಕ್ಷ ಅಭ್ಯರ್ಥಿಗಳ ಹೆಸರು ಘೋಷಣೆ ಬಾಕಿ ಉಳಿಸಿಕೊಂಡಿದೆ. ಉಳಿದ ಎಲ್ಲ ಕ್ಷೇತ್ರಗಳಿಗೆ ಕಣಕ್ಕಿಳಿಯುವ ಉಮೇದುವಾರರ ಹೆಸರು ಪ್ರಕಟಿಸಿದೆ.

ಮೂರನೇ ಪಟ್ಟಿಯಲ್ಲಿಯೂ ಪ್ರಕಟವಾಗದ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಸರು!

ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ, 10 ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟಿಸಿದೆ. ಆದರೆ ಟಿ -20 ಕ್ರಿಕೆಟ್ ಮ್ಯಾಚ್ ನಷ್ಟೆ ಕುತೂಹಲ ಕೆರಳಿಸಿರುವ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಇದರಿಂದ ಕುತೂಹಲ ಮುಂದುವರಿಯುವಂತಾಗಿದೆ!

ಪ್ರಸ್ತುತ ಶಿವಮೊಗ್ಗ ನಗರ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ, ಬಿಜೆಪಿ ಪಕ್ಷ ಅಭ್ಯರ್ಥಿಗಳ ಹೆಸರು ಘೋಷಣೆ ಬಾಕಿ ಉಳಿಸಿಕೊಂಡಿದೆ. ಉಳಿದ ಎಲ್ಲ ಕ್ಷೇತ್ರಗಳಿಗೆ ಕಣಕ್ಕಿಳಿಯುವ ಉಮೇದುವಾರರ ಹೆಸರು ಪ್ರಕಟಿಸಿದೆ.

ಮೂರನೇ ಪಟ್ಟಿಯಲ್ಲಿಯೂ ಪ್ರಕಟವಾಗದ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಸರು! Read More
ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣ ಕಣ ರಂಗೇರಲಾರಂಭಿಸಿದೆ. ಈಗಾಗಲೇ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ನಾಲ್ಕು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಪಕ್ಷದ, ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಾಕಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ!

ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಕ್ಷೇತ್ರ : ಕುತೂಹಲ ಮೂಡಿಸಿದ ‘ಕೈ’ ಅಭ್ಯರ್ಥಿಗಳ ಆಯ್ಕೆ!

ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣ ಕಣ ರಂಗೇರಲಾರಂಭಿಸಿದೆ. ಈಗಾಗಲೇ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ನಾಲ್ಕು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಪಕ್ಷದ, ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಾಕಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ!

ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಕ್ಷೇತ್ರ : ಕುತೂಹಲ ಮೂಡಿಸಿದ ‘ಕೈ’ ಅಭ್ಯರ್ಥಿಗಳ ಆಯ್ಕೆ! Read More
‘ತಾವು ಈಗಲೂ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೆನೆ. ಯಾವ ಪಕ್ಷದಿಂದ ಎಂಬುವುದು ಇಷ್ಟರಲ್ಲಿಯೇ ಸ್ಪಷ್ಟವಾಗಲಿದೆ’ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ತಿಳಿಸಿದ್ದಾರೆ.

‘ಶಿವಮೊಗ್ಗ ನಗರ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೆನೆ : ಪಕ್ಷ ಯಾವುದೆಂಬುವುದು ಇಷ್ಟರಲ್ಲಿಯೇ ಗೊತ್ತಾಗುತ್ತದೆ’ – ಆಯನೂರು ಮಂಜುನಾಥ್

ಕೆ.ಎಸ್.ಈಶ್ವರಪ್ಪಅವರ ವಿರುದ್ದ ತಮಗೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ಆದರೆ ಅವರ ಸ್ಪರ್ಧೆಗೆ ತಮ್ಮ ಆಕ್ಷೇಪವಿತ್ತು. ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಿರುವುದರಿಂದ, ತಮ್ಮ ನಿಲುವಿನಲ್ಲಿ ಯಾವುದೇ ವ್ಯತ್ಯಾಸವಿಲ್ಲ. ತಾವು ಈಗಲೂ ಶಿವಮೊಗ್ಗ ನಗರ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೆನೆ. ಇಷ್ಟರಲ್ಲಿಯೇ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ತಿಳಿಸಿದ್ದಾರೆ.

