Shamanur Shivashankarappa Death : Senior Congress MLA Shamanur Shivashankarappa passes away Shamanur Shivashankarappa Death : ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

Shamanur Shivashankarappa Death : ಕಾಂಗ್ರೆಸ್​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ

ಬೆಂಗಳೂರು (bengaluru), ಡಿಸೆಂಬರ್ 14: ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ, ದೇಶದಲ್ಲಿಯೇ ಹಿರಿಯ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಶಾಮನೂರು ಶಿವಶಂಕರಪ್ಪ (95) ಅವರು ಡಿಸೆಂಬರ್ 14 ರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಇವರಿಗೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಸೇರಿದಂತೆ ನಾಲ್ವರು ಪುತ್ರರು ಹಾಗೂ ಮೂವರು ಪುತ್ರಿಯರಿದ್ದಾರೆ.

ನಾಳೆ ಅಂತ್ಯ ಸಂಸ್ಕಾರ : ಶ್ಯಾಮನೂರು ಶಿವಶಂಕರಪ್ಪ ಅವರು, ಕಳೆದ ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದೊಂದು ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ನಾಳೆ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ದಾವಣಗೆರೆಯಲ್ಲಿ ನೆರವೇರಲಿದೆ.

ಹಿರಿಯ ಶಾಸಕ : ಶಾಮನೂರು ಶಿವಶಂಕರಪ್ಪ ಅವರು 1931 ಜೂನ್‌ 16 ರಂದು ಶಾಮನೂರು ಕಲ್ಲಪ್ಪ – ಶಾಮನೂರು ಸಾವಿತ್ರಮ್ಮ ದಂಪತಿ ಪುತ್ರನಾಗಿ ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದ್ದರು. ದಾವಣಗೆರೆ ಕ್ಷೇತ್ರದಿಂದ ಸತತವಾಗಿ ಗೆಲ್ಲುತ್ತಾ ಬಂದಿದ್ದ ಅವರು, 6 ಬಾರಿ ಶಾಸಕರಾಗಿದ್ದರು. ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರಾಗಿದ್ದರು.  ತೋಟಗಾರಿಕೆ ಮತ್ತು ಕೃಷಿ ಮಾರುಕಟ್ಟೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆ ಉತ್ತರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ, ಪ್ರಸ್ತುತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸೊಸೆ ಪ್ರಭಾ ಮಲ್ಲಿಕಾರ್ಜುನ ಅವರು ಸಂಸದರಾಗಿದ್ದಾರೆ.

Shamanur Shivashankarappa (95), a senior Congress party MLA, national president of the All India Veerashaiva Maha Sabha, and considered the oldest MLA in the country, passed away on the evening of December 14 at a private hospital in Bengaluru.

Previous post ಮೌಢ್ಯ – ಕಂದಾಚಾರಗಳನ್ನು ಕೊನೆಗಾಣಿಸಬೇಕು : ಸಿಎಂ ಸಿದ್ದರಾಮಯ್ಯ
shimoga APMC vegetable prices | Details of vegetable prices for December 29 in shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 29 ರ ತರಕಾರಿ ಬೆಲೆಗಳ ವಿವರ Next post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 16 ರ ತರಕಾರಿ ಬೆಲೆಗಳ ವಿವರ