ಶಿವಮೊಗ್ಗ ಗ್ರಾಮಾಂತರ : ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯನಾಯ್ಕ್’ಗೆ ಒಲಿದ ವಿಜಯದ ಮಾಲೆ!
ಶಿವಮೊಗ್ಗ, ಮೇ 13: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಜಿದ್ಧಾಜಿದ್ದಿನ ಹಣಾಹಣಿ ಏರ್ಪಟ್ಟಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ, ಕೊನೆಗೂ ಜೆಡಿಎಸ್ ಪಕ್ಷ ಜಯಭೇರಿ ಬಾರಿಸಿದೆ. ಕ್ಷೇತ್ರ ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸಿದ್ದ ಬಿಜೆಪಿ ಯತ್ನಗಳು ವಿಫಲವಾಗಿವೆ. ಇನ್ನೊಂದೆಡೆ, ಕ್ಷೇತ್ರದಲ್ಲಿ ಕಾಂಗ್ರೆಸ್ ನ ನೀರಸ ಪ್ರದರ್ಶನ ಮುಂದುವರಿದಿದೆ!
ಕಳೆದ ನಾಲ್ಕು ಚುನಾವಣೆಗಳಲ್ಲಿ ಸತತ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯುತ್ತಿರುವ ಶಾರದಾ ಪೂರ್ಯನಾಯ್ಕ್ ಅವರು, ಕಳೆದ ಬಾರಿಯ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ. ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್ ಅವರನ್ನು ಪರಾಭವಗೊಳಿಸುವಲ್ಲಿ ಸಫಲರಾಗಿದ್ದಾರೆ.
ಶಿವಮೊಗ್ಗ ಗ್ರಾಮಾಂತರ : ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯನಾಯ್ಕ್’ಗೆ ಒಲಿದ ವಿಜಯದ ಮಾಲೆ! Read More