‘ಶಿವಮೊಗ್ಗ ನಗರ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೆನೆ : ಪಕ್ಷ ಯಾವುದೆಂಬುವುದು ಇಷ್ಟರಲ್ಲಿಯೇ ಗೊತ್ತಾಗುತ್ತದೆ’ – ಆಯನೂರು ಮಂಜುನಾಥ್ Read More
ಕೊನೆಗೂ ವಿಧಾನಸಭೆ ಚುನಾವಣಾ ಅಖಾಡಕ್ಕೆ ಬಿಜೆಪಿ ಪಕ್ಷ ತನ್ನ ಹುರಿಯಾಳುಗಳ ಮೊದಲ ಹಂತದ ಪಟ್ಟಿ ಪ್ರಕಟಿಸಿದೆ. ಮಂಗಳವಾರ ರಾತ್ರಿ ನವದೆಹಲಿಯಲ್ಲಿ ಬಿಡುಗಡೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ, ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ 6 ಕ್ಷೇತ್ರಗಳಲ್ಲಿ ತನ್ನ ಹುರಿಯಾಳುಗಳು ಹೆಸರು ಪ್ರಕಟಿಸಿದೆ. ನಿರೀಕ್ಷಿಸಿದಂತೆ ನಾಲ್ವರು ಹಾಲಿ ಶಾಸಕರಿಗೆ ಮತ್ತೆ ಸ್ಪರ್ಧೆಗೆ ಅವಕಾಶ ನೀಡಿದೆ. ಸಾಕಷ್ಟು ಕುತೂಹಲ ಮೂಡಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಿಸಿಲ್ಲ.

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕೊನೆಗೂ ವಿಧಾನಸಭೆ ಚುನಾವಣಾ ಅಖಾಡಕ್ಕೆ ಬಿಜೆಪಿ ಪಕ್ಷ ತನ್ನ ಹುರಿಯಾಳುಗಳ ಮೊದಲ ಹಂತದ ಪಟ್ಟಿ ಪ್ರಕಟಿಸಿದೆ. ಮಂಗಳವಾರ ರಾತ್ರಿ ನವದೆಹಲಿಯಲ್ಲಿ ಬಿಡುಗಡೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ, ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ 6 ಕ್ಷೇತ್ರಗಳಲ್ಲಿ ತನ್ನ ಹುರಿಯಾಳುಗಳು ಹೆಸರು ಪ್ರಕಟಿಸಿದೆ. ನಿರೀಕ್ಷಿಸಿದಂತೆ ನಾಲ್ವರು ಹಾಲಿ ಶಾಸಕರಿಗೆ ಮತ್ತೆ ಸ್ಪರ್ಧೆಗೆ ಅವಕಾಶ ನೀಡಿದೆ. ಸಾಕಷ್ಟು ಕುತೂಹಲ ಮೂಡಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಿಸಿಲ್ಲ.

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ Read More
ಪ್ರಸ್ತುತ ವಿಧಾನಸಭೆ ಚುನಾವಣೆ ವೇಳೆ, ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ ಹೈಕಮಾಂಡ್ ತಳೆದಿರುವ ಬಿಗಿ ನಿಲುವಿನ ಎಫೆಕ್ಟ್ ನಿಂದ, ಬಿಜೆಪಿ ಹಿರಿಯ ನಾಯಕರು ಚುನಾವಣಾ ‘ತ್ಯಾಗ’ಕ್ಕೆ ವೇದಿಕೆ ಸಿದ್ಧವಾಗಲಾರಂಭಿಸಿದೆ! ಹೌದು. ಬಿಜೆಪಿ ಪಕ್ಷದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ದಿಢೀರ್ ಆಗಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವುದು, ಬಿಜೆಪಿ ಹೈಕಮಾಂಡ್ ಖಡಕ್ ನಿಲುವಿನ ಸ್ಪಷ್ಟ ಮುನ್ನುಡಿ ಎಂದೇ ಹೇಳಲಾಗುತ್ತಿದೆ!

ಬಿಜೆಪಿ ಹೈಕಮಾಂಡ್ ಖಡಕ್ ನಿಲುವು ಸಮ್ಮತಿಸಿ, ‘ಚುನಾವಣಾ ನಿವೃತ್ತಿ’ ಘೋಷಿಸಿದರೇ ಕೆ.ಎಸ್.ಈಶ್ವರಪ್ಪ?

ಬಿಜೆಪಿ ಪಕ್ಷದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ದಿಢೀರ್ ಆಗಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವುದು, ಕಮಲ ಪಾಳೇಯದಲ್ಲಿ ಸಂಚಲನ ಮೂಡಿಸಿದೆ. ಜೊತೆಗೆ ಹಲವು ರೀತಿಯ ಚರ್ಚೆಗೆಡೆ  ಮಾಡಿಕೊಟ್ಟಿದೆ!

ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಕಲ ತಯಾರಿಯನ್ನು 74 ರ ವಯೋಮಾನದ ಕೆ.ಎಸ್.ಈಶ್ವರಪ್ಪ ಅವರು ನಡೆಸಿಕೊಂಡು ಬಂದಿದ್ದರು.

ಬಿಜೆಪಿ ಹೈಕಮಾಂಡ್ ಖಡಕ್ ನಿಲುವು ಸಮ್ಮತಿಸಿ, ‘ಚುನಾವಣಾ ನಿವೃತ್ತಿ’ ಘೋಷಿಸಿದರೇ ಕೆ.ಎಸ್.ಈಶ್ವರಪ್ಪ? Read More
ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಶಿವಮೊಗ್ಗ ನಗರದಲ್ಲಿ, ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೋಟೆ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ. ಗಾಂಧಿ ಬಜಾರ್ ನ ಎಲೆ ರೇವಣ್ಣನಕೇರಿ ರಸ್ತೆಯಲ್ಲಿ ಘಟನೆ ನಡೆದಿದೆ. 5.83 ಕೋಟಿ ರೂ. ಮೌಲ್ಯದ 9 ಕೆ.ಜಿ. 565 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಪೊಲೀಸರು!

ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಶಿವಮೊಗ್ಗ ನಗರದಲ್ಲಿ, ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೋಟೆ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ.

ಗಾಂಧಿ ಬಜಾರ್ ನ ಎಲೆ ರೇವಣ್ಣನಕೇರಿ ರಸ್ತೆಯಲ್ಲಿ ಘಟನೆ ನಡೆದಿದೆ. 5.83 ಕೋಟಿ ರೂ. ಮೌಲ್ಯದ 9 ಕೆ.ಜಿ. 565 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಪೊಲೀಸರು! Read More
ಆದರೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ರಾಜ್ಯ ನಾಯಕರ ನಡುವೆ ಒಮ್ಮತದ ಅಭಿಪ್ರಾಯ ಏರ್ಪಡದ ಹಿನ್ನೆಲೆಯಲ್ಲಿ, ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದೆ ಎಂಬ ಮಾತುಗಳು ಕೇಳಿಬರಲಾರಂಭಿಸಿದೆ. ಯಾವಾಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂಬುವುದು ಪಕ್ಷದ ಮುಖಂಡರಿಗೂ ಸ್ಪಷ್ಟತೆಯಿಲ್ಲದಂತಾಗಿದೆ! ಪಕ್ಷದ ಉನ್ನತ ಮೂಲಗಳ ಮಾಹಿತಿ ಅನುಸಾರ ಮಂಗಳವಾರ ರಾತ್ರಿ ಅಥವಾ ಬುಧವಾರ ಬೆಳಿಗ್ಗೆ ಬಿಜೆಪಿ ಪ್ರಥಮ ಹಂತದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಸುಮಾರು 150 ಕ್ಕೂ ಹೆಚ್ಚು ಕ್ಷೇತ್ರಗಳ ಹುರಿಯಾಳುಗಳ ಹೆಸರು ಅಂತ್ಯಗೊಂಡಿದೆ ಎಂದು ಹೇಳಲಾಗುತ್ತಿದೆ.

ಮೋದಿ – ಅಮಿತ್ ಶಾ ಬಿಗಿ ನಿಲುವು : ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದಾರೆಯೇ ಅಚ್ಚರಿಯ ಅಭ್ಯರ್ಥಿಗಳು?

ಬಿಜೆಪಿ ವರಿಷ್ಠರು, ಅದರಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಗಿ ನಿಲುವು ತಳೆದಿದ್ದಾರೆ. ರಾಜ್ಯ ನಾಯಕರ ಯಾವುದೇ ಲಾಬಿ, ಒತ್ತಡ ತಂತ್ರಕ್ಕೆ ಮಣೆ ಹಾಕುತ್ತಿಲ್ಲ. ಸ್ಪರ್ಧಾಕಾಂಕ್ಷಿಗಳ ಕುರಿತಂತೆ ಬಂದಿರುವ ಸಮೀಕ್ಷಾ ವರದಿಗಳು, ಗೆಲ್ಲುವ ಸಾಧ್ಯತೆ, ವಿವಿಧ ಮೂಲಗಳಿಂದ ಸಂಗ್ರಹಿಸಿದ ವರದಿಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆಗೆ ಒತ್ತು ನೀಡಿದ್ದಾರೆ ಎನ್ನಲಾಗಿದೆ.

ಮೋದಿ – ಅಮಿತ್ ಶಾ ಬಿಗಿ ನಿಲುವು : ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದಾರೆಯೇ ಅಚ್ಚರಿಯ ಅಭ್ಯರ್ಥಿಗಳು? Read More
‘ಜಂಗೀ ಕುಸ್ತಿಗೆ ಅಖಾಡ ರೆಡಿಯಾಗಿದೆ… ಆದರೆ ಪೈಲ್ವಾನರುಗಳೇ ಸಿದ್ಧವಾಗಿಲ್ಲ...’ ಇದು, ಶಿವವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸದ್ಯದ ಚುನಾವಣಾ ರಾಜಕಾರಣದ ಚಿತ್ರಣ…! ಹೌದು. ವಿಧಾನಸಭೆ ಚುನಾವಣೆ ಘೋಷಣೆಯಾಗಿ ಹಲವೇ ದಿನಗಳೇ ಕಳೆದಿದೆ. ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಆದರೆ ಇಲ್ಲಿಯವರೆಗೂ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು ಯಾರೆಂಬುವುದು ಖಚಿತವಾಗಿಲ್ಲ. ಯಾವ ಪಕ್ಷದಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬುವುದು ಸಂಪೂರ್ಣ ನಿಗೂಢವಾಗಿ ಪರಿಣಮಿಸಿದೆ. ಇದರಿಂದ ಅಭ್ಯರ್ಥಿಗಳ ಆಯ್ಕೆ ಚರ್ಚೆಗಳಿಗೆ ತೆರೆ ಬಿದ್ದಿಲ್ಲ.

ಶಿವಮೊಗ ನಗರ ಕ್ಷೇತ್ರ : ಮೂರು ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ!

‘ಜಂಗೀ ಕುಸ್ತಿಗೆ ಅಖಾಡ ರೆಡಿಯಾಗಿದೆ… ಆದರೆ ಪೈಲ್ವಾನರುಗಳೇ ಸಿದ್ಧವಾಗಿಲ್ಲ…’ ಇದು, ಶಿವವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸದ್ಯದ ಚುನಾವಣಾ ರಾಜಕಾರಣದ ಚಿತ್ರಣ…!

ಹೌದು. ವಿಧಾನಸಭೆ ಚುನಾವಣೆ ಘೋಷಣೆಯಾಗಿ ಹಲವೇ ದಿನಗಳೇ ಕಳೆದಿದೆ. ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಆದರೆ ಇಲ್ಲಿಯವರೆಗೂ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು ಯಾರೆಂಬುವುದು ಖಚಿತವಾಗಿಲ್ಲ.

ಶಿವಮೊಗ ನಗರ ಕ್ಷೇತ್ರ : ಮೂರು ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ! Read More